ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮರಣ ಹೊಂದಿದ ಮತ್ತು ತೀವ್ರ ಗಾಯಗೊಂಡವರಿಗೆ ಪರಿಹಾರ: ಅರಿವು ಮೂಡಿಸಿ
: ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮರಣ ಹೊಂದಿದವರಿಗೆ ಮತ್ತು ತೀವ್ರ ಗಾಯಗೊಂಡವರಿಗೆ ಪರಿಹಾರ ನೀಡಲು ಅನುಷ್ಠಾನಗೊಳಿಸಲಾಗಿರುವ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಸೂಚನೆ ನೀಡಿದ್ದಾರೆ.
ಈ ಪ್ರಯುಕ್ತ ಆ ಯೋಜನೆಯಡಿ ಸಂತ್ರಸ್ಥರು ನಿಗದಿತ ಸಮಯದಲ್ಲಿ ಪರಿಹಾರ ಪಡೆಯಲು ಸರ್ಕಾರದ ಆದೇಶ ಅಥವಾ ಸುತ್ತೋಲೆ ಅಥವಾ ಮಾರ್ಗಸೂಚಿಗಳನ್ನಯ ಕಡ್ಡಾಯವಾಗಿ ಕಾರ್ಯನಿರ್ವಹಿಸಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದ್ದು, ಈ ಯೋಜನೆಯಲ್ಲಿ ಪ್ರಮುಖವಾಗಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಬೆಂಗಳೂರು ರವರ ಸುತ್ತೋಲೆಯಲ್ಲಿ ಪೊಲೀಸ್ ಠಾಣಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
*ಹಿಟ್ ಅಂಡ್ ರನ್ ಯೋಜನೆಯಡಿ ಪರಿಹಾರ ಕುರಿತು ಕಾರ್ಯವಿಧಾನ:*
ನಂತರ ಜನರಲ್ ಇನ್ಸೂರೆನ್ಸ್ ಕೌನ್ಸಿಲ್ ಇವರಿಂದ ಪರಿಶೀಲನೆಗೊಂಡು ಸಂಬಂಧಪಟ್ಟ ವ್ಯಕ್ತಿಗಳ ಬ್ಯಾಂಕ್ ಖಾತೆಗೆ ಜನರಲ್ ಇನ್ಸೂರೆನ್ಸ್ ಕೌನ್ಸಿಲ್ ಇವರಿಂದ ನೇರವಾಗಿ ಪರಿಹಾರದ ಮೊತ್ತವನ್ನು 15 ದಿನದೊಳಗಾಗಿ ಸಂಬಂಧಪಟ್ಟವರಿಗೆ ಜಮೆಯಾಗುತ್ತದೆ.
ಈ ಮೇಲ್ಕಂಡ ಕಾರ್ಯವಿಧಾನವನ್ನು ಸಂಬಂಧಪಟ್ಟ ಇಲಾಖೆಯವರು ಕಾಲಮಿತಿಯಲ್ಲಿ ಕಡ್ಡಾಯವಾಗಿ ನಿರ್ವಹಿಸಬೇಕಾಗಿದ್ದು ಜನ ಸಾಮಾನ್ಯರಲ್ಲಿ ಈ ಕಾರ್ಯವಿಧಾನದ ಮಾಹಿತಿ ಕೊರತೆಯಿಂದ ಸರ್ಕಾರದ ಹಿತಚಿಂತಕ ಯೋಜನೆಯು ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿಲ್ಲ. ಸರ್ಕಾರದ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾವರ್ಜನಿಕರಲ್ಲಿ ಹೆಚ್ಚಿನ ಅರಿವು ಮತ್ತು ಪ್ರಚಾರವನ್ನು ಮೂಡಿಸುವುದು ಅವಶ್ಯಕವಾಗಿದ್ದು, ಈ ಪರಿಹಾರ ಕಾರ್ಯವಿಧಾನವನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಹಾಗೂ ತಮ್ಮ ಕಾರ್ಯ ವ್ಯಾಪ್ತಿಯಲ್ಲಿರುವ ಎಲ್ಲಾ ಅಧೀನ ಕಚೇರಿಗಳಲ್ಲಿ ಕಡ್ಡಾಯವಾಗಿ ಕಚೇರಿಯ ಆವರಣದಲ್ಲಿ ಸಾರ್ವಜನಿಕರಿಗೆ ಕಾಣುವ ಸ್ಥಳಗಳಲ್ಲಿ ಫಲಕಗಳನ್ನು ಅಳವಡಿಸುವ ಮೂಲಕ ವ್ಯಾಪಕ ಪ್ರಚಾರ ಅಥವಾ ಅರಿವು ಮೂಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇದರಿಂದ ಸಾರ್ವಜನಿಕರಲ್ಲಿ ಅರಿವು ಮೂಡಿ ಮೃತರ ಕುಟುಂಬಗಳಿಗೆ ಹಾಗೂ ಅವಘಾತದಿಂದ ಭಾದಿತರಾಗುವ ವ್ಯಕ್ತಿಗಳಿಗೆ ಸರ್ಕಾರವು ನೀಡುವ ನೆರವು ಸಕಾಲದಲ್ಲಿ ದೊರಕಿಸುವಂತಾಗುತ್ತದೆ ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.