ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನವಾಗಲಿ-ಸಂಸದ ರಾಜಶೇಖರ ಹಿಟ್ನಾಳ ಸೂಚನೆ

ಹುಲಿಹೈದರ್ ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಸಭೆ
ಕನಕಗಿರಿ: ಹಳ್ಳಿಗಳಲ್ಲಿ ವಿವಿಧ ಯೋಜನೆಗಳ ಕಾಮಗಾರಿಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕು, ಈ ಬಗ್ಗೆ ಅಧಿಕಾರಿಗಳು ಮತ್ತು ಗ್ರಾಪಂ ಸದಸ್ಯರು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ ಅವರು ಹೇಳಿದರು.
ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಯೋಜನೆಗಳ ಹುಲಿಹೈದರ್ ಹೋಬಳಿ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ಗ್ರಾಪಂ ಸದಸ್ಯರು ಎಲ್ಲ ಯೋಜನೆಗಳು & ಸರಕಾರಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಹೋಬಳಿವಾರು ಪ್ರಗತಿ ಪರಿಶೀಲನೆ ಸಭೆ ಆಯೋಜಿಸಿ ಗ್ರಾಪಂ ಸದಸ್ಯರು, ಗ್ರಾಪಂ ಪಿಡಿಓಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಂದ ಪ್ರಗತಿ ಮಾಹಿತಿ ಪಡೆಯಲಾಗುತ್ತಿದೆ ಎಂದರು.
ಇನ್ನೂ ಗೌರಿಪುರ ಹಾಗೂ ಬಸರಿಹಾಳ ಗ್ರಾ.ಪಂ ವ್ಯಾಪ್ತಿಯ ಸೋಮಸಾಗರ ಮತ್ತು ಹುಲಸನಹಟ್ಟಿ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಯಾಗದ ಹಿನ್ನೆಲೆ ಜೆಜೆಎಂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಯನ್ನು ಬಗೆಹರಿಸಲು ಸೂಚಿಸಿದರು.
ನಂತರ ಸ್ವಚ್ಛ ಭಾರತ ಮಿಷನ್, ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆ, ವಸತಿ, ಜೆಜೆಎಂ, ಪಶು ಇಲಾಖೆ, ಕೃಷಿ ಇಲಾಖೆ ಸೇರಿ ಇತರೆ ಇಲಾಖೆ ಅಧಿಕಾರಿಗಳು 2025-26ನೇ ಸಾಲಿನ ವಿವಿಧ ಯೋಜನೆಗಳ ಕ್ರಿಯಾಯೋಜನೆಗಳ ಬಗ್ಗೆ ಮಾಹಿತಿ ಪಡೆದರು. ಅಧಿಕಾರಿಗಳು ಪ್ರಗತಿ ವರದಿ ಓದಿ ಹೇಳಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷರಾದ ಹಜರತ್ ಹುಸೇನ್, ತಹಶೀಲ್ದಾರ ವಿಶ್ವನಾಥ ಮುರುಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ರಾಜಶೇಖರ, ಸಹಾಯಕ ನಿರ್ದೇಶಕರಾದ ಶರಪುನ್ನಿಸಾ ಬೇಗಂ, ಗ್ರಾಪಂ ಪಿಡಿಓರವರಾದ ಅಮರೇಶ್ ರಾಠೋಡ್, ಬಸವರಾಜ ಸಂಕನಾಳ, ಹನುಮಂತಪ್ಪ, ಅನುಷ್ಠಾನ ಇಲಾಖೆ ತಾಲೂಕು ಅಧಿಕಾರಿಗಳು, ಹುಲಿಹೈದರ್, ಗೌರಿಪುರ, ಬಸರಿಹಾಳ ಗ್ರಾಪಂಗಳ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಗಳು ಇದ್ದರು.
Comments are closed.