ಉಚಿತ ತರಬೇತಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

Get real time updates directly on you device, subscribe now.

ಕನಕಗಿರಿ ತಾಲ್ಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಶಂಶಾದಬೇಗ್ಂ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ‌ ಸಚಿವ ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿಯಾಗಿ ಸಂಘದ ಶೈಕ್ಷಣಿಕ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು

ಕನಕಗಿರಿ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ಕಳೆದ ಮೂರು ವರ್ಷಗಳಿಂದಲೂ ನಡೆಯುತ್ತಿರುವ ನವೋದಯ, ಮೊರಾರ್ಜಿ ದೇಸಾಯಿ, ಎನ್ ಎಂಎಂಎಸ್, ಆದರ್ಶ ವಿದ್ಯಾಲಯ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಯ ತರಬೇತಿ ಹಾಗೂ ಇತರೆ ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು

ಶ್ಲಾಘನೆ ಮಾಡಿದ್ದಾರೆ ಎಂದು ಸಂಘದ ಅಧ್ಯಕ್ಷೆ ಶಂಶಾದಬೇಗ್ಂ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಅವರು ಈ ವಿಷಯ ತಿಳಿಸಿದ್ದಾರೆ.
ಪ್ರಾಥಮಿಕ ಶಾಲೆಗಳಿಗೆ‌ ಡೈಜಿಸ್ಟ್, ವಿದ್ಯಾರ್ಥಿಗಳಿಗೆ ಉಚಿತ‌ ನೋಟ್ ಬುಕ್ ವಿತರಣೆ , ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿರುವುದು ಒಳ್ಳೆಯ ಕೆಲಸವಾಗಿದೆ
2025-26ನೇ ಸಾಲಿನ ಸಂಘದ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ
ಎನ್ ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ಸಂಪನ್ಮೂಲ ಶಿಕ್ಷಕರ
ಸನ್ಮಾನ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುವುದಾಗಿ ಸಚಿವರು ತಿಳಿಸಿದರು. ಈ ಸಮಯದಲ್ಲಿ
ಶಿಕ್ಷಕಿ ಪುಷ್ಪಾಲತಾ ಇದ್ದರು.

Get real time updates directly on you device, subscribe now.

Comments are closed.

error: Content is protected !!