ಅದ್ದೂರಿ ಮೆರವಣಿಗೆ ಮೂಲಕ ಶ್ರೀಕೃಷ್ಣ ಜಯಂತಿ ಆಚರಣೆ
ಶ್ರೀಕೃಷ್ಣ ಜಯಂತಿಯ ಅಂಗವಾಗಿ ಕೊಪ್ಪಳದಲ್ಲಿ ಶನಿವಾರ ಶ್ರೀಕೃಷ್ಣ ಭಾವಚಿತ್ರದ ಭವ್ಯ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಹಾಗೂ ಸಮಾಜದ ಮುಖಂಡರು ಶ್ರೀಕೃಷ್ಣ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಯಾದವ ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಕುರುಗೋಡ ರವಿ, ತಾಲ್ಲೂಕ ಅಧ್ಯಕ್ಷರಾದ ವೆಕ್ಕಂಪ್ಪ ಕಟ್ಟಿಮನಿ, ಮುಖಂಡರಾದ ಯಮನೂರಪ್ಪ ಭಂಗ್ಲೇರ, ಜಗನ್ನಾಥ ಹುಲಿಗಿ, ರಮೇಶ್ ನಾಗೇಶನಹಳ್ಳಿ, ಭೀಮಣ್ಣ ಲೇಬಗೇರಿ, ಸುರೇಶ ಗೊಲ್ಲರ್, ರೇಣುಕಾ ಪೂಜಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರರು ಸೇರಿದಂತೆ ಇತರೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
*ಮೆರವಣಿಗೆ:* ಶ್ರೀಕೃಷ್ಣ ಭಾವಚಿತ್ರದ ಮೆರವಣಿಗೆಯು ವಡಕರಾಯ ದೇವಸ್ಥಾನ ಆವರಣದಿಂದ ಪ್ರಾರಂಭಗೊಂಡು ಗಡಿಯಾರ ಕಂಬದವರೆಗೆ ವಿಜ್ರಂಭಣೆಯಿಂದ ನಡೆಯಿತು. ರಾಧಾ-ಕೃಷ್ಣ ವೇಷದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಎಲ್ಲರ ಗಮನ ಸೆಳೆದರು. ಮೆರವಣಿಗೆಯಲ್ಲಿ ಸಮಾಜದ ಮುಖಂಡರು, ಮಹಿಳೆಯರು, ಯುವಕರು, ಮಕ್ಕಳು ಭಾಗವಹಿಸಿದ್ದರು.
Comments are closed.