ಕೆಲಸ ಮಾಡಲಾಗದಿದ್ರೆ ವರ್ಗಾವಣೆ ಪಡೆಯಿರಿ-ಸಚಿವ ತಂಗಡಗಿ ಖಡಕ್ ವಾರ್ನಿಂಗ್
ಕನಕಗಿರಿ: ಕೃಷಿ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ರೈತರಿಗೆ ಒದಗಿಸಬೇಕು ಈ ವಿಷಯದಲ್ಲಿ ಪ್ರತಿಯೊಬ್ಬರು ಜಾಗೃತಿಯಿಂದ ಕೆಲಸ ಮಾಡಬೇಕು, ತಾಲ್ಲೂಕಿನಲ್ಲಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು ಹಿಂದುಳಿದ ವರ್ಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೂಚನೆ ನೀಡಿದರು.
ಕನಕಗಿರಿ ಪಟ್ಟಣದ ಶ್ರೀಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾನುವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು, ಯಾವುದೇ ಕಾರಣಕ್ಕೂ ವಿಳಂಬವಾಗಬಾರದು, ಅಗತ್ಯ ದಾಸ್ತಾನು ಸಂಗ್ರಹಿಸಿಕೊಂಡು ರೈತರಲ್ಲಿ ಭರವಸೆ ಮೂಡಿಸಬೇಕು ಸರ್ಕಾರಕ್ಕೆ ಹೆಸರು ತರುವಂತೆ ಕೆಲಸ ಮಾಡಿ, ಇಲ್ಲದಿದ್ದರೆ ವರ್ಗಾವಣೆ ಪಡೆದುಕೊಂಡು ಹೋಗಿ ಎಂದು ಸಲಹೆ ನೀಡಿದರು.
ಈಚೆಗೆ ಸುರಿದ ಮಳೆಯಿಂದ ಬಾಳೆ, ಪಪ್ಪಾಯಿ ಬೆಳೆಹಾನಿಯಾಗಿದ್ದು ಬೆಳೆ ಪರಿಹಾರ ಸಾಲುವುದಿಲ್ಲ, ಹೆಚ್ಚಿನ ಪರಿಹಾರ ನೀಡುವಂತೆ ಕೋರಿ ಮೇಲಾಧಿಕಾರಿಗಳಿಗೆ ಪತ್ರ ಬರೆಯಿರಿನಾನೂ ಸಹ ಮುಖ್ಯಮಂತ್ರಿ, ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಬೆಳೆ ಪರಿಹಾರ ಕೊಡಿಸುತ್ತೇನೆ ಎಂದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ತೀರ ನಿರ್ಲಕ್ಷ್ಯ ವಹಿಸಿರುವುದು ಗಮನಕ್ಕೆ ಬಂದಿದೆ, ಕಳೆದ ನಾಲ್ಕು ವರ್ಷವೂ ಮಳೆ ಸುರಿದು ತುಂಗಭದ್ರಾ ನದಿ ಭರ್ತಿಯಾಗಿದ್ದರೂ ಈ ಭಾಗದ ಕೆರೆಗಳಿಗೆ ನೀರು ಪೂರೈಸಿಲ್ಲ, ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಅಧಿಕಾರಿಗಳ ಈ ಅಸಡ್ಡೆ ಮನೋಭಾವನೆ ಸರಿಯಲ್ಲ, ನೀರಿನ ವಿಷಯದಲ್ಲಿ ಹುಡುಗಾಟ ಮಾಡಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ತಂಗಡಗಿ ಎಚ್ಚರಿಕೆ ನೀಡಿದರು.
ಕೆರೆಗಳಿಗೆ ನೀರು ತುಂಬಿಸುವ ಎರಡನೇಯ ಹಂತದ ಯೋಜನೆಯ ಕಾಮಗಾರಿ ತೀರ ಕಳಪೆ ಗುಣಮಟ್ಟದಲ್ಲಿ ನಿರ್ಮಿಸಲಾಗಿದೆ, ಬ್ರಿಡ್ಡ್ ಕಂ ಬ್ಯಾರೇಜ್ ನಿರ್ಮಾಣದ ಕೆಲಸ ತೃಪ್ತಿಕರವಾಗಿಲ್ಲ ಎಂದು ಅಧಿಕಾರಿ ಸೆಲ್ವಕುಮಾರರನ್ನು ತರಾಟೆಗೆ ತೆಗೆದುಕೊಂಡರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಗಳ ನಿರ್ಮಾಣದಲ್ಲಿಯೂ ಕಳಪೆ ಗುಣಮಟ್ಟದ ಕೆಲಸಗಳು ನಡೆದಿವೆ ಈ ಬಗ್ಗೆಯೂ ದೂರು ಬಂದಿದ್ದು ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಸರಿಪಡಿಸಬೇಕು ಎಂದು ತಾಕೀತು ಮಾಡಿದರು.
