ವಿರೋಧ ಪಕ್ಷದವರಿಗೆ ಬೇರೆ ಕೆಲಸವಿಲ್ಲದೆ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ-ವಿಶ್ವನಾಥ್ ಮಾಲಿ ಪಾಟೀಲ್

Get real time updates directly on you device, subscribe now.

ಕೊಪ್ಪಳ : ಜಿಲ್ಲೆಯಲ್ಲಿ ಈ ಸಾರಿ ಬೇಗನೆ ಮಳೆಯಾಗಿರುವುದರಿಂದ ಭತ್ತದ ನಾಟಿಯ ಜೊತೆಗೆ ಮುಂಗಾರು ಬೆಳೆಗಳ ಬಿತ್ತನೆಯೂ ಬೇಗನೆ ಆಗಿದೆ ಪ್ರತಿ ಸಾರಿ ಆಗಸ್ಟ್ ನಲ್ಲಿ ಬಿತ್ತನೆ ಮತ್ತು ನಾಟಿ ಪ್ರಾರಂಭವಾಗುತ್ತಿತ್ತು ಈ ಸಾರಿ ಜುಲೈ ತಿಂಗಳಲ್ಲಿ ಪ್ರಾರಂಭವಾಗಿರುವುದರಿಂದ ಮತ್ತು ಕಳೆದ ವರ್ಷಕ್ಕಿಂತ ಹೆಚ್ಚುವರಿ 85,000 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆ ಆಗಿರುತ್ತದೆ ಹಾಗಾಗಿ ರಸಗೊಬ್ಬರ ಬೇಡಿಕೆಯು ಹೆಚ್ಚಾಗಿರುತ್ತದೆ ಇದು ಸರ್ಕಾರದ ಗಮನಕ್ಕೆ ಇದ್ದು, ಅಗತ್ಯಕ್ಕೆ ಅನುಗುಣವಾಗಿ ರೈತರಿಗೆ ಸೊಸೈಟಿಗಳ ಮುಖಾಂತರ ಹಂತ ಹಂತವಾಗಿ ರಸಗೊಬ್ಬರವನ್ನು ಪೂರೈಕೆ ಮಾಡಲಾಗುತ್ತಿದ್ದು ರೈತರು ಆತಂಕ ಪಡುವ ಅಗತ್ಯವಿಲ್ಲ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಆರಾಧನಾ ಸಮಿತಿ ಸದಸ್ಯರಾದ ವಿಶ್ವನಾಥ್ ಮಾಲಿ ಪಾಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ರಸ ಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿ ಸೂಚನೆ ನೀಡಿದ್ದಾರೆ. ವಿರೋಧ ಪಕ್ಷದವರಿಗೆ ಬೇರೆ ಕೆಲಸವಿಲ್ಲದೆ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ, ಬೀಜ ಮತ್ತು ರಸಗೊಬ್ಬರ ಕೇಳಿದಂತ ರೈತರ ಮೇಲೆ ಗೋಲಿಬಾರ್ ಮಾಡಿದ ಪಕ್ಷದವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಆರಾಧನಾ ಸಮಿತಿ ಸದಸ್ಯರಾದ ವಿಶ್ವನಾಥ್ ಮಾಲಿ ಪಾಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!