ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ

ಕೊಪ್ಪಳ: ರಾಜ್ಯಾಧ್ಯಂತಹ ಮೇ.೨೯ ರಂದು ಶಾಲೆಗಳು ಪ್ರಾರಂಭವಾಗುತ್ತಿದ್ದು,ಅದಕ್ಕೆ ಪೂರ್ವದಲ್ಲಿ ತಾಲೂಕಿನ ಬಹದ್ದೂರಬಂಡಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ವಿಶೇಷ ದಾಖಲಾತಿ ಆಂದೋಲನ ನಡೆಸುವ ಮೂಲಕ ಮಕ್ಕಳ ಮನೆಗಳಿಗೆ ಭೇಟಿ ನೀಡುವ ಮೂಲಕ ಮಕ್ಕಳನ್ನು ಶಾಲೆಗೆ ದಾಖಲು ಮಾಡಿಕೊಳ್ಳಲಾಯಿತು.
ಈ ಸಮಯದಲ್ಲಿ ಮುಖ್ಯೋಪಾಧ್ಯಾಯರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರು ಮಾತನಾಡಿ, ೬ ರಿಂದ ೧೪ ವರ್ಷದ ಎಲ್ಲಾ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ವ್ಯವಸ್ಥೆ ಜಾರಿಗೆ ಮಾಡಲಾಗಿದೆ.ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡುವ ಮಕ್ಕಳಿಗಾಗಿ ಉಚಿತ ಸಮವಸ್ತç,ಮಧ್ಯಾಹ್ನದ ಬಿಸಿಯೂಟ,ಪಠ್ಯಪುಸ್ತಕ ಸೇರಿದಂತೆ ಅನೇಕ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದ್ದು,ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡುವ ಮೂಲಕ ಎಲ್ಲಾ ಸೌಲಭ್ಯವನ್ನು ಪಡೆದುಕೊಳ್ಳಬೇಕು ಅಲ್ಲದೇ ನಮ್ಮ ಶಾಲೆಯಲ್ಲಿ ತಿಂಗಳಿಗೆ ಒಂದು ಬಾರಿ ಅರಿವಿನ ಅಂಗಳ ಕಾರ್ಯಕ್ರಮ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ ಭಾಗ್ಯ ಸೇರಿದಂತೆ ಅನೇಕ ಸೌಲಭ್ಯಗಳನ್ನು ಒದಗಿಸಿ ಕೊಡಲಾತ್ತದೆ ಆದ್ದರಿಂದ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ದಾಖಲು ಮಾಡಬೇಕು ಎಂದು ಹೇಳಿದರು.
ಈ ಶಿಕ್ಷಕರಾದ ಭಾರತಿ ಹವಳೆ,ಹನುಮಂತಪ್ಪ ಪಾಲಕರಾದ ಮಂಜುನಾಥ ಬನ್ನಿಕೊಪ್ಪರವರು ಹಾಜರಿದ್ದರು.
Comments are closed.