ಮುಸಲಾಪುರ ಗ್ರಾಮದ ವಸತಿ ನಿಲಯದ ಕಟ್ಟಡ ಕಾಮಗಾರಿಯ ಕೆಲಸ ಈ ಹಿಂದೆ ತಾವು ಸಚಿವರಾಗಿದ್ದ ಸಮಯದಲ್ಲಿ ಆರಂಭವಾಗಿತ್ತು, ಇಲ್ಲಿ ವರೆಗೆ ಪೂರ್ಣಗೊಳಿಸಿಲ್ಲ ಎಂದು ಹೇಳಲು ನಾಚಿಕೆ ಆಗುವುದಿಲ್ಲವಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಕೂಡಲೆ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು, ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ಆಶ್ರಮ ಶಾಲೆಗಳನ್ನು ಕ್ಷೇತ್ರದಲ್ಲಿ ತೆರೆಯಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಮಿನಿ ವಿಧಾನಸೌಧ ನಿರ್ಮಾಣ: ಕಾರಟಗಿ ಹಾಗೂ ಪಟ್ಟಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುವುದು ಈಗಾಗಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನುದಾನ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ, ನಿವೇಶ ತಾಲ್ಲೂಕಿನ ನಾಲ್ಕು ದಿಕ್ಕುಗಳಲ್ಲಿಯೂ 25-30 ಎಕರೆ
ನವಗ್ರಾಮ ಯೋಜನೆಯ ನಿವೇಶನ ಹಾಗೂ ವಸತಿ ಫಲಾಭವಿಗಳಿಗೆ ಶೀಘ್ರವೆ ಹಕ್ಕು ಪತ್ರ ವಿತರಣೆ ಮಾಡಲಾಗುವುದು, ಹಾಗೂ 16ನೇ ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಅಗತ್ಯ ಕ್ರಮ ತೆಗೆದುಕೊಳ್ಳಬೇಕು , 5ಸರಬರಾಜು ಮಾಡುವಂತೆ ಸೂಚಿಸಿದರು.
ಐತಿಹಾಸಿಕ ಪ್ರಸಿದ್ದಿ ಕನಕಾಚಲಪತಿ ತೇರು ಸುಗಮವಾಗಿ ಸಾಗಲು ರಾಜಬೀದಿಯಲ್ಲಿ ಸಿಮೆಂಟ್ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗುವದು, ಪಟ್ಟಣ ಸುಂದರೀಕರಣ ಹಾಗೂ ಗ್ರಾಮೀಣಾಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಸುಸಜ್ಜಿತ ಚರಂಡಿ, ಸಿಸಿ ರಸ್ತೆ ಇತರೆ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ತಾಲ್ಲೂಕಿನಲ್ಲಿ ಸ್ಥಾಪಿಸಲು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಬೇಕು, ತಹಶೀಲ್ದಾರ್ ಹಾಗೂ ತಾಪಂ ಇಒ ಸೇರಿದಂತೆ ಆಯಾ ಇಲಾಖೆಯ ಅಧಿಕಾರಿಗಳು ವಸತಿ ಶಾಲೆ ಹಾಗೂ ವಸತಿ ನಿಲಯಗಳಿಗೆ ಪ್ರತಿ ವಾರ ಭೇಟಿ ನೀಡಿ ಆಹಾರ ಗುಣಮಟ್ಟ ಪರೀಕ್ಷಿಸಲು ಊಟ ಮಾಡಬೇಕು, ತಾವು ಸಹ ಈ ಕೆಲಸ ಮಾಡುವುದಾಗಿ ತಿಳಿಸಿದರು.
ಮುಸಲಾಪುರ 33ಕೆವಿ ಮೇಲ್ದರ್ಜೆಗೆ: ಮುಸಲಾಪುರ ಗ್ರಾಮದ 33ಕೆವಿ ವಿದ್ಯುತ್ ಸರಬರಾಜು ಕೇಂದ್ರವನ್ನು 110ಕೆವಿ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು, ಅಗತ್ಯವಾದ ಜಾಗ ಗುರುತಿಸುವಂತೆ ಜೆಸ್ಕಾ ಇಲಾಖೆ ಎಂಜಿನಿಯರ್ ಗೆ ಸೂಚಿಸಿದರು.
110 ಬೆಡ್ ಆಸ್ಪತ್ರೆ: ರೋಗಿಗಳು, ಗರ್ಣಿಣಿಯರು ಹಾಗೂ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಮಾಡಲು ಪಟ್ಟಣ ವ್ಯಾಪ್ತಿಯಲ್ಲಿಯೆ 100 ಬೆಡ್ ಆಸ್ಪತ್ರೆ ಕಟ್ಟಡ ನಿರ್ಮಿಸಲು ತೀರ್ಮಾನಿಸಲಾಗಿದೆ, ಸೂಕ್ತ ಜಾಗ ಗುರುತಿಸಿ ಕ್ರಮ ತೆಗೆದುಕೊಳ್ಳಲಾಗುವುದು, ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರಿ ಮಾಡಲಾಗುತ್ತಿದೆ ಎಂದರು. ತಾಲ್ಲೂಕಿನಲ್ಲಿ ಇಸ್ಪೀಟ್, ಮಟ್ಕಾ, ಅಕ್ರಮ ಮರಳುಗಾರಿಕೆ ದಂಧೆ ನಿಯಂತ್ರಿಸಲು ಪಿಐ ಜಗದೀಶ ಅವರಿಗೆ ಸೂಚಿಸಿದರು. ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಲೋಕೋಪಯೋಗಿ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ತಹಶೀಲ್ದಾರ್ ಸಂಜಯ ಕಾಂಬ್ಳೆ, ತಾಪಂ ಪ್ರಭಾರ ಇಒ ಚಂದ್ರಶೇಖರ ಕಂದಕೂರು ಇದ್ದರು. ಸಭೆಗೆ ಗೈರು ಹಾಜರಿಯಾದ ಪಶು ಸಂಗೋಪನೆ ಇತರೆ ಅಧಿಕಾರಿಗಳಿಗೆ ನೋಟಿಸ್ ನೀಡಲು ಇದೇ ಸಮಯದಲ್ಲಿ ಸೂಚಿಸಿದರು.
Comments are closed.