79ನೇ ಸ್ವಾತಂತ್ರ್ಯೋತ್ಸವ : ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಜ್ ತಂಗಡಗಿ
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರಿಂದ ೭೯ನೇ ಸ್ವಾತಂತ್ರö್ಯ ದಿನಾಚರಣೆ ಸಂದೇಶ

ಈ ಪವಿತ್ರ ದಿನದಂದು ವೇದಿಕೆಯ ಮೇಲೆ ಆಸೀನರಾಗಿರುವ ಶಾಸಕರೇ, ಸಂಸದರೇ, ಜಿಲ್ಲಾಧಿಕಾರಿಯವರೇ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರೇ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೇ ಹಾಗೂ ಈ ಸಮಾರಂಭಕ್ಕೆ ಆಗಮಿಸಿರುವ ಎಲ್ಲಾ ಜನಪ್ರತಿನಿಧಿಗಳೇ, ಅಧಿಕಾರಿ ವರ್ಗದವರೇ, ನೌಕರ ಬಂಧುಗಳೇ ಹಾಗೂ ಶಿಕ್ಷಕ ಬಳಗವೇ, ನಾಗರಿಕ ಬಂಧುಗಳೇ, ವಿದ್ಯಾರ್ಥಿಗಳೇ ಹಾಗೂ ಮಾಧ್ಯಮ ಮಿತ್ರರೆ ತಮಗೆಲ್ಲರಿಗೂ ೭೯ನೇ ಸ್ವಾತಂತ್ರö್ಯ ದಿನಾಚರಣೆಯ ಶುಭಾಷಯಗಳು.
ದೇಶದ ಸ್ವಾತಂತ್ರö್ಯಕ್ಕಾಗಿ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಸುಭಾಷ್‌ಚಂದ್ರ ಬೋಸ್, ಸರ್ದಾರ್ ವಲ್ಲಭಭಾಯಿ ಪಟೇಲ್, ಲಾಲ್ ಬಹದ್ದೂರ್ ಶಾಸ್ತಿç, ಡಾ.ಬಿ.ಆರ್.ಅಂಬೇಡ್ಕರ್, ಗೋಪಾಲಕೃಷ್ಣ ಗೋಖಲೆ, ಲಾಲಾ ಲಜಪತರಾಯ್, ಬಾಲಗಂಗಾಧರ ತಿಲಕ್, ಮೌಲಾನಾ ಅಬುಲ್ ಕಲಾಂ ಅಜಾದ್, ಭಗತ್ ಸಿಂಗ್, ರಾಜ್‌ಗುರು, ಕಿತ್ತೂರು ರಾಣಿ ಚೆನ್ನಮ್ಮ, ಹೀಗೆ ಅನೇಕ ಮಹನೀಯರು ದೇಶದ ಸ್ವಾತಂತ್ರö್ಯಕ್ಕಾಗಿ ಹೋರಾಡಿದರು.
ಭಾರತದ ಸ್ವಾತಂತ್ರö್ಯಕ್ಕಾಗಿ ಹೋರಾಡಿದ ಮಹನೀಯರು ಪ್ರತಿಯೊಬ್ಬ ಭಾರತೀಯರ ಮನದಲ್ಲೂ ಅಮರರಾಗಿ ಉಳಿದಿದ್ದಾರೆ. ನಾವೆಲ್ಲರೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ. ಜಾತಿ, ಧರ್ಮ, ಭೇದ-ಭಾವ ಮಾಡದೇ ಎಲ್ಲರೂ ಸಮಾನರಾಗಿ ಶಾಂತಿಯಿAದ ಬಾಳೋಣ. ದೇಶಪ್ರೇಮ ಬೆಳೆಸಿಕೊಳ್ಳಲು ಪ್ರೇರಣೆಯಾದ ಈ ದಿನದಂದು ಸಮ ಸಮಾಜ ಕಟ್ಟಲು ಸಂಕಲ್ಪ ಮಾಡೋಣ.
