ವಿದ್ಯಾರ್ಥಿಗಳು ದುಷ್ಟಟಕ್ಕೆ ದಾಸರಾಗದೆ ತಮ್ಮ ಭವಿಷ್ಯ ರೂಪಿಸಿಕೊಳ್ಳಿ- ಡಾ. ಗೌರಿಶಂಕರ

ಒಟ್ಟು ಜನಸಂಖ್ಯೆಯಲ್ಲಿ ಶೇ.22ರಷ್ಟು ಹದಿ-ಹರೆಯದವರು ಇರುತ್ತಾರೆ. ಈ ಅವಧಿಯಲ್ಲಿ ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ ಬದಲಾವಣೆಯಾಗುತ್ತವೆ. ಇವರ ಆರೋಗ್ಯ ಕಾಪಾಡುವುದು ಪ್ರತಿಯೋಬ್ಬರ ಜವಾಬ್ದಾರಿಯಾಗಿದೆ. ಹದಿ-ಹರೆಯದವರಲ್ಲಿ ಸಾಮಾನ್ಯವಾಗಿ ಕಂಡುಬರುವ ಸಮಸ್ಯೆಗಳೆಂದರೆ, ಪೌಷ್ಠಿಕಾಂಶಕೊರತೆ, ಮಾನಸಿಕ ಆರೋಗ್ಯ ಸಮಸ್ಯೆಗಳು, ಲೈಂಗಿಕತೆ ಮತ್ತು ಸಂತಾನೋತ್ಪತ್ತಿಯ ಸಂಬಂಧಿತ ಸಮಸ್ಯೆಗಳು, ಋತುಚಕ್ರ ಸಂಬಂಧಿತ, ಸುಚಿತ್ವ ಹಾಗೂ ಸೋಂಕುಗಳು, ಸಾಂಕ್ರಾಮಿಕ-ಅಸಾಂಕ್ರಾಮಿಕ ರೋಗಗಳು ಹಾಗೂ ದುಷ್ಚಟ ವ್ಯಸನ ಸಮಸ್ಯೆಗಳು ಕಂಡುಬರುತ್ತವೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಆರ್.ಕೆ.ಎಸ್.ಕೆ ಕಾರ್ಯಕ್ರಮದಡಿಯಲ್ಲಿ “ಸ್ನೇಹ ಕ್ಲಿನಿಕ್”ಗಳು ಪ್ರತಿ ಗುರುವಾರ ಮತ್ತು ಶನಿವಾರ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ವೈದ್ಯಕೀಯ ಸೇವೆ ಹಾಗೂ ಆಪ್ತಸಮಾಲೋಚನೆ ಸೇವೆ ನೀಡಲಾಗುತ್ತದೆ. ಮುಖ್ಯವಾಗಿ ಹದಿ-ಹರೆಯದ ವಯಸ್ಸಿನಲ್ಲಿ ಉತ್ತಮ ಪೌಷ್ಠಿಕ ಆಹಾರ ಸೇವನೆ ಹಾಗೂ ಪ್ರತಿ ಸೋಮವಾರ ನೀಡುವ ಕಬ್ಬಿಣಾಂಶ ಮಾತ್ರೆ ಸೇವನೆ ಪ್ರತಿ 6 ತಿಂಗಳಿಗೊಮ್ಮೆ ಜಂತು ನಿವಾರಕ ಮಾತ್ರೆ ನೀಡುವುದರ ಮೂಲಕ ಆರೋಗ್ಯವಂತ ಯುವ ಸಂಪತ್ತು ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಕೊಪ್ಪಳ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಬಾಲ್ಯವಿವಾಹ ನಿಷೇಧ ಕಾಯ್ದೆ 2006, ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ, ಹದಿ-ಹರೆಯದವರ ಪೌಷ್ಠಿಕ ಆಹಾರ ಸೇವನೆ ಮತ್ತು ವೈಯಕ್ತಿಕ ಸ್ವಚ್ಛತೆ ಬಗ್ಗೆ ವಿವರವಾಗಿ ತಿಳಿಸಿದರು.
ತಾಲೂಕಾ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆಶಾಬೇಗಂ ಅವರು ಕ್ಷಯರೋಗ ನಿರ್ಮೂಲನೆ, ಕುಷ್ಠರೋಗ ನಿರ್ಮೂಲನೆ, ಜನಸಂಖ್ಯೆ ನಿಯಂತ್ರಣ ಹಾಗೂ ಸೋಂಕಿತ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತು ಮಾತನಾಡಿದರು.

ಪಿ.ಜಿ.ಡಿ.ಹೆಚ್.ಪಿ ಕೋರ್ಸಿನ ವಿದ್ಯಾರ್ಥಿಯಾದ ಗುರುರಾಜ ಹೆಚ್ ಅವರು ಹದಿ-ಹರೆಯದವರ ಆರೋಗ್ಯ ಸಮಸ್ಯೆಗಳು ಮತ್ತು ಪರಿಹಾರ ಕ್ರಮಗಳ ಕುರಿತು ಅಧ್ಯಾಯನದ ವರದಿಯನ್ನು ಕಾರ್ಯಕ್ರಮದಲ್ಲಿ ಮಂಡಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀರಾಮನಗರದ ಎ.ಕೆ.ಆರ್.ಡಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಮರೇಶ್ ಪಾಟೀಲ್ ಅವರು ಅಧ್ಯಕ್ಷತೆ ಭಾಷಣದಲ್ಲಿ ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳು ಬಹಳಷ್ಟು ಉಪಯುಕ್ತವಾಗಿವೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಆರ್.ಕೆ.ಎಸ್.ಕೆ ಕಾರ್ಯಕ್ರಮದ ಆಪ್ತಸಮಾಲೋಚಕ ನರಸಿಂಹಲು ಅವರು ಮಾತನಾಡಿ, ಹದಿ-ಹರೆಯದವರ ಆರೋಗ್ಯ ರಕ್ಷಣೆ ಮತ್ತು ಮಾನಸಿಕ ಸಮಸ್ಯೆಗಳ ಹಾಗೂ ಪರಿಹಾರ ಕುರಿತು ಹೇಳಿದರು.
ಈ ಕಾರ್ಯಕ್ರಮದಲ್ಲಿ ಶ್ರೀಮತಿ ಎ.ಕೆ.ಆರ್ ದೇವಿ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ಆಡಳಿತಾಧಿಕಾರಿ ಬಸವರಾಜ, ಸಹ ಉಪನ್ಯಾಸಕರು, ಐ.ಸಿ.ಟಿ.ಸಿ ಪ್ರಯೋಗಶಾಲಾ ತಂತ್ರಜ್ಞ ಗೋವಿಂದ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಂಜುಳಾ ಚೌದ್ರಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.