ಕರ್ನಾಟಕ ಜಾನಪದ ಅಕಾಡೆಮಿಯ ಸ್ಥಾಯಿ ಸಮಿತಿಗೆ ನೇಮಕ

ಕೊಪ್ಪಳ : ಜಿಲ್ಲೆಯ ಅಂತರಾಷ್ಟ್ರೀಯ ಜಾನಪದ ಹಾಡುಗಾರ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯರಾದ ಮೆಹಬೂಬ್ ಕಿಲ್ಲೇದಾರ್ ಅವರನ್ನು 2025 – 2026 ನೇ ಸಾಲಿಗೆ ಕರ್ನಾಟಕ ಜಾನಪದ ಅಕಾಡೆಮಿಯ ಸ್ಥಾಯಿ ಸಮಿತಿಯ ಸದಸ್ಯರಾಗಿ ನೇಮಕ ಮಾಡಿ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಶ್ರೀಮತಿ ನಮ್ರತಾ ಅವರು ಆದೇಶ ಹೊರಡಿಸಿದ್ದಾರೆ. ಅಕಾಡೆಮಿಯ ಅಧ್ಯಕ್ಷರಾದ ಡಾ. ಶಿವಪ್ರಸಾದ ಗೊಲ್ಲಹಳ್ಳಿಯವರ ಮಾರ್ಗದರ್ಶನದಲ್ಲಿ ವರ್ಷದುದ್ದಕ್ಕೂ ಕಾರ್ಯಕ್ರಮಗಳು ನಡೆಯುತ್ತವೆ.
ಪ್ರಸ್ತುತ ಸಾಲಿನಲ್ಲಿ ಜರುಗುವ ಕರ್ನಾಟಕ ಜಾನಪದ ಅಕಾಡೆಮಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅಕಾಡೆಮಿಯ ಹಿರಿಮೆಯನ್ನು ಹೆಚ್ಚಿಸುವಲ್ಲಿ ತಮ್ಮ ಭಾಗವಹಿಸುವಿಕೆ ಪ್ರಮುಖ ಎಂದಿದ್ದಾರೆ. ಈ ಸಂದರ್ಭದಲ್ಲಿ ಕಾರಟಗಿಯ ಶ್ರೀ ಶರಣಬಸವೇಶ್ವರರ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಎಸ್ ಬಿ ಶೆಟ್ಟರ್, ಉಪಾಧ್ಯಕ್ಷರಾದ ಜಗದೀಶಪ್ಪ ಅವರಾದಿ, ಕಾರ್ಯದರ್ಶಿಗಳಾದ ಚಂದ್ರಶೇಖರ ಸೋಮಲಾಪೂರ ಹಾಗೂ ಸರ್ವ ಸದಸ್ಯರು ಮತ್ತು ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಹಾಗೂ ಸ್ನೇಹಿತರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Comments are closed.