ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ನಾಡಪ್ರಭು ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ಜಿಲ್ಲಾಧಿಕಾರಿ ಕಛೇರಿಯ ಲೆಕ್ಕಪರಿಶೋಧಕ ಹರೀಶ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಜಿಲ್ಲಾಧಿಕಾರಿ ಕಛೇರಿಯ ಪ್ರಥಮ ದರ್ಜೆ ಸಹಾಯಕ ವಿಜಯ್ ಪುರಾಣಿಕ, ಸುನೀತಾ ಗಾಯಕ್ವಾಡ್, ರುಕ್ಮಾ ದೋತ್ರೆ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Comments are closed.