ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ

Get real time updates directly on you device, subscribe now.

ಬೆಂಗಳೂರು :
ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀfಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದರು.

ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹೈಯರ್ ಪೆನ್ಷನ್ ಪಡೆಯುವ ಬಗ್ಗೆ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅವು ಅನೇಕ ತಿಂಗಳಿನಿಂದ ಇತ್ಯರ್ಥ ಕಾಣದೆ ಪತ್ರಕರ್ತರು ಅದರಲ್ಲೂ ನಿವೃತ್ತ ನೌಕರರು ತೀವ್ರ ಆರ್ಥಿಕ ಸಮಸ್ಯೆಗೆ ತುತ್ತಾಗಿರುವ ಸಂಗತಿಯನ್ನು ನಿಯೋಗ ಸಚಿವರ ಗಮನಕ್ಕೆ ತಂದಿತು. ಅನೇಕ ಪತ್ರಕರ್ತರು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಿಂದ ಬಂದ ಡಿಮ್ಯಾಂಡ್ ನೋಟ್ ಅನುಸಾರ ಹೆಚ್ಚುವರಿ ಮೊತ್ತವನ್ನು ಜನವರಿ ತಿಂಗಳಲ್ಲೇ ಪಾವತಿ ಮಾಡಿದ್ದಾರೆ, ಇದುವರೆವಿಗೂ ಇದು ಇತ್ಯರ್ಥವಾಗಿಲ್ಲ. ಆರು ತಿಂಗಳಿನಿಂದ ಕಟ್ಟಿದ ದುಡ್ಡಿಗೆ ಬಡ್ಡಿಯೂ ಇಲ್ಲ ಹೆಚ್ಚಿನ ಪೆನ್ಷನ್ನೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ನಿಯೋಗ ವಾಸ್ತವ ಚಿತ್ರಣವನ್ನು ಸಚಿವರ ಮುಂದೆ ತೆರೆದಿಟ್ಟಿತು.

ಈ ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ , ಈಗಾಗಲೇ ಡಿಮಾಂಡ್ ನೋಟ್ ವಿತರಿಸಿ ಹಣ ಕಟ್ಟಿಸಿಕೊಂಡ ಉದ್ಯೋಗಿಗಳ ಅರ್ಜಿಯನ್ನು ಕೂಡಲೇ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಕೆಲವು ಸಂಸ್ಥೆಗಳ ಭವಿಷ್ಯ ನಿಧಿಯನ್ನು ಆಯಾ ಸಂಸ್ಥೆಗಳ ಟ್ರಸ್ಟ್ ಗಳೇ ನಡೆಸುತ್ತಿದ್ದು ತಾಂತ್ರಿಕ ಕಾರಣದ ಮೇಲೆ ಇಂಥ ಅರ್ಜಿಗಳು ತಿರಸ್ಕಾರ ಗೊಂಡಿರುವ ಸಂಗತಿಯನ್ನು ಸಚಿವರ ಗಮನಕ್ಕೆ ತರಲಾಯಿತು. ಈ ವಿಷಯ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆಯಲ್ಲಿದ್ದು ಅತಿ ಶೀಘ್ರದಲ್ಲೇ ಪರಿಹಾರ ಹುಡುಕುವ ಭರವಸೆ ನೀಡಿದರು.

ನಿಯೋಗದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತರಾದ , ಶ್ರೀವತ್ಸ ನಾಡಿಗ್, ನೆತ್ತನಕೆರೆ ಉದಯಶಂಕರ, ಎಂ ನಾಗರಾಜ, ,ಬಿ ಎನ್ ರಾಘವೇಂದ್ರ, ವಾದಿರಾಜ ದೇಸಾಯಿ, ಚಂದ್ರಶೇಖರ ಮತ್ತು ಹನುಮೇಶ್ ಕೆ ಯಾವಗಲ್ ಇದ್ದರು.

Get real time updates directly on you device, subscribe now.

Comments are closed.

error: Content is protected !!