2022ನೇ ಸಾಲಿನ ರಾಜ್ಯಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ
: 2022ನೇ ಸಾಲಿನಲ್ಲಿ ಮುದ್ರಣಗೊಂಡು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿಯು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳ್ಳಿಸಿದ್ದು, ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಡಾ. ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ, ಎಂ.ಸಿ. ಬಡಾವಣೆ, (ಡಾ. ಬಾಲಗಂಗಾಧರನಾಥ ಸ್ವಾಮಿಜಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಹತ್ತಿರ) ವಿಜಯನಗರ ಬೆಂಗಳೂರು-560040 ಇಲ್ಲಿ 2025ರ ಆಗಸ್ಟ್ 20 ರಿಂದ ಆ. 22ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಏರ್ಪಡಿಸಲಾಗಿದೆ. ಆಯ್ಕೆಯಾದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಧಿಕಾರಿ ಕಛೇರಿ ಹಾಗೂ ಇಲಾಖೆಯ ಅಧಿಕೃತ ವೆಬ್‌ಸೈಟ್ dpl.karnataka.gov.in ನಲ್ಲಿ ನೋಡಬಹುದು.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ: 30-08-2025 ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬೇಕು ಎಂದು ಕೊಪ್ಪಳ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಯಮನೂರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.