ರೆಡ್ ಕ್ರಾಸ್ ಸಮಾಜಮುಖಿ ಕಾರ್ಯ ಹತ್ತುಹಲವು – ಸಿದ್ದರಾಮೇಶ್ವರ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೇವಲ ರಕ್ತಭಂಡಾರವನ್ನಷ್ಟೇ ನಡೆಸುವುದಿಲ್ಲ. ವಿಪತ್ತು ನಿರ್ವಹಣೆ ಸೇರಿದಂತೆ ಹತ್ತುಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಜೆ.ಚ್. ಪಟೇಲ್ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆ ಹಮ್ಮಿಕೊಂಡಿದ್ದ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಮಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಸಹಾಯಕರಿಗೆ ಸಹಾಯ ಮಾಡುವುದು, ನೊಂದವರಿಗೆ ನೆರವು ನೀಡುವುದು, ವಿಪತ್ತು ಸಂದರ್ಭದಲ್ಲಿ ತುರ್ತು ಪರಿಹಾರ ಮತ್ತು ಚಿಕಿತ್ಸೆಯನ್ನು ನೀಡುವ ಅಂತರಾಷ್ಟ್ರೀಯ ಮಟ್ಟದ ಸಂಸ್ಥೆಯಾಗಿದೆ. ಕೊಪ್ಪಳದಲ್ಲಿನ ತನ್ನ ಶಾಖೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜ ಟಿ.ಅವರು ಮಾತನಾಡಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬ್ಲಡ್ ಬ್ಯಾಂಕ್ ಇರುವುದರಿಂದಲೇ ಜಿಲ್ಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೂ ಸಹಕಾರಿಯಾಗಿದೆ. ಹೆರಿಗೆ ಸಂದರ್ಭದಲ್ಲಿ ಬೇಕಾಗುವ ರಕ್ತ ಸುಲಭವಾಗಿ ದೊರೆಯುವುದರಿಂದ ಬೇರೆ ಬೇರೆ ಜಿಲ್ಲೆಯವರು ಇಲ್ಲಿಗೆ ಹೆರಿಗೆಗೆ ಬರುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ರಕ್ತಬೇಕಾದಗೂ ಕೊಪ್ಪಳ ಬ್ಲಡ್ ಬ್ಯಾಂಕಿನಿಂದ ನಾನೇ ಕಳುಹಿಸಿಕೊಟ್ಟಿದ್ದೇನೆ. ರೆಡ್ ಕ್ರಾಸ್ ಸಂಸ್ಥೆಯವರು ನಿಜಕ್ಕೂ ಸಾಕಷ್ಟು ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆ. ಹಳ್ಳಿ ಹಳ್ಳಿಯಲ್ಲಿಯೂ ಜಾಗೃತಿ ಮೂಡಿಸಿದ್ದಾರೆ ಎಂದರು.
ಅರ್ಹ ಫಲಾನುಭಿಗಳಿಗೆ ಕನ್ನಡಕ, ಶ್ರವಣಸಾಧನ ಹಾಗೂ ಜಿಲ್ಲಾಸ್ಪತ್ರೆ, ತಾಲೂಕು ಕಚೇರಿ ಹಾಗೂ ರೈಲ್ವೆ ನಿಲ್ದಾಣಗಳಿಗೆ ವೀಲ್ ಚೇರ್ ವಿತರಣೆ ಮಾಡಲಾಯಿತು. ಹೆಚ್ಚುಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಶಾಖೆ ಸಭಾಪತಿ ಸೋಮರಡ್ಡಿ ಅಳವಂಡಿ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾ ಸಂಸ್ಥೆಯ ರಾಜ್ಯ ಶಾಖೆಯ ಉಪಸಭಾಪತಿ ಡಾ. ಶ್ರೀನಿವಾಸ ಹ್ಯಾಟಿ ಪ್ರಸ್ಥಾವಿಕವಾಗಿ ಮಾತನಾಡಿ, ಅಮೃತಾ ಸಜ್ಜನ ಪ್ರಾರ್ಥನಾ ಗೀತೆ ಹಾಡಿದರು. ಶಿವನಗೌಡ ಪಾಟೀಲ್ ಸ್ವಾಗತಿಸಿದರು. ರಮೇಶ ತುಪ್ಪದ ವಂದನಾರ್ಪಣೆ ಮಾಡಿದರು. ಡಾ. ಮಂಜುನಾಥ ಸಜ್ಜನ ಕಾರ್ಯಕ್ರಮ ನಿರೂಪಿಸಿದರು.
ಡಾ. ರವಿಕುಮಾರ ದಾನಿ, ಶಿವಕುಮಾರ ದಾನರಡ್ಡಿ, ಡಾ. ಗವಿ ಪಾಟೀಲ್ ಇದ್ದರು.
Comments are closed.