ವಡ್ಡರಹಟ್ಟಿಗೆ ಸಿಇಓ ಭೇಟಿ; ಸಿದ್ಧತೆ ಪರಿಶೀಲನೆ
: ಗೃಹ ಲಕ್ಷ್ಮಿ ಯೋಜನೆಯ ಅನುಷ್ಠಾನ ಮತ್ತು ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಗುರುತಿಸಿದ ಗಂಗಾವತಿ ತಾಲೂಕಿನ ವಡ್ಡರಹಟ್ಟಿಗೆ ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಪಾಂಡೆಯ ಅವರು ಆಗಸ್ಟ್ 29ರಂದು ಭೇಟಿ ನೀಡಿದರು.
ಗ್ರಾಮದ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣಕ್ಕೆ ತೆರಳಿ ಅಲ್ಲಿನ ಸಿದ್ಧತೆಯನ್ನು ಖುದ್ದು ಪರಿಶೀಲಿಸಿದರು.
ಆಗಸ್ಟ್ 30 ರಂದು ಬೆಳಗ್ಗೆ ನಿಗದಿತ ಸಮಯಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಮೈಸೂರನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುಖ್ಯಮಂತ್ರಿಗಳು, ವಿವಿಧ ಜಿಲ್ಲೆಗಳ ಆಯ್ದ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸುವರು. ಈ ಸಂವಾದ ಕಾರ್ಯಕ್ರಮ ವಡ್ಡರಟ್ಟಿ ಗ್ರಾಮ ಪಂಚಾಯತ್ ನಲ್ಲಿ ಅಚ್ಚುಕಟ್ಟಾಗಿ ನಡೆಯುವಂತಾಗಬೇಕು ಎಂದು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.
ಈ ವೇಳೆ ತಹಸೀಲ್ದಾರ ಮಂಜುನಾಥ ಭೋಗಾವತಿ, ಗಂಗಾವತಿ ತಾಪಂ ಇಓ ಲಕ್ಷ್ಮೀದೇವಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಸನ್ ಹಾಗೂ ಇತರರು ಇದ್ದರು.
Comments are closed.