ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯ ಕಲ್ಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ
: ಜಿಲ್ಲೆಯಲ್ಲಿರುವ ಹೆಚ್‌ಐವಿ, ಏಡ್ಸ್ ಸೋಂಕಿತರಿಗೆ ಸಾಮಾಜಿಕ ಸೌಲಭ್ಯಗಳನ್ನು ಮತ್ತು ಸರ್ಕಾರದ ವಿವಿಧ ಇಲಾಖೆಗಳಿಂದ ಕಲ್ಪಿಸಬೇಕಿರುವ ಸೌಲಭ್ಯವನ್ನು ದೊರಕಿಸಲು ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಹೇಳಿದರು.ಜಿಲ್ಲೆಯಲ್ಲಿ ಏಡ್ಸ್ ನಿಯಂತ್ರಣಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹೆಚ್ಚಿನ ಆದ್ಯತೆ ನೀಡಬೇಕು. ಈ ರೋಗ ಹರಡುವಿಕೆಯ ಬಗ್ಗೆ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಿರಂತರವಾಗಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಏಡ್ಸ್ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಜಿಲ್ಲೆಯ ಬ್ಲಡ್ ಬ್ಯಾಂಕುಗಳು ಕೆಪಿಎಂಇ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು. ತಪ್ಪಿದ್ದಲ್ಲಿ ಅಂತಹ ಬ್ಲಡ್ ಬ್ಯಾಂಕುಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಶಶೀಧರ ಅವರು ಮಾತನಾಡಿ, ಅಕ್ಟೋಬರ್ 12ರ ವರೆಗೆ ಎರಡು ತಿಂಗಳುಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಹೆಚ್‌ಐವಿ & ಏಡ್ಸ್ ಅರಿವಿನ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಬೈಕ್ ರ‍್ಯಾಲಿ, ಪ್ಲಾಶ್ ಮಾಬ್, ಜಾನಪದ ಕಲಾತಂಡಗಳಿಂದ ಜಾಗೃತಿ ಕಾರ್ಯಕ್ರಮ, ವಿಶೇಷ ಆರೋಗ್ಯ ಶಿಬಿರಗಳು, ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಮ್ಯಾರಥಾನ್ ಮತ್ತು ರೆಡ್ ರಿಬ್ಬನ್ ಕ್ಲಬ್ ಪದವಿ ಕಾಲೇಜುಗಳಿಂದ ದತ್ತು ಗ್ರಾಮಗಳ ಸ್ವೀಕಾರ ಹಾಗೂ ಸಮಗ್ರ ಆರೋಗ್ಯ ತಪಾಸಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿ 13,943 ಹೆಚ್‌ಐವಿ ಏಡ್ಸ್ ಸೋಂಕಿತರು ನೋಂದಣಿಯಾಗಿರುತ್ತಾರೆ. ಇದರಲ್ಲಿ 12,113 ಜನರು ಚಿಕಿತ್ಸೆಗೆ ಅರ್ಹರಿದ್ದು, ಸದ್ಯ 6311 ಜನರು ಜಿಲ್ಲೆಯ ಎ.ಆರ್.ಟಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಪ್ರಾಕಾಶ ವಿ., ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರವಿಂದ್ರನಾಥ ಎಂ.ಹೆಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಂದಕುಮಾರ್, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕುಮಾರಸ್ವಾಮಿ ಗೋನಾಳ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಹೆಚ್., ಕಿಮ್ಸ್ ಪ್ರಾಶುಂಪಾಲರಾದ ಡಾ. ನಾರಾಯಣ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಗದೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ್ ಸೇರಿದಂತೆ ಎಲ್ಲಾ ತಾಲೂಕುಗಳ ಆರೋಗ್ಯಾಧಿಕಾರಿಗಳು, ತತ್ಞವೈದ್ಯರು, ವೈದ್ಯಾಧಿಕಾರಿಗಳು, ವಿವಿಧ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.