೭೮ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ :  ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಜ್ ತಂಗಡಗಿ

Get real time updates directly on you device, subscribe now.

Koppal  ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ. ೭೮ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ  ಶಿವರಾಜ ಎಸ್.ತಂಗಡಗಿ

ಕೊಪ್ಪಳ ಧ್ವಜಾರೋಹಣ
೭೮ನೆಯ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ‌ಅಂಗವಾಗಿ ಇಂದು ‌ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಧ್ವಜಾರೋಹಣ ನೆರವೇರಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 18 ತುಕಡಿಗಳು ಗೌರವ ವಂದನೆ ಸಲ್ಲಿಸಿದರು.

. ಈ ಸಂದರ್ಭದಲ್ಲಿ. ಶಾಸಕ ರಾಘವೇಂದ್ರ ಹಿಟ್ನಾಳ್ ಸಂಸದ ರಾಜಶೇಖರ ಹಿಟ್ನಾಳ್, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ, ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ. ಎಸ್ಪಿ ರಾಮ್ ಎಲ್ ಅರಸಿದ್ದಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ. ಅವರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್,  ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ  ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರುದ್ರೇಶಪ್ಪ ಟಿ.ಎಸ್. ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸ್ವತಂತ್ರ ಯೋಧರು, ಉಪಸ್ತಿತರಿದ್ದರು.


ಕಲ್ಯಾಣ-ಕರ್ನಾಟಕ ಉತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ  ಸಂಸದರೇ, ಶಾಸಕರೇ, ಗೌರವಾನ್ವಿತ ಹಿರಿಯ ಸ್ವಾತಂತ್ರö್ಯ ಸೇನಾನಿಗಳೇ, ಜನಪ್ರತಿನಿಧಿಗಳೇ, ಹಿರಿಯ ನಾಗರಿಕರೇ, ಅಧಿಕಾರಿ ಮತ್ತು ನೌಕರ ವರ್ಗದವರೇ, ರೈತ ಬಾಂಧವರೇ, ನಾಗರಿಕ ಬಂಧುಗಳೇ, ಮುದ್ದು ಮಕ್ಕಳೇ, ತಾಯಂದಿರೇ, ಸಹೋದರ – ಸಹೋದರಿಯರೇ ಹಾಗೂ ಮಾಧ್ಯಮ ಮಿತ್ರರೇ, ತಮಗೆಲ್ಲ ೭೮ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಶುಭಾಶಯಗಳು.
ಕಲ್ಯಾಣ ಕರ್ನಾಟಕವು ನಿಜಾಮರ ಆಳ್ವಿಕೆಯಿಂದ ಸ್ವಾತಂತ್ರö್ಯಗೊAಡು ೭೭ ವರ್ಷಗಳನ್ನು ಪೂರೈಸಿ ೭೮ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಶುಭ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಈ ಉತ್ಸವದಲ್ಲಿ ಪಾಲ್ಗೊಳ್ಳಲು ನನಗೆ ತುಂಬಾ ಸಂತೋಷವೆನಿಸುತ್ತಿದೆ. ಇದಕ್ಕಾಗಿ ಹೋರಾಡಿದ ಎಲ್ಲಾ ಮಹನಿಯರಿಗೆ ಗೌರವ ವಂದನೆಗಳನ್ನು ಸಲ್ಲಿಸುತ್ತೇನೆ.
ಭಾರತಕ್ಕೆ ಸ್ವಾತಂತ್ರö್ಯ ಪಡೆದು ೧೯೪೭ರ ಆಗಸ್ಟ್ ೧೫ಕ್ಕೆ ತನ್ನ ಸಂಭ್ರಮದ ಹಬ್ಬ ಆಚರಿಸಿದರೆ, ಬ್ರಿಟಿಷರ ಕುಮ್ಮಕ್ಕಿನಿಂದ ಹೈದ್ರಾಬಾದ್ ಪ್ರಾಂತ್ಯವನ್ನು ತನ್ನ ಕಪಿಮುಷ್ಠಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದ ನಿಜಾಮರು ಭಾರತಕ್ಕೆ ಸ್ವಾತಂತ್ರö್ಯ ಅಧಿಕೃತವಾಗಿ ಬಂದರೂ, ಭಾರತ ಒಕ್ಕೂಟಕ್ಕೆ ಸೇರಲು ಕಾಶಿಂ ರಜ್ವಿ ಕುಮ್ಮಕ್ಕಿನಿಂದ ನಿರಾಕರಿಸಿದರು.
ಹೀಗಾಗಿ ನಿಜಾಮರ ಆಳ್ವಿಕೆಗೆ ಒಳಪಟ್ಟ ಈ ಭಾಗದ ಜಿಲ್ಲೆಗಳ ಜನ ಸ್ವಾತಂತ್ರೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲಾಗಲಿಲ್ಲ. ನಿಜಾಮರ ಆಡಳಿತದಲ್ಲಿ ಜನ ಸಾಮಾನ್ಯರಿಗೆ ವಾಕ್ ಸ್ವಾತಂತ್ರö್ಯ, ಸಂಘಟನಾ ಸ್ವಾತಂತ್ರö್ಯ ಹಾಗೂ ಪತ್ರಿಕಾ ಸ್ವಾತಂತ್ರö್ಯಕ್ಕೆ ಅವಕಾಶವಿರಲಿಲ್ಲ. ನಿಜಾಮರು ಉಸ್ಮಾನಾಬಾದಿನ ಕಾಶಿಂ ರಜ್ವಿ ನೇತೃತ್ವದಲ್ಲಿ ರಜಾಕರ ಪಡೆ ಎಂಬ ದಂಗೆಕೋರರನ್ನು ಒಳಗೊಂಡ ಸೈನ್ಯವನ್ನು ಕಟ್ಟಿ ಜನ ಸಾಮಾನ್ಯರ ಮೇಲೆ ನಿರಂತರವಾಗಿ ದೌರ್ಜನ್ಯ ಮಾಡುತ್ತಿದ್ದರು. ಇದನ್ನು ಸಹಿಸದ ಸ್ವಾಮಿ ರಮಾನಂದ ತೀರ್ಥರು ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟವನ್ನು ಅಹಿಂಸಾತ್ಮಕವಾಗಿ ಪ್ರಾರಂಭಿಸಿದರು.
ನಿಜಾಮರ ವಿರುದ್ಧ ಹೋರಾಡಲು ಸ್ವಾಮಿ ರಮಾನಂದ ತೀರ್ಥರ ನೇತೃತ್ವದಲ್ಲಿ ಹೋರಾಟ ಸಮಿತಿ ರಚಿಸುತ್ತಾ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಕರ್ನಾಟಕದ ಕೆಲ ಭಾಗಗಳಲ್ಲಿ ಶಿಬಿರಗಳನ್ನು ತೆರೆದರು. ಕಲಬುರ್ಗಿ ಭಾಗದಲ್ಲಿ ಸರದಾರ್ ಶರಣಗೌಡ ಇನಾಂದಾರ, ರಾಮಚಂದ್ರ ವೀರಪ್ಪ ಇವರ ನೇತೃತ್ವದಲ್ಲಿ ಹಾಗೂ ಕೊಪ್ಪಳ ಭಾಗದಲ್ಲಿ ಅಳವಂಡಿ ಶಿವಮೂರ್ತಿ ಸ್ವಾಮಿಗಳ ನೇತೃತ್ವದಲ್ಲಿ ಹೋರಾಟ ಆರಂಭವಾಯಿತು. ಅಳವಂಡಿ ಶಿವಮೂರ್ತಿ ಸ್ವಾಮಿಗಳು ಕ್ಯಾಂಪಿನ ಅಧ್ಯಕ್ಷರಾಗಿ ಮುಂಡರಗಿಯಲ್ಲಿ ಶಿಬಿರ ತೆರೆದರು. ಶಿಬಿರದಲ್ಲಿ ಪುಂಡಲೀಕಪ್ಪ ಜ್ಞಾನ ಮೋಠೆರವರು, ವೀರಭದ್ರಪ್ಪ ಶಿರೂರುರವರು, ಸಿ.ಎಂ. ಚುರ್ಚಿಹಾಳ ಮಠರವರು, ಸೋಮಪ್ಪ ಡಂಬಳರವರು, ಯರಾಶಿ ಶಂಕ್ರಪ್ಪನವರು, ಎಂ.ವಿರುಪಾಕ್ಷಪ್ಪನವರು, ನರಸಿಂಗರಾವ್, ಜನಾರ್ಧನರಾವ್ ದೇಸಾಯಿ, ಡಾ. ದೇವೇಂದ್ರಕುಮಾರ ಹಕಾರಿ, ಡಾ. ಪಂಚಾಕ್ಷರಿ ಹಿರೇಮಠ ಹಾಗೂ ಇನ್ನೂ ಹಲವರು ಈ ಭಾಗದ ಹೋರಾಟಗಾರರ ತ್ಯಾಗ ಬಲಿದಾನಗಳಿಂದ ನಮಗೆ ಸ್ವಾತಂತ್ರö್ಯ ದೊರೆಯಿತು.
ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ನಿರಾಕರಿಸಿರುವುದರಿಂದ ಹಾಗೂ ರಾಷ್ಟçದ ಸಾರ್ವಭೌಮತ್ವದ ಹಿತದೃಷ್ಟಿಯಿಂದ ಉಕ್ಕಿನ ಮನುಷ್ಯರೆಂದೇ ಹೆಸರಾಗಿರುವ ಸರ್ದಾರ್ ವಲ್ಲಭ ಬಾಯಿ ಪಟೇಲರ ದಿಟ್ಟತನದಿಂದ ಕೈಗೊಂಡ ಸೈನಿಕ ಕಾರ್ಯಾಚರಣೆಯಲ್ಲಿ, ನಿಜಾಮನು ಶರಣಾಗಿ ಭಾರತದ ಒಕ್ಕೂಟಕ್ಕೆ ಸೇರಿದ್ದರಿಂದ ೧೯೪೮ರ ಸೆಪ್ಟೆಂಬರ್ ೧೭ ರಂದು ಈ ಭಾಗಗಳು ರಾಜ್ಯದ ಇತರ ಭಾಗಗಳಂತೆ ಸ್ವತಂತ್ರö್ಯವಾಗಿ ಉಸಿರಾಡಲು ಸಾಧ್ಯವಾಯಿತು.

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ. ಈ ನಿಟ್ಟಿನಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡುತ್ತಾ ನಾವು ಬರುತ್ತಿದ್ದೇವೆ ಎಂದು ಹೇಳಲು ನನಗೆ ಹೆಮ್ಮೆ ಅನಿಸುತ್ತದೆ.

ಶಕ್ತಿ ಯೋಜನೆ
೨೦೨೩ರ ಜೂನ್ ೧೧ ರಿಂದ ಆರಂಭಗೊAಡ ಶಕ್ತಿ ಯೋಜನೆಯು ಜನ ಮೆಚ್ಚುಗೆಗಳಿಸಿದ ಯೋಜನೆಯಾಗಿದ್ದು, ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣದ ಸೌಲಭ್