ಜು. 22 ರಂದು ಕೊಪ್ಪಳದಲ್ಲಿ ಹಡಪದ ಅಪ್ಪಣ್ಣ ಜಯಂತಿ
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಗಂಗಾವತಿಯ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಮುಮ್ತಾಜ್ ಬೇಗಂ ಅವರು ಹಡಪದ ಅಪ್ಪಣ್ಣನವರ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
****
Comments are closed.