ಹುಲಿಗಿ ಪ್ರಾ.ಆ.ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಿಗಿ ಇವರ ಸಂಯುಕ್ತಾಶ್ರಯದಲ್ಲಿ ಆಸ್ಪತ್ರೆಯ ಆವರಣದಲ್ಲಿ ಜುಲೈ 22 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಪ್ರತಿ ಕುಟುಂಬಕ್ಕೆ ಹೆಣ್ಣಾಗಲಿ ಗಂಡಾಗಲಿ ಒಂದು ಅಥವಾ ಎರಡು ಮಕ್ಕಳು ಸಾಕು, ಚಿಕ್ಕ ಕುಟುಂಬ ಚೊಕ್ಕ ಕುಟುಂಬ, ಚಿಕ್ಕ ಕುಟುಂಬ ಸುಖೀ ಕುಟುಂಬ ಎಂಬುದನ್ನು ಅರಿತುಕೊಳ್ಳಬೇಕು. ಇದರಿಂದ ಕುಟುಂಬದ ಆರ್ಥಿಕಸ್ಥಿತಿ ಉತ್ತಮವಾಗುತ್ತದೆ. ಎಲ್ಲರೂ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಜೊತೆಗೆ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಶಿಕ್ಷಾರ್ಹ ಅಪರಾಧ, ಹೆಣ್ಣು ಭ್ರೂಣ ಹತ್ಯೆಯಾಗದಂತೆ ಎಲ್ಲರೂ ತಡೆಯಬೇಕು. ಹೆಣ್ಣು-ಗಂಡನ್ನು ಸರಿ ಸಮಾನವಾಗಿ ಕಾಣಬೇಕೆಂದು ತಿಳಿಸಿದರು.
ಕೊಪ್ಪಳ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಮಾಂಜನೇಯ ಮಾತನಾಡಿ, ಪ್ರತಿ ವರ್ಷ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಆಚರಿಸುವ ಉದ್ದೇಶ ಪ್ರತಿಯೊಬ್ಬರಿಗೂ ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ದುಷ್ಪರಿಣಾಮಗಳು ಮತ್ತು ಅದಕ್ಕೆ ಕಾರಣ ಹಾಗೂ ಅದರ ನಿಯಂತ್ರಣ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು. ಜೊತೆಗೆ ಕುಟುಂಬ ಕಲ್ಯಾಣ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮನವರಿಕೆ ಮಾಡಿ ಅವುಗಳನ್ನು ಅಳವಡಿಸಿಕೊಂಡು, ತಾಯಿ-ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ನಿರಂತರವಾಗಿ ಆಶಾ/ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಅರಿವು ಮೂಡಿಸುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ. ಅವರು ಬಾಲ್ಯ ವಿವಾಹ ನಿಷೇಧ, ತಾಯಿ ಮತ್ತು ಮಕ್ಕಳ ಆರೋಗ್ಯ ರಕ್ಷಣೆ, ಪುರುಷ ಸಂತಾನ ನಿರೋಧ ಶಸ್ತçಚಿಕಿತ್ಸೆ ಕುರಿತು ವಿವರವಾಗಿ ಮತನಾಡಿದರು. ಹುಲಿಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಧಿಕಾರಿಗಳಾದ ಡಾ. ಶಫಿಉಲ್ಲಾ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೀಲಮ್ಮ ಗುಂಗಾಡಿ, ಸದಸ್ಯರಾದ ರಮೇಶ್ ಪೂಜಾರ, ಹಿ.ಪ್ರಾ.ಆ.ಸುರಕ್ಷಾಧಿಕಾರಿಗಳಾದ ವಂದನಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಗಂಗಮ್ಮ ಕೆ., ಪ್ರ.ದ.ಸಹಾಯಕರಾದ ಮೇರಿ, ಲೆಕ್ಕಪತ್ರ ಸಹಾಯಕರಾದ ಪ್ರಭು ಮತ್ತು ತಾಯಂದಿರು, ಬಾಣಂತಿಯರು, ಗರ್ಭಿಣಿಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
Comments are closed.