ಆಗಸ್ಟ್ 28ರಂದು ಕಾಲೇಜು ವಿದ್ಯಾರ್ಥಿಗಳಿಗೆ ಮ್ಯಾರಥಾನ್ ಸ್ಪರ್ಧೆ

Get real time updates directly on you device, subscribe now.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಆಗಸ್ಟ್ 28 ರಂದು ಬೆಳಗ್ಗೆ 06.30ಕ್ಕೆ ನಗರದ ಹಳೆಯ ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಿಂದ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಈ ಮ್ಯಾರಥನ್‌ದಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು, ತಿಳಿಸಿದ್ದಾರೆ.
ಹೆಚ್.ಐ.ವಿ ಏಡ್ಸ್ ಕುರಿತು ಜಿಲ್ಲಾ ಮಟ್ಟದಲ್ಲಿ ಯುವಜನೋತ್ಸವವನ್ನು ನ್ಯಾಕೋ ಮಾರ್ಗಸೂಚಿಯಂತೆ 5.00 ಕಿ.ಮೀ. ಮ್ಯಾರಥಾನ್ ಸ್ಪರ್ಧೆಯನ್ನು ಜಿಲ್ಲಾ, ರಾಜ್ಯ, ಪ್ರಾದೇಶಿಕ ಹಾಗೂ ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಸ್ಪರ್ಧೆಯ ಮುಖ್ಯ ಉದ್ದೇಶ ಹೆಚ್.ಐ.ವಿ. ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದಾಗಿದೆ. ಅಲ್ಲದೇ ಹೆಚ್.ಐ.ವಿ. ಮತ್ತು ಏಡ್ಸ್ (ತಡೆ) ಕಾಯ್ದೆ 2017, ನ್ಯಾಕೋ ಏಡ್ಸ್ ಆಪ್, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಸ್‌ಟಿಐ, ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದಾಗಿದೆ.
*ಮ್ಯಾರಥಾನ್ ಸ್ಪರ್ಧೆ ಮಾರ್ಗಸೂಚಿಗಳು:* ಮ್ಯಾರಥಾನ್ ಸ್ಪರ್ಧೆಯಲ್ಲಿ 17 ರಿಂದ 25 ವರ್ಷದೊಳಗಿನ ಕಾಲೇಜು ವಿದ್ಯಾರ್ಥಿಗಳು ಮಾತ್ರ (ಕಾಲೇಜು ವಿದ್ಯಾರ್ಥಿಗಳು ಆರ್.ಆರ್.ಸಿ. ಕ್ಲಬ್ ಸದಸ್ಯರುಗಳು) ಭಾಗವಹಿಸಬಹುದು. ಮ್ಯಾರಥಾನ್ ಮೂಲಕ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ ಏಡ್ಸ್ ಕುರಿತು ಸಮಗ್ರ ಮಾಹಿತಿಯನ್ನು ನೀಡಬೇಕು. 5.0 ಕಿ.ಮೀ ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೂರು ವಿದ್ಯಾರ್ಥಿಗಳಿಗೆ ಮೊದಲನೇ ಬಹುಮಾನ ಪುರುಷರಿಗೆ ರೂ.5000, ಮಹಿಳೆಯರಿಗೆ ರೂ. 5000, ಎರಡನೇ ಬಹುಮಾನ ಪುರುಷರಿಗೆ ರೂ.3500, ಮಹಿಳೆಯರಿಗೆ ರೂ. 3500, ಮೂರನೇ ಬಹುಮಾನ ಪುರುಷರಿಗೆ ರೂ. 2500, ಮಹಿಳೆಯರಿಗೆ ರೂ. 2500, ಸಮಾಧಾನಕರ 7 ಬಹುಮಾನಗಳಂತೆ ರೂ. 1000 (4 ಪುರುಷ ಮತ್ತು 3 ಮಹಿಳೆ) ಗಳನ್ನು ನೀಡಲಾಗುವುದು. ಸ್ಪರ್ಧೆಯಲ್ಲಿ ವಿಜೇತರಾದ ಮೊದಲನೇ ಬಹುಮಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಭಾಗವಹಿಸಬೇಕಾಗಿರುತ್ತದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪಿ.ಎಫ್.ಎಂ.ಎಸ್. ಮುಖಾಂತರ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ಮ್ಯಾರಥಾನ್ ಸ್ಪರ್ಧೆಯು ಆಗಸ್ಟ್ 28ರ ಬೆಳಗ್ಗೆ 06.30ಕ್ಕೆ ಹಳೆಯ ಜಿಲ್ಲಾ ಆಸ್ಪತ್ರೆ ಆವರಣದಿಂದ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ ಹಾಗೂ ಕಾಲೇಜಿನ ಪ್ರಾಂಶುಪಾಲರಿಂದ ಪಡೆದ ಧೃಢೀಕರಣ ಪತ್ರಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9449843232, 9449846981 ಗೆ ಸಂಪರ್ಕಿಸಬಹುದಾಗಿದೆ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!