ಪಂಚಮಸಾಲಿ ಕಾರಟಗಿ ತಾಲ್ಲೂಕು ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ: ಸಚಿವ ಶಿವರಾಜ್ ತಂಗಡಗಿ ಭರವಸೆ

Get real time updates directly on you device, subscribe now.

ಕಾರಟಗಿ: ಜೂ.15

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೊಪ್ಪಳ ಜಿಲ್ಲಾ ಪಂಚಮಸಾಲಿ ಸಮುದಾಯ ಭವನದ ಮುಂದುವರೆದ ಕಾಮಗಾರಿಗೆ ಒಂದು ಕೋಟಿ ಹಾಗೂ ಕಾರಟಗಿ ತಾಲ್ಲೂಕು ಪಂಚಮಸಾಲಿ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಭರವಸೆ ನೀಡಿದರು.

ಪಂಚಮಸಾಲಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಶ್ರೀ ಕೆರೆ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಪಂಚಮಸಾಲಿ‌‌ ಪೀಠದ ವಚನಾನಂದ ಶ್ರೀಗಳ‌‌ ದಿವ್ಯ ಸಾನ್ನಿಧ್ಯದಲ್ಲಿ‌ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾ ಸಮುದಾಯ ಭವನ ನಿರ್ಮಾಣಕ್ಕೆ ಈಗಾಗಲೇ ಒಂದು ಕೋಟಿ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ಅನುದಾನ ನೀಡಲಾಗುವುದು.
ಕಾರಟಗಿ ತಾಲ್ಲೂಕು ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ನನ್ನ ಗೆಲುವಿನಲ್ಲಿ ಪಂಚಮಸಾಲಿ ಸಮುದಾಯದ ಪಾತ್ರ ಹೆಚ್ಚಿದೆ. ನಾನು ಲಕ್ಕಿಯಲ್ಲ, ಕನಕಗಿರಿ ಕ್ಷೇತ್ರದ ಜನರ ಆಶೀರ್ವಾದದಿಂದ ಲಕ್ಕಿಯಾಗಿದ್ದೇನೆ ಎಂದರು.

ಶಿಕ್ಷಣದಿಂದ ಸಾಧನೆ ಸಾಧ್ಯ:
ಸಮಾಜದ ಬೆಳವಣಿಗೆ ಆಗಬೇಕಾದರೆ ಸಂವಿಧಾನ ಶಿಲ್ಪಿ ಡಾ.ಬಿ.ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಅಗತ್ಯವಿದೆ. ಶಿಕ್ಷಣದಿಂದ ಯಾವುದೇ ಸಾಧನೆ ಮಾಡಲು ಸಾಧ್ಯ. ಸಮಾಜದ ಸಂಘಟನೆ ಆಗಬೇಕಾದರೆ, ಶಿಕ್ಷಣದ ಅಗತ್ಯವಿದೆ. ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳಿಂದ ಮಕ್ಕಳಿಗೆ ಇನ್ನಷ್ಟು ಉತ್ಸಾಹ ಬರಲಿದೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಪಂಚಮಸಾಲಿ ಸಮುದಾಯ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ ಎಂದು ಶ್ಲಾಘಿಗಿಸಿದರು.

ನಾನು ನಿಮ್ಮ ಸಮಾಜದ ಜತೆ ಸದಾ ಇರುತ್ತೇನೆ. ವಡ್ಡರ ಯಲ್ಲಪ್ಪನನ್ನು ಕಿತ್ತೂರು ರಾಣಿ ಚೆನ್ನಮ್ಮ ತನ್ನ ಹಿಂದೆ ಕರೆದುಕೊಂಡು ಹೋದ ಹಾಗೇ, ನೀವು ಇದೀಗ ನನ್ನನ್ನು ನಿಮ್ಮ ಸೇವಕನನ್ನಾಗಿ ಕರೆದುಕೊಂಡು ಹೋಗುತ್ತಿದ್ದೀರಾ. ನಾನು ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಸಂಸದರಾದ ಕರಡಿ ಸಂಗಣ್ಣ, ಶಿವರಾಮೇಗೌಡ, ಮಾಜಿ ಶಾಸಕ ಬಸವರಾಜ ದಡೇಸಗೂರು, ಡಾ.ಬಸವರಾಜ್ ಕ್ಯಾವಟರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಡಿಸೆಂಬರ್ ನಲ್ಲಿ ಕಾಂಗ್ರೆಸ್ ನಲ್ಲಿ ಹುದ್ದೆಗಾಗಿ ಕಲಹ ಶುರುವಾಗಲಿದೆ ಎಂಬ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ ಅವರು, ವಿಶ್ವನಾಥ್ ಅವರು ಏನು ನಮ್ಮ ಹೈಕಮಾಂಡ ಎಂದು ಖಾರವಾಗಿ ಪ್ರಶ್ನಿಸಿದರು.

ಬಿಜೆಪಿಯವರ ಹಾಗೇ ಕಚ್ಚಾಡಿಕೊಂಡು ಹೋಗುವ ಪಕ್ಷ ನಮ್ಮದಲ್ಲ. ಕಾಂಗ್ರೆಸ್ ಪಕ್ಷ ತನ್ನದೇ ಆದ ತತ್ವ ಸಿದ್ಧಾಂತವನ್ನು ಹೊಂದಿದ್ದು, ನಮ್ಮ ಹೈಕಮಾಂಡ್ ಗಟ್ಟಿಯಾಗಿದೆ ಎಂದು ಹೇಳಿದರು.

ಶಾಸಕರಿಗೆ ಸಚಿವರಾಗಬೇಕೆಂಬ ಆಕಾಂಕ್ಷೆ ಎಲ್ಲರಿಗೂ ಇರಲಿದೆ, ಅದು ತಪ್ಪಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

Get real time updates directly on you device, subscribe now.

Comments are closed.

error: Content is protected !!