ಹ್ಯಾಟ್ರಿಕ್ ಸಚಿವ ಶಿವರಾಜ ತಂಗಡಗಿ ಸಚಿವರಾದ ನಂತರ ಮೊದಲ ಕೊಪ್ಪಳ ಬೇಟಿ

Get real time updates directly on you device, subscribe now.

ಕೊಪ್ಪಳ : ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ಜೂನ್ 5ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ರಸ್ತೆ ಮೂಲಕ ಗಂಗಾವತಿ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸಿ ಕೊಪ್ಪಳದ ಶ್ರೀ ಗವಿಮಠಕ್ಕೆ ಭೇಟಿ ನೀಡಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುವರು.
ಬಳಿಕ 11.30ಕ್ಕೆ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 1 ಗಂಟೆಗೆ ಕೊಪ್ಪಳದ ಬಿ.ಟಿ.ಪಾಟೀಲ ನಗರದಲ್ಲಿರುವ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸುವರು.
ಮಧ್ಯಾಹ್ನ 1.30ಕ್ಕೆ ಕೊಪ್ಪಳ ಜಿಲ್ಲಾ ವಕೀಲರ ಸಂಘದಿಂದ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆಯುವ ಕೊಪ್ಪಳದ ಶಾಸಕರು ಹಾಗೂ ಸಚಿವರಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗುವರು. ಮಧ್ಯಾಹ್ನ 3 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ಹೊಸಪೇಟೆ, ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು

Get real time updates directly on you device, subscribe now.

Comments are closed.

error: Content is protected !!