ಜಿಲ್ಲೆಯಾದ್ಯಂತ ತ್ಯಾಗ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬ ಆಚರಣೆ
ಕೊಪ್ಪಳ ಕೊಪ್ಪಳ ಜಿಲ್ಲೆಯಾದ್ಯಂತ ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲೆಯ ವಿವಿಧಡೆ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಕೊಪ್ಪಳ ನಗರದ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಅದೇ ರೀತಿ ಗಂಗಾವತಿ ಕನಕಗಿರಿ ಕಾರಟಗಿ ಯಲಬುರ್ಗಾ ಹಾಗೂ ಕುಕನೂರ್ ತಾಲೂಕುಗಳಲ್ಲಿಯೂ ಸಹ ಬೃಹತ್ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಸ್ಲಿಂ ಬಾಂಧವರು ಪಾಲ್ಗೊಂಡು ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.




ಈ ಸಂದರ್ಭದಲ್ಲಿ ಸಂಸದ ರಾಜಶೇಖರ ಹಿಟ್ನಾಳ್ ಶಾಸಕ ರಾಘವೇಂದ್ರ ಹಿಟ್ನಾಳ್ ಮಾಜಿ ಸಂಸದ ಸಂಗಣ್ಣ ಕರಡಿ ನಗರಸಭೆ ಅಧ್ಯಕ್ಷ ಪಟೇಲ್ ಮುಖಂಡರಾದ ಕಾಟನ್ ಪಾಷಾ ಕೆಎಂ ಸೈಯದ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಕಾರಟಗಿಯಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವ ಶಿವರಾಜ್ ತಂಗಡಗಿ ಭಾಗವಹಿಸಿದ್ದರು.