ಪಡಿತರ ಕಾರ್ಡುಗಳಲ್ಲಿ ತಿದ್ದುಪಡಿ, ಸೇರ್ಪಡೆಗೆ ಆ. 24ರಂದು ಅವಕಾಶ
ಕೊಪ್ಪಳ : ಪಡಿತರ ಕಾರ್ಡುಗಳಲ್ಲಿ ಕುಟುಂಬದ ಮುಖ್ಯಸ್ಥರ ತಿದ್ದುಪಡಿ ಹಾಗೂ ಸದಸ್ಯರ ಸೇರ್ಪಡೆ ಕ್ರಮಕ್ಕೆ ಆಹಾರ ತಂತ್ರಾಂಶದಲ್ಲಿ ಆಗಸ್ಟ್ 24ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.
ಕಾರ್ಡುದಾರರು ಸಮೀಪದ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಸಿಎಸ್‌ಸಿ ಸೆಂಟರ್‌ಗಳಿಗೆ ಭೇಟಿ ನೀಡಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಈ ವರೆಗೂ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ಹಾಗೂ ಸದಸ್ಯರು ಈ ತಿಂಗಳ ಅಂತ್ಯದವರೆಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.