ಗಂಗಾವತಿ ಉಪಚುನಾವಣೆಗೆ SDPI ಯ ಅಭ್ಯರ್ಥಿ ಕಣಕ್ಕಿಳಿಸುವಂತೆ, ಸ್ಥಳೀಯ ಕಾರ್ಯಕರ್ತರ, ನಾಯಕರ ಒತ್ತಡ – ಅಂತಿಮ ತೀರ್ಮಾನ ಕೈಗೊಳ್ಳಲಿದೆ ರಾಜ್ಯ ಸಮಿತಿ
ಗಂಗಾವತಿ : ಮೇ-27: ಗಾಲಿ ಜನಾರ್ಧನ ರೆಡ್ಡಿ ಅವರು ವಿಧಾನಸಭೆಯ ಸದಸ್ಯತ್ವದಿಂದ ಅನರ್ಹರಾಗಿರುವ ಕಾರಣ ತೆರವಾಗಿರುವ ಗಂಗಾವತಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿಯಲು ಗಂಗಾವತಿ ತಾಲ್ಲೂಕು ಮತ್ತು ಜಿಲ್ಲಾ ನಾಯಕರುಗಳು ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿಗಳ ಮೇಲೆ ಒತ್ತಡವನ್ನು ಹೇರಿದ ಕಾರಣ ಈ ಸಂಬಂಧ ಮುಂದಿನ ರಾಜ್ಯ ಸಮಿತಿಯಲ್ಲಿ ಚರ್ಚೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಅಲ್ಲಿಯ ವರೆಗೆ ಜಿಲ್ಲಾ ಹಾಗೂ ರಾಜ್ಯಮಟ್ಟದ ನಾಯಕರು ಕ್ಷೇತ್ರದ ಎಲ್ಲಾ ಮತದಾರರು ಬದಲಾವಣೆಗಾಗಿ, ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ಜನಪರ ಆಡಳಿತಕ್ಕಾಗಿ ಹಾತೂರೆಯುತಿದ್ದು, SDPI ಪಕ್ಷಕ್ಕೆ ಬೆಂಬಲ ನೀಡುವ ಉದ್ದೇಶವಿದೆ ಹಾಗಾಗಿ ಪಕ್ಷದ ನಾಯಕರುಗಳು ಉಪಚುನಾವಣೆಯನ್ನು ಗಮನದಲ್ಲಿಟ್ಟು, ಗಂಗಾವತಿಯಲ್ಲಿ ಸಕ್ರಿಯ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಲು ತಯಾರಿ ನಡೆಸಲು, ಶೀಘ್ರ ಜನರೊಂದಿಗೆ ನೇರ ಸಂವಾದ ಹಮ್ಮಿಕೊಳ್ಳಲು ಮತ್ತು ತಳ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆಯಲು ನಿರ್ದೇಶನ ನೀಡಿದರು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ವಹಿಸಿದ್ದರು. ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ರವರು ಉಪಸ್ಥಿತರಿದ್ದರು.
ಇಂದು ನಡೆದ ಚುನಾವಣಾ ನಿರ್ವಹಣಾ ತರಬೇತಿ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ಹನ್ನಾನ್ ರವರು ಕ್ಷೇತ್ರದಲ್ಲಿ ಜ್ವಲಂತ ಸಮಸ್ಯೆಗಳಿಂದಾಗಿ ಬಡವರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳು ಅಭಿವೃದ್ಧಿಯಿಂದ ವಂಚಿತರಾಗಿದ್ದಾರೆ. ಇದಕ್ಕೆ ಕಾರಣವಾಗಿರುವ ವ್ಯವಸ್ಥಿತ ರಾಜಕೀಯ ನಿರ್ಲಕ್ಷ್ಯತೆಯನ್ನು ಪ್ರಶ್ನಿಸಲು ಮತ್ತು ಜನಪರ ಪರ್ಯಾಯವನ್ನು ನಿರ್ಮಿಸಲು ಕರೆ ನೀಡಿದರು. ಸಾರ್ವಜನಿಕ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ಹಾಗೂ ಉದ್ಯೋಗದಂತಹ ಮೂಲಭೂತ ಸೌಲಭ್ಯಗಳ ಸುಧಾರಣೆ, ಶೋಷಿತ ಸಮುದಾಯಗಳ ನ್ಯಾಯಕ್ಕಾಗಿ ಧ್ವನಿಯಾಗುವುದು, ಧರ್ಮನಿರಪೇಕ್ಷತೆ, ಸಾಮಾಜಿಕ ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬದ್ಧತೆ ಹಾಗೂ ಪಾರದರ್ಶಕ ಆಡಳಿತಕ್ಕಾಗಿ ಭ್ರಷ್ಟಾಚಾರ ವಿರೋಧಿ ರಾಜಕಾರಣವನ್ನು ಪ್ರೋತ್ಸಾಹಿಸುವುದು ಎಸ್‌ಡಿಪಿಐ ಪಕ್ಷದ ಮುಖ್ಯ ಉದ್ದೇಶವಾಗಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರದಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ರವರು ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಸಾಕಿಬ್, ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ರಸೂಲ್, ಕಾರ್ಯದರ್ಶಿಗಳಾದ ರಝೀ ಉರ್ ರೆಹಮಾನ್ ಮತ್ತು ಚಾಂದ್ ಸಲ್ಮಾನ್
ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳ ನಾಯಕರುಗಳು ಭಾಗವಹಿಸಿದ್ದರು
Comments are closed.