ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಆಹ್ವಾನ
ಬೆಂಗಳೂರು:
ಚಾಮರಾಜನಗರ ಜಿಲ್ಲೆ ಮಲೆಮಹದೇಶ್ವರ ಬೆಟ್ಟದಲ್ಲಿ ಜೂನ್ 21ರಂದು ಶನಿವಾರ ನಡೆಯಲಿರುವ, ಪತ್ರಕರ್ತರ ಮಕ್ಕಳ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ಮಾಡಿ ಆಹ್ವಾನಿಸಿದರು.
ಚಾಮರಾಜನಗರ ಜಿಲ್ಲ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಸಚಿವರಿಗೆ ವಿವರ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಜಿಲ್ಲಾಡಳಿತಕ್ಕೆ ಸೂಚನೆ ನೀಡುವುದಾಗಿ ತಿಳಿಸಿದರು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಂದು ತಾವು ಕೂಡ ಭಾಗವಹಿಸುವುದಾಗಿಯೂ ತಿಳಿಸಿದರು.