ಸ್ವಾತಂತ್ರö್ಯ ಹೋರಾಟದಲ್ಲಿ ಕೊಪ್ಪಳ ಜಿಲ್ಲೆಯ ಹೋರಾಟಗಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸ್ವಾತಂತ್ರö್ಯ ಚಳುವಳಿಯಲ್ಲಿ ಭಾಗಿಯಾದ ಕೊಪ್ಪಳ ಜಿಲ್ಲೆಯ ಮುಂಡರಗಿ ಭೀಮರಾಯರು, ಹಮ್ಮಿಗೆ ಕೆಂಚನಗೌಡರು, ಇಟಗಿಯ ವೀರಭದ್ರಯ್ಯನವರು, ಶಿರೂರು ವೀರಭದ್ರಪ್ಪನವರು, ಶಿವಮೂರ್ತಿಸ್ವಾಮಿ ಅಳವಂಡಿಯವರು, ಜನಾರ್ಧನರಾಯ ದೇಸಾಯಿಯವರು, ಎಲ್.ಕೆ.ಷರೀಫ್‌ರವರು, ಬಿಂದು ಮಾಧವರಾವ್ ಅವರು, ಬಿ.ಕೆ. ಪ್ರಾಣೇಶಾಚಾರ್ಯರು, ಮುರಡಿ ಭೀಮಜ್ಜ ಮೊದಲಾದ ಧೀಮಂತರುಗಳ ದೇಶ ಪ್ರೇಮದ ಗುಣವು ನಮಗೆಲ್ಲ ಸ್ಪೂರ್ತಿಯಾಗಲಿ. ಅವರ ಸೇವಾಗುಣವನ್ನು ಇಂದು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.
ರಾಜ್ಯ ಸರ್ಕಾರದಿಂದ ಕಳೆದ ಎರಡುವರೆ ವರ್ಷಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳಾಗಿವೆ. ಪಂಚ ಗ್ಯಾರಂಟಿ ಯೋಜನೆಯಡಿ ಆರ್ಥಿಕವಾಗಿ ದುರ್ಬಲರಾಗಿರುವ ವರ್ಗದವರಿಗೆ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಮಹಿಳೆಯರು, ಪಡಿತರ ಚೀಟಿದಾರರು, ಯುವಕರು ಸೇರಿದಂತೆ ಹಲವಾರು ಜನರಿಗೆ ಇವುಗಳ ಸೌಲಭ್ಯ ದೊರೆಯುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಜೀವನ ಮಟ್ಟವು ಸುಧಾರಣೆಯಾಗಿದ್ದು, ಜನ ಸೇವೆಯೇ ನಮ್ಮ ಸರ್ಕಾರದ ಧ್ಯೇಯವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷದ ಬಜೆಟ್‌ನಲ್ಲಿ ಅನುದಾನವನ್ನು ಮೀಸಲಿಡಲಾಗುತ್ತಿದೆ.

ಶಕ್ತಿ ಯೋಜನೆ
೨೦೨೩ರ ಜೂನ್ ೧೧ ರಿಂದ ಆರಂಭಗೊAಡ ಶಕ್ತಿ ಯೋಜನೆಯು ಜನಪ್ರಿಯ ಯೋಜನೆಯಾಗಿ ಮೆಚ್ಚುಗೆ ಗಳಿಸಿದ್ದು, ೨೦೨೫ರ ಜುಲೈ ಅಂತ್ಯದವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ೮.೩೭ ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಪ್ರಯಾಣಿಸಿ ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ. ಇದಕ್ಕಾಗಿ ೩೦೩.೪೫ ಕೋಟಿ ರೂ.ಗಳು ವೆಚ್ಚ ಮಾಡಲಾಗಿದೆ.
ಗೃಹಜ್ಯೋತಿ ಯೋಜನೆ
೨೦೨೫ರ ಜೂನ್ ೩೦ ರವರೆಗೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆಯಲ್ಲಿ ಒಟ್ಟು ೨,೮೩,೯೮೮ ಗ್ರಾಹಕರ ಪೈಕಿ ೨,೭೬,೬೫೩ ಫಲಾನುಭವಿಗಳು ನೋಂದಾಯಿಸಿದ್ದು, ಶೇ ೯೭.೪೨ರಷ್ಟು ಪ್ರಗತಿಯಾಗಿದೆ.


