ಸೆ. 17 ರಂದು ಕೊಪ್ಪಳದಲ್ಲಿ 78ನೇ ಕಲ್ಯಾಣ ಕರ್ನಾಟಕ ಉತ್ಸವ
: ಕೊಪ್ಪಳ ಜಿಲ್ಲಾಡಳಿತದ ವತಿಯಿಂದ 78ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ 2025ರ ಕಾರ್ಯಕ್ರಮವನ್ನು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಗದಗ ರಸ್ತೆಯ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ಉಪಸ್ಥಿತರಿರುವರು ಎಂದು ಜಿಲ್ಲಾಡಳಿತದ ಪ್ರಕಟಣೆಯು ತಿಳಿಸಿದೆ.
Comments are closed.