ಮಾದಕ ವ್ಯಸನವು ಸಮಾಜಕ್ಕೆ ಮಾರಕ-ಕುಲಪತಿ ಪ್ರೊ. ಬಿ.ಕೆ. ರವಿ
ಕೊಪ್ಪಳ(ಆಗಸ್ಟ್ 13): ಮಾದಕ ವ್ಯಸನವು ಸಮಾಜಕ್ಕೆ ಮಾರಕ. ಇದನ್ನು ತಡೆಯಲು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಹೇಳಿದರು.

ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಸಾಮೂಹಿಕ ಜಾಗೃತಿ ಮೂಡಿಸುವ ಹಾಗೂ ನಶಾ ಮುಕ್ತ ಭಾರತ ಅಭಿಯಾನದ ಕಾರ್ಯಕ್ರಮದಲ್ಲಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿ ಮಾತನಾಡಿದರು.
ಮಾದಕ ವ್ಯಸನವು ಕೇವಲ ವ್ಯಕ್ತಿಯ ಜೀವನವನ್ನೇ ಅಲ್ಲ, ಕುಟುಂಬ ಮತ್ತು ಸಮಾಜದ ಸ್ಥಿರತೆಯನ್ನೂ ಹಾಳುಮಾಡುತ್ತದೆ. ವಿದ್ಯಾರ್ಥಿ ಜೀವನದಲ್ಲೇ ಜಾಗೃತಿ ಹೊಂದಿ, ಸ್ವಸ್ಥ ಹಾಗೂ ನೈತಿಕ ಜೀವನವನ್ನು ನಡೆಸುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ, ವಿವಿಧ ವಿಭಾಗಗಳ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Koppal University
Comments are closed.