ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಆಹ್ವಾನ
ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ. 2024-25ನೇ ಸಾಲಿನ ಕೊಪ್ಪಳ ಜಿಲ್ಲೆಯ ಐದು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿಯಿರುವ 87 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 374 ಸಹಾಯಕಿಯರ ಹುದ್ದೆಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆ ಸಮಿತಿಯಲ್ಲಿ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ನಿಯಮಾನುಸಾರ ಆಯ್ಕೆ ಮಾಡಲಾಗಿರುತ್ತದೆ.
ಈ ತಾತ್ಕಾಲಿಕ ಆಯ್ಕೆಗೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳಲ್ಲಿ, ತಹಶೀಲ್ದಾರರ ಕಛೇರಿಗಳಲ್ಲಿ, ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಹಾಗೂ ಸಂಬಂಧಿಸಿದ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದ್ದು, ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಯಸುವವರು ಆಗಸ್ಟ್ 30ರ ಸಂಜೆ 5.30 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗಳಲ್ಲಿ ಕಛೇರಿ ಸಮಯದೊಳಗೆ ಸಲ್ಲಿಸುವಂತೆ ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಂ ವೈ. ಶೆಟ್ಟಪ್ಪನವರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.