Sign in
Sign in
Recover your password.
A password will be e-mailed to you.
): ಕೊಪ್ಪಳ ವಿಶ್ವವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ದಿನಾಂಕ ವಿಸ್ತರಿಸಲಾಗಿದೆ.
ಕೊಪ್ಪಳ ವಿಶ್ವವಿದ್ಯಾಲಯದ ಮುಖ್ಯ ಆವರಣ, ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಸಂಯೋಜಿತ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನೇತರ ಮಹಾವಿದ್ಯಾಲಯಗಳಲ್ಲಿನ ಪ್ರಥಮ ವರ್ಷದ ಎಂ.ಎ. ಕನ್ನಡ, ಇಂಗ್ಲೀಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ಪ್ರದರ್ಶನ ಕಲೆ, ಮಹಿಳಾ ಅಧ್ಯಯನ ವಿಭಾಗ, ಪತ್ರಿಕೋದ್ಯಮ, ಎಂ.ಕಾಂ., ಎಂ.ಎಸ್ಸಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಭೂಗೋಳಶಾಸ್ತ್ರ ಮತ್ತು ಗಣಿತಶಾಸ್ತ್ರ ಕೋರ್ಸುಗಳಿಗೆ UUMS https:// uucms.Karnataka.gov.in/ ತಂತ್ರಾಂ ಶದ ಮುಖಾಂತರ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸೆಪ್ಟೆಂಬರ್ 19ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಶುಲ್ಕಗಳ ವಿವರ ಹಾಗೂ ಅರ್ಜಿಗಳನ್ನು ಸಲ್ಲಿಸಲು ಪಾಲಿಸಬೇಕಾದ ಮಾನದಂಡಗಳಿಗೆ ಸಂಬಂಧಿಸಿದ ಮಾಹಿತಿಯನ್ನು ವಿಶ್ವವಿದ್ಯಾಲಯದ ಜಾಲತಾಣ https://WWW. koppaluniversity.ac.in. ಗೆ ಭೇಟಿ ನೀಡಿ ಅಥವಾ ಪ್ರವೇಶಾತಿ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ಕೊಪ್ಪಳ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯ, ತಳಕಲ್ ಮುಖ್ಯ ಆವರಣ 4ನೇ ಮಹಡಿ, ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ಯಲಬುರ್ಗಾ ಮತ್ತು ಗಂಗಾವತಿ ಹಾಗೂ ಸಂಯೋಜಿತ ಮಹಾವಿದ್ಯಾಲಯಗಳಿಗೆ ನೇರವಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೊಪ್ಪಳದ ಪ್ರಭಾರ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get real time updates directly on you device, subscribe now.
Comments are closed.