ಕಾನೂನು ಪದವಿದರರಿಗೆ ತರಬೇತಿ ಭತ್ಯೆ: ಅರ್ಜಿ ಆಹ್ವಾನ
: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವಿ ಪಡೆದಿರುವ ಅಭ್ಯರ್ಥಿಗಳಿಗೆ 4 ವರ್ಷಗಳ ಕಾನೂನು ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಗೆ ಜಿಲ್ಲೆಯಲ್ಲಿ 03 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗವುದು. ಆಸಕ್ತ ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ ಹೊಸಪೇಟೆ ರಸ್ತೆ, ಕೊಪ್ಪಳ ಇಲ್ಲಿ ನಿಗದಿತ ಅರ್ಜಿಗಳನ್ನು ಉಚಿತವಾಗಿ ಪಡೆದು ಸೆಪ್ಟೆಂಬರ್ 11ರ ಸಂಜೆ 5 ಗಂಟೆಯೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.