ಅನ್ನಭಾಗ್ಯ ಯೋಜನೆ
ಕೊಪ್ಪಳ ಜಿಲ್ಲೆಯಲ್ಲಿ ೩೭,೨೨೪ ಅಂತ್ಯೋದಯ, ೨,೯೧,೨೬೫ ಪಿ.ಹೆಚ್.ಹೆಚ್ ಪಡಿತರ ಚೀಟಿಗಳಿದ್ದು, ಅವುಗಳಲ್ಲಿನ ೧೨,೩೩,೯೯೮ ಸದಸ್ಯರಿಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಂತೆ ಪ್ರತಿ ಸದಸ್ಯರಿಗೆ ೧೦ ಕೆಜಿ ಆಹಾರ ಧಾನ್ಯ ಉಚಿತವಾಗಿ ವಿತರಿಸಲಾಗುತ್ತಿದೆ.
ಯುವನಿಧಿ ಯೋಜನೆ
೨೦೨೩ರ ಡಿಸೆಂಬರ್ ೨೬ ರಂದು ಮಾನ್ಯ ಮುಖ್ಯಮಂತ್ರಿಗಳಿAದ ಯುವನಿಧಿ ಯೋಜನೆಯ ನೋಂದಣಿಗೆ ಚಾಲನೆ ನೀಡಲಾಯಿತು. ನಂತರ ೨೦೨೪ರ ಜನವರಿ ೧೨ ರಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದು ನಿರುದ್ಯೋಗ ಪದವೀಧರರಿಗೆ ಪ್ರತಿ ತಿಂಗಳು ರೂ.೩೦೦೦ ಹಾಗೂ ಡಿಪ್ಲೊಮಾದಾರರಿಗೆ ಪ್ರತಿ ತಿಂಗಳು ರೂ.೧೫೦೦/- ಗಳ ನಿರುದ್ಯೋಗ ಭತ್ಯೆ ನೀಡುವ ಯೋಜನೆಯಾಗಿದೆ.
ಕೊಪ್ಪಳ ಜಿಲ್ಲೆಯಲ್ಲಿ ೨೦೨೫ರ ಜುಲೈ ೩೧ ರವರೆಗೆ ೯,೨೨೧ ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಇಲ್ಲಿಯವರೆಗೆ ಒಟ್ಟು ಮೊತ್ತ ರೂ. ೧೫,೧೭,೭೧,೫೦೦ ನಿರುದ್ಯೋಗ ಭತ್ಯೆಯನ್ನು ನೀಡಲಾಗಿದೆ.
ಗೃಹಲಕ್ಷಿö್ಮ ಯೋಜನೆ
ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್ನಲ್ಲಿ ನಮೂದಿಸಿರುವಂತೆ ಕುಟುಂಬದ ಅರ್ಹ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ೨,೦೦೦ ರೂ. ಆರ್ಥಿಕ ಸೌಲಭ್ಯ ನೀಡುವ ಗೃಹಲಕ್ಷಿö್ಮÃ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗುತ್ತಿದೆ.
ಕೊಪ್ಪಳ ಜಿಲ್ಲೆಯಲ್ಲಿ ಜೂನ್-೨೦೨೫ರ ಅಂತ್ಯಕ್ಕೆ ಒಟ್ಟು ೩,೨೬,೮೨೩ ಫಲಾನುಭವಿಗಳು ಈ ಯೋಜನೆಯಡಿ ನೊಂದಣಿಯಾಗಿದ್ದು, ಇದುವರೆಗೂ ೨೦ ಕಂತುಗಳಲ್ಲಿ ಒಟ್ಟು ಮೊತ್ತ ರೂ. ೧,೨೧೩.೫೮ ಕೋಟಿ ರೂಪಾಯಿ ಸಹಾಯ ಧನ ಫಲಾನುಭವಿಗಳ ಖಾತೆಗೆ ಸಂದಾಯವಾಗಿರುತ್ತದೆ.
ಜಿಲ್ಲಾ ಪಂಚಾಯತಿ
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ೨೦೨೪-೨೫ನೇ ಸಾಲಿಗೆ ೮೩ ಲಕ್ಷ ಮಾನವ ದಿನಗಳ ಸೃಜನೆಯ ಗುರಿಯಿದ್ದು ೨೦೨೫ರ ಆಗಸ್ಟ್ ೬ಕ್ಕೆ ೪೭.೩೭ ಲಕ್ಷ ಮಾನವ ದಿನಗಳು ಸೃಜಿಸಿ ಶೇ. ೫೭% ರಷ್ಟು ಪ್ರಗತಿ ಸಾಧಿಸಲಾಗಿದೆ.
ವಸತಿ ಯೋಜನೆಯಡಿ ೨೦೨೧-೨೨ನೇ ಸಾಲಿನ ಬಸವ ವಸತಿ ಯೋಜನೆ ಮತ್ತು ಹೆಚ್ಚುವರಿ ಯೋಜನೆಯಡಿ ೧೩,೩೪೭ ಮನೆಗಳ ಗುರಿ ಇದ್ದು, ಈ ಪೈಕಿ ಇಲ್ಲಿಯವರೆಗೆ ೧೩,೧೫೬ ಮನೆಗಳನ್ನು ನಿಗಮದಿಂದ ಅನುಮೋದನೆ ಪಡೆಯಲಾಗಿದೆ. ಇದರಲ್ಲಿ ೬,೪೧೫ ಪ್ರಗತಿಯಲ್ಲಿದ್ದು ೬,೪೪೯ ಮನೆಗಳು ಮುಕ್ತಾಯಗೊಂಡಿರುತ್ತವೆ.
ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ ಮತ್ತು ಹೆಚ್ಚುವರಿ ಯೋಜನೆಯಡಿ ೪,೨೦೭ ಮನೆಗಳ ಗುರಿ ಇದ್ದು ಈ ಪೈಕಿ ಇಲ್ಲಿಯವರೆಗೆ ೪,೧೪೩ ಮನೆಗಳನ್ನು ನಿಗಮದಿಂದ ಅನುಮೋದನೆ ಪಡೆಯಲಾಗಿದೆ. ಇದರಲ್ಲಿ ೧,೭೭೯ ಮನೆಗಳು ಪ್ರಗತಿಯಲ್ಲಿದ್ದು ೨,೨೦೭ ಮನೆಗಳು ಮುಕ್ತಾಯಗೊಂಡಿರುತ್ತವೆ.
ಕೃಷಿ ಇಲಾಖೆ
ಈ ವರ್ಷ ೨೦೨೫ರ ಆಗಸ್ಟ್ ೨ರವರೆಗೆ ಜಿಲ್ಲೆಯಲ್ಲಿ ಸರಾಸರಿ ವಾಡಿಕೆ ಮಳೆ ೨೩೨ ಮಿ.ಮೀ. ಇದ್ದು, ವಾಸ್ತವಿಕವಾಗಿ ೩೧೨ ಮಿ.ಮೀ. ಮಳೆಯಾಗಿದೆ. ಶೇ. ೩೫ ರಷ್ಟು ಅಧಿಕ ಮಳೆಯಾಗಿರುತ್ತದೆ. ಈ ವರ್ಷ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿರುವುದರಿಂದ, ಮುಂಗಾರು ಹಂಗಾಮು ಆಶಾದಾಯಕವಾಗಿದೆ. ಜಿಲ್ಲೆಯ ಬಿತ್ತನೆ ಗುರಿ ೩.೧೯ ಲಕ್ಷ ಹೆಕ್ಟರ್ ಆಗಿದ್ದು, ೩.೫೬ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಶೇ.೧೧೦ರಷ್ಟು ಬಿತ್ತನೆಯಾಗಿದೆ. ರೈತರು ಮುಖ್ಯವಾಗಿ ಮೆಕ್ಕೆಜೋಳ ಬೆಳೆಯನ್ನು ಹೆಚ್ಚಾಗಿ ಬಿತ್ತನೆ ಮಾಡಿರುತ್ತಾರೆ.
ಭತ್ತ, ಮೆಕ್ಕೆಜೋಳ, ಸಜ್ಜೆ, ನವಣೆ, ಹೆಸರು, ತೊಗರಿ, ಸೂರ್ಯಕಾಂತಿ ಇತ್ಯಾದಿ ವಿವಿಧ ಬಿತ್ತನೆ ಬೀಜಗಳ ಮೊತ್ತ ೧೦,೫೯೦ ಕ್ವಿಂಟಲ್ ದಾಸ್ತಾನು ಮಾಡಲಾಗಿದ್ದು, ಇದರಲ್ಲಿ ೮,೭೪೨ ಕ್ವಿಂಟಲ್ ಬೀಜ ರೈತರಿಗೆ ವಿತರಿಸಲಾಗಿದೆ. ಇನ್ನುಳಿದ ೧,೮೪೮ ಕ್ವಿಂಟಲ್ ಬೀಜ ದಾಸ್ತಾನಿನಲ್ಲಿ ಲಭ್ಯವಿದ್ದು, ಜಿಲ್ಲೆಯಲ್ಲಿ ಬಿತ್ತನೆ ಬೀಜದ ಕೊರತೆ ಇರುವುದಿಲ್ಲ.
ತೋಟಗಾರಿಕೆ ಇಲಾಖೆ
ಕರ್ನಾಟಕ ಸರ್ಕಾರದಿಂದ ೨೦೨೫-೨೬ನೇ ಸಾಲಿನ ಬಜೆಟ್‌ನಲ್ಲಿ ಅನುಮೋದನೆಗೊಂಡಿರುವ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ೨೦೦ ಎಕರೆ ಪ್ರದೇಶದಲ್ಲಿ ಹೊಸದಾಗಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ನ ಪ್ರಸ್ತುತ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಲಾಗಿದ್ದು, ದಿನಾಂಕ:೧೭/೦೭/೨೦೨೫ರAದು ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಯಾಗಿರುತ್ತದೆ. ಮುಂದಿನ ದಿನಗಳಲ್ಲಿ ಕೊಪ್ಪಳ ಸೇರಿದಂತೆ ಕಲ್ಯಾಣ ಕರ್ನಾಟಕದ ರೈತರಿಗೆ ಈ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಒಂದು ವರದಾನವಾಗಲಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ೨೦೨೪-೨೫ನೇ ಸಾಲಿನಲ್ಲಿ ತಾತ್ಕಾಲಿಕ ವಿಧಾನವಾದ ಪಿ.ಪಿ.ಐ.ಯು.ಸಿ.ಡಿ ಯಲ್ಲಿ ೧೦,೭೫೯ ಫಲಾನುಭವಿಗಳಿಗೆ ಸೇವೆಯನ್ನು ನೀಡಲಾಗಿದ್ದು ಶೇ. ೧೧೫.೬ ರಷ್ಟು ಸಾಧನೆಯಾಗಿರುತ್ತದೆ.
ಸಮಾಜ ಕಲ್ಯಾಣ ಇಲಾಖೆ
ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪಿ.ಯು.ಸಿ ಗೆ ರೂ. ೨೦,೦೦೦/- ಪದವಿಯಲ್ಲಿ ರೂ.೨೫,೦೦೦/- ರಿಂದ ಸ್ನಾತಕೋತ್ತರ ಪದವಿಗೆ ರೂ. ೩೦,೦೦೦/- ವೃತ್ತಿಪರ ಕೋರ್ಸ್ಗಳಾದ ಮೆಡಿಕಲ್/ಇಂಜಿನಿಯರಿAಗ್ ನಲ್ಲಿ ರೂ. ೩೫,೦೦೦/- ಗಳವರೆಗೆ ಪ್ರೋತ್ಸಾಹಧನ ವಿತರಿಸಲಾಗಿರುತ್ತದೆ.
ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಲಾದ ಸಿ.ಸಿ. ರಸ್ತೆ, ಚರಂಡಿ, ಇತ್ಯಾದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟಾರೆ ರೂ. ೭೬೯.೧೬ ಲಕ್ಷಗಳ ವೆಚ್ಚ ಭರಿಸಲಾಗಿರುತ್ತದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ವಸತಿ ನಿಲಯಗಳಲ್ಲಿ ಒಟ್ಟು ೫೬ ಸ್ವಂತ ಕಟ್ಟಡಗಳಿದ್ದು, ೧ ವಸತಿ ನಿಲಯದ ಸ್ವಂತ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ. ೪ ವಸತಿ ನಿಲಯಗಳಿಗೆ ಕೆ.ಕೆ.ಆರ್.ಡಿ.ಬಿ. ಅನುದಾನದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ.
ಜಿಲ್ಲೆಯಲ್ಲಿ ಒಟ್ಟು ೭ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ೪ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಗಳಿವೆ. ೩ ವಸತಿ ಶಾಲೆಗಳಿಗೆ ನಿವೇಶನಗಳು ಲಭ್ಯವಿದ್ದು, ಕನಕಗಿರಿ ಹಾಗೂ ಹನುಮನಾಳ ವಸತಿ ಶಾಲೆಗಳ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಮಂಜೂರಾತಿ ನೀಡಲಾಗಿದೆ.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
ಶಿಕ್ಷಣದಿಂದ ವಂಚಿತರಾಗಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ.
ಶಿಕ್ಷಣ ಇಲಾಖೆ
೨೦೨೫-೨೬ನೇ ಸಾಲಿನಲ್ಲಿ ಅಕ್ಷರ ಆವಿಷ್ಕಾರ ಯೋಜನೆಯಡಿ ಜಿಲ್ಲೆಯ ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ರೂ.೫೯.೦೯ ಕೋಟಿಗಳ ಅನುದಾನವು ಮಂಜೂರಾಗಿರುತ್ತದೆ. ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸುವುದು ಪ್ರಗತಿಯಲ್ಲಿವೆ.
ಕೊಪ್ಪಳ ಜಿಲ್ಲೆಯ ಇಟಗಿ, ಟಣಕನಕಲ್, ತಳುವಗೇರಾ ಹಾಗೂ ಕನಕಗಿರಿ ಸೇರಿ ಜಿಲ್ಲೆಯಲ್ಲಿ ಒಟ್ಟು ೪ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜುಗಳನ್ನು ೨೦೨೫-೨೬ನೇ ಸಾಲಿನಿಂದ ಪ್ರಾರಂಭ ಮಾಡಲಾಗಿದೆ. ೨೦೨೪-೨೫ನೇ ಸಾಲಿಗೆ ಕೆ.ಕೆ.ಆರ್.ಡಿ.ಬಿ ಅನುದಾನದಿಂದ ಕುಕನೂರು ತಾಲೂಕಿನ ರಾಜೂರು-ಆಡೂರು ಹಾಗೂ ಯಲಬುರ್ಗಾ ತಾಲೂಕಿನ ಮುಧೋಳ-ಕರಮುಡಿ ಸೇರಿ ಜಿಲ್ಲೆಯಲ್ಲಿ ೨ ಹೊಸ ಪದವಿ ಪೂರ್ವ ಕಾಲೇಜುಗಳು ಮಂಜೂರಾಗಿರುತ್ತವೆ.
ಜಿಲ್ಲಾ ನಗರಾಭಿವೃದ್ಧಿ ಕೋಶ
ಕೊಪ್ಪಳ ಜಿಲ್ಲೆಯ ೭ ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಅಮೃತ ೨.೦ ಯೋಜನೆಯಡಿಯಲ್ಲಿ ಕೊಪ್ಪಳ-ಭಾಗ್ಯನಗರ ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿ ಮೊತ್ತ ರೂ.೧೩೯.೯೪ ಕೋಟಿ, ಯಲಬುರ್ಗಾ-ಕುಕನೂರು ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿ ಮೊತ್ತ ರೂ.೨೪೨.೨೩ ಕೋಟಿ. ಕನಕಗಿರಿ-ಕಾರಟಗಿ ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿ ಮೊತ್ತ ೧೯೫.೭೯ ಕೋಟಿ ರೂಪಾಯಿ ಮೊತ್ತಕ್ಕೆ ಗುತ್ತಿಗೆದಾರರಿಗೆ ಕಾಮಗಾರಿ ಆದೇಶ ನೀಡಲಾಗಿದೆ. ಕುಷ್ಟಗಿ ಕುಡಿಯವ ನೀರಿನ ಯೋಜನೆಯ ೨೮ ಕೋಟಿ ರೂ. ಮೊತ್ತದ ಕಾಮಗಾರಿ ಪ್ರಗತಿಯಲ್ಲಿರುತ್ತದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ
೨೦೨೪-೨೫ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ೨೬೫ ಶಾಲೆಗಳಿಗೆ ಹೊಸ ಕೊಠಡಿಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಸದರಿ ಅನುದಾನದಲ್ಲಿ ೧೮ ಹೊಸ ಅಂಗನವಾಡಿಗಳು ಮತ್ತು ೪ ಬಾಲ ಭವನಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ೭ ಸಮುದಾಯ ಆರೋಗ್ಯ ಕೇಂದ್ರಗಳಿಗೆ ವೈದ್ಯಕೀಯ ಉಪಕರಣಗಳನ್ನು ಖರೀದಿಸಲಾಗಿದೆ ಹಾಗೂ ೬ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಮತ್ತು ವೈದ್ಯಕೀಯ ಉಪಕರಣಗಳನ್ನು ಖರೀದಿಸಲಾಗಿದೆ. ಜಿಲ್ಲೆಯಲ್ಲಿ ೨೯ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಮುನಿರಾಬಾದ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ೨೦೨೪-೨೫ನೇ ಸಾಲಿನಲ್ಲಿ ಸದರಿ ಅನುದಾನದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಮತ್ತು ಪ್ರಯೋಗಾಲಯ ಉಪಕರಣಗಳನ್ನು ಖರೀದಿಸಲಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಯಿಂದ ನಮ್ಮ ಭಾಗದ ಸರ್ವತೋಮುಖ ಅಭಿವೃದ್ಧಿಗೆ ತುಂಬಾ ಅನುಕೂಲವಾಗಿದೆ. ೨೦೨೫-೨೬ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ ರೂ. ೨೩೬.೩೯ ಕೋಟಿ ಹಾಗೂ ಮ್ಯಾಕ್ರೋ ವಲಯದಲ್ಲಿ ರೂ. ೯೯.೬೮ ಕೋಟಿ ಹೀಗೆ ಒಟ್ಟು ರೂ. ೩೩೬.೦೮ ಕೋಟಿ ಅನುದಾನವನ್ನು ನಿಗದಿಪಡಿಸಲಾಗಿದೆ. ಜಿಲ್ಲೆಗೆ ನಿಗದಿಪಡಿಸಿದ ಅನುದಾನಕ್ಕೆ ಕ್ರಿಯಾ ಯೋಜನೆಯನ್ನು ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಕಾರ್ಮಿಕ ಇಲಾಖೆ
ಕಾರ್ಮಿಕ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಒಟ್ಟು ೧,೬೫,೬೪೯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೊಂದಣಿಯಾಗಿದ್ದು, ನೊಂದಾಯಿತ ಕಟ್ಟಡ ಕಾರ್ಮಿಕರಿಗಾಗಿ ವಿವಿಧ ಸೌಲಭ್ಯಗಳಾದ ಮದುವೆ ಧನಸಹಾಯ, ಹೆರಿಗೆ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಪಿಂಚಣಿ ಸೌಲಭ್ಯ, ದುರ್ಬಲತೆ ಪಿಂಚಣಿ, ಟ್ರೆöÊನಿಂಗ್ ಕಮ್ ಟೂಲ್‌ಕಿಟ್ ಸೌಲಭ್ಯ, ವಸತಿ ಸೌಲಭ್ಯ, ತಾಯಿ ಮಗು ಸಹಾಯ ಹಸ್ತ, ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ, ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ, ಶೈಕ್ಷಣಿಕ ಧನಸಹಾಯ ಸೌಲಭ್ಯಗಳನ್ನು ನೀಡುತ್ತಿದೆ.
ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
ಮರಣ ಹೊಂದಿದ ಕುರಿ, ಮೇಕೆ ಮಾಲೀಕರಿಗೆ ಅನುಗ್ರಹ ಕೊಡುಗೆ ಯೋಜನೆಯಡಿ ಪರಿಹಾರ ಧನ ವಿತರಿಸುವುದು ಆಕಸ್ಮಿಕ ಮರಣಹೊಂದಿದ ೩ ರಿಂದ ೬ ತಿಂಗಳ ಕುರಿ-ಮೇಕೆ ಮರಿಗಳಿಗೆ ರೂ. ೩೫೦೦ ಮತ್ತು ೬ ತಿಂಗಳ ಮೇಲ್ಪಟ್ಟ ಕುರಿ-ಮೇಕೆ ಮಾಲೀಕರಿಗೆ ಗರಿಷ್ಟ ರೂ. ೫೦೦೦ ಗಳ ಪರಿಹಾರಧನವನ್ನು ವಿತರಿಸಲಾಗುತ್ತಿದೆ. ೨೦೨೪-೨೫ನೇ ಸಾಲಿನಲ್ಲಿ ಒಟ್ಟು ೮,೪೧೦ ಕುರಿ-ಮೇಕೆಗಳ ೭,೮೦೨ ಮಾಲೀಕರಿಗೆ ರೂ. ೪೧೪ ಲಕ್ಷ ಪರಿಹಾರ ಧನವನ್ನು ವಿತರಿಸಲಾಗಿದೆ.
ಸಕಲ ಜಾತಿ, ಧರ್ಮ, ಭಾಷೆ, ಪ್ರದೇಶಗಳ ಜನರೆಲ್ಲಾ ಒಗ್ಗಟ್ಟಾಗಿ ಬೃಹತ್ ಪ್ರಜಾ ಪ್ರಭುತ್ವದ ಯಶಸ್ಸಿಗಾಗಿ ನಾವೆಲ್ಲರೂ ಸಹೋದರತ್ವದಿಂದ ಬಾಳುತ್ತಿದ್ದೇವೆ. ಬಹುಜನರ ಒಳಿತಿಗಾಗಿ ಬಹುಜನರ ಕಲ್ಯಾಣಕ್ಕಾಗಿ ಎಂಬ ಮಂತ್ರವನ್ನು ಸಾರುತ್ತಾ ಭವ್ಯಭಾರತ ಕಟ್ಟುವ ಸಂಕಲ್ಪ ಮಾಡೋಣ, ಭಾರತಕ್ಕೊಂದು ಹೊಸ ಭಾಷ್ಯ ಬರೆಯೋಣ ಎಂಬ ಸಂದೇಶವನ್ನು ಸಾರುತ್ತಾ ಮತ್ತೊಮ್ಮೆ ತಮಗೆಲ್ಲರಿಗೂ ಸ್ವಾತಂತ್ರೊö್ಯÃತ್ಸವ ದಿನಾಚರಣೆಯ ಶುಭಾಷಯಗಳನ್ನು ತಿಳಿಸುತ್ತೇನೆ.
ಧ್ವಜಾರೋಹಣ ನೆರವೇರಿಸಿದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ
ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದ್ವಜಜಾರೋಹಣ ನಡೆಸಿದ ಸಚಿವ
79 ಸ್ವತಂತ್ರ ದಿನದಂದು ಧ್ವಜಾರೋಹಣ ನೆರವೇರಿಸಿದ ಎಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ
17 ತೂಕಡಿಗಳಿಂದ ಗೌರವ ವಂದನೆ ಸ್ವೀಕಾರ
ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸಂಸದ ರಾಜಶೇಖರ ಜಿಲ್ಲಾಧಿಕಾರಿ ಸು ರೇಶ್ ಇಟ್ನಾಳ್, ಸಿಇಒ, ಎಸ್ಪಿ ರಾಮ್ ಎಲ್ ಅರಸಿದ್ದಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಗುಪ್ತ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಸೇರಿದಂತೆ ಇತರರು ಭಾಗಿ
Comments are closed.