ಹಿಂದುಳಿದ ವರ್ಗಗಳ ಜನರ ಏಳಿಗೆಗಾಗಿ ದೇವರಾಜ ಅರಸು ಅವರು ಶ್ರಮಿಸಿದ್ದರು ರೆಡ್ಡಿ ಶ್ರೀನಿವಾಸ

ದೇವರಾಜ ಅರಸು ಅವರು ಮೈಸೂರು ಜಿಲ್ಲೆಯ ಕಲ್ಲಹಳ್ಳಿಯಲ್ಲಿ ಜನಿಸಿ ರಾಜಕೀಯದಲ್ಲಿ ಬಹು ಎತ್ತರಕ್ಕೆ ಬೆಳೆಯುವುದರ ಜೊತೆಗೆ ಕರ್ನಾಟಕ ರಾಜ್ಯದ ಧೀರ್ಘಕಾಲದ ಮುಖ್ಯಮಂತ್ರಿಗಳಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದ್ದಿದರು. ಅವರು ತಮ್ಮ ಅವಧಿಯಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರುನಾಮಕರಣ ಮಾಡಿರುವುದು ಮತ್ತೊಂದು ವಿಶೇಷವಾಗಿದೆ, ನಾವೆಲ್ಲರೂ ಅವರನ್ನು ಇಂದು ಸ್ಮರಿಸುವುದರ ಜೊತೆಗೆ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ ಎಂದರು.

ನಮ್ಮ ಜಿಲ್ಲೆಯವರಾದ ಶಿವರಾಜ್ ಎಸ್. ತಂಗಡಗಿ ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿ ಹಲವಾರು ವಸತಿ ನಿಲಯ ಮತ್ತು ಶಾಲಾ- ಕಾಲೇಜುಗಳ ಸ್ಥಾಪನೆಗೆ ಒತ್ತು ನೀಡುತ್ತಿದ್ದು, ಇದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ಕಲಿಕೆಗೆ ತುಂಭಾ ಅನುಕೂಲವಾಗಲಿದೆ ತಮಗೆಲ್ಲರಿಗೂ ದೇವರಾಜ ಅರಸು ಜನ್ಮ ದಿನಾಚರಣೆ ಶುಭಾಶಯಗಳು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸಹಾಯಕ ಆಯುಕ್ತರಾದ ಕ್ಯಾ. ಮಹೇಶ್ ಮಾಲಗಿತ್ತಿ ಅವರು ಮಾತನಾಡಿ ಅಂದು ಕೆಲವರಿಗೆ 400 ರಿಂದ 500 ಎಕರೆ ಜಮೀನು ಇದ್ದರೆ ಇನ್ನೂ ಕೆಲವು ಜನರಿಗೆ ಜಮೀನು ಇರಲಿಲ್ಲ ಹಾಗಾಗಿ ಎಲ್ಲರಿಗೂ ಭೂಮಿಯನ್ನು ಸಮಾನವಾಗಿ ಹಂಚಿಕೆಯಾಗಬೇಕು ಎನ್ನುವ ಉದ್ದೇಶದಿಂದ ದೇವರಾಜ ಅರಸರು ಉಳುವವನೆ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತಂದ ಧೀಮಂತ ನಾಯಕರಾಗಿದ್ದಾರೆ. ಈ ಕಾನೂನಿನಿಂದ ಜೀತ ಪದ್ಧತಿಯ ನಿರ್ಮೂಲನೆಗು ಸಹಾಯಕವಾಯಿತು. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಸನ್ಮಾನಿತರಾಗುತ್ತಿರುವ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಎಂದು ಹೇಳಿದರು.
ಕೊಪ್ಪಳ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್ ಅವರು ಡಿ. ದೇವರಾಜ ಅರಸು ಅವರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ ಸಾಮಾಜಿಕ ನ್ಯಾಯದ ಹರಿಕಾರ. ಪ್ರತಿಭಾನ್ವಿತ ಸಂಸದೀಯ ಪಟು. ಮೌನ ಸಾಮಾಜಿಕ ಕ್ರಾಂತಿಯ ಶಿಲ್ಪಿ. ಮತ್ಸದಿ ರಾಜಕಾರಣಿ ಹೀಗೆ ಹಲವಾರು ಹೆಸರುಗಳಿಂದ ದೇವರಾಜ ಅರಸು ಅವರನ್ನು ಕರೆಯುತ್ತಾರೆ. ಅವರೊಬ್ಬ ಕರ್ನಾಟಕ ಕಂಡ ಶ್ರೇಷ್ಠ ರಾಜಕಾರಣಿ. ಅವರು ರಾಜಮನೆತನಕ್ಕೆ ಸೇರಿದ್ದರು ಯಾವುದೇ ಅಹಂಭಾವ ತೋರಿಸದೆ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ಅಂದಿನ ಕಾಲದಲ್ಲಿ ಅವರ ಚುನಾವಣೆಗಾಗಿ ಜನರೆ ಹಣವನ್ನು ಸಂಗ್ರಹಿಸಿ ಕೊಡುತ್ತಿದ್ದರು ಅಂತಹ ವ್ಯಕ್ತಿತ್ವ ಅವರದಾಗಿತ್ತು. ಉಳುವವನೆ ಭೂ ಒಡೆಯ ಸೇರಿದಂತೆ ಇತರೆ ಹಲವಾರು ಜನಪರ ಕಾಯ್ದೆ ಮತ್ತು ಕಾನೂನುಗಳನ್ನು ಜಾರಿಗೆ ತರುವ ಮೂಲಕ ಬಡ ಜನರ ಏಳಿಗೆಗಾಗಿ ಶ್ರಮಿಸಿದ್ಧರು. ಅರಸು ಅವರ ಬಗ್ಗೆ ಎಷ್ಟು ಹೇಳಿದರು ಕಡಿಮೆ ಎಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ನಾಗಮಣಿ ಹೊಸಮನಿ ಮಾತನಾಡಿ ಹಿಂದುಳಿದ ವರ್ಗಗಳ ಧೀಮಂತ ನಾಯಕ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಇಂದು ಹಮ್ಮಿಕೊಳ್ಳಲಾಗಿದೆ. ದೇವರಾಜ ಅರಸು ಅವರು 1977 ರಲ್ಲಿಯೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ಥಾಪಿಸುವ ಮೂಲಕ ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ 78 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ. 7 ಮೋರಾರ್ಜಿ ದೇಸಾಯಿ ವಸತಿ ಶಾಲೆ. ಅಲೆಮಾರಿ- ಅರೆ ಅಲೆಮಾರಿಯ ಒಂದು ವಸತಿ ನಿಲಯ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ ನಮ್ಮ ಇಲಾಖೆಯ ಅಧಿನದಲ್ಲಿ ಒಟ್ಟು 10021 ವಿದ್ಯಾರ್ಥಿಗಳು ಕಲಿಯುತ್ತಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇರುವುದೇ ಮಕ್ಕಳಿಗಾಗಿ ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಹೇಳಿದರು.
ಡಿ. ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ವಸತಿ ನಿಲಯ ವಿಧ್ಯಾರ್ಥಿಗಳಿಂದಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. 2024-25 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ಶಾಲೆ ಮತ್ತು ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕೊಪ್ಪಳ ಡಿವೈಎಸ್ಪಿ ಯಶವಂತಕುಮಾರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊಪ್ಪಳ ತಹಶಿಲ್ದಾರ ವಿಠಲ ಚೌಗಲಾ, ಪ್ರಾಂಶುಪಾಲರಾದ ಮಂಜುನಾಥ, ಸಿದ್ದಲಿಂಗಪ್ಪ.ಚನ್ನಪ್ಪ ಹಂಚಿ, ಕೊಪ್ಪಳ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ನಾಗರತ್ನ. ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಮೇಲ್ವಿಚಾರಕರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಇತರೆ ಹಲವಾರು ಜನರು ಕಾರ್ಯಕ್ರಮದಲಿ ಉಪಸ್ಥಿತರಿದ್ದರು.
Comments are closed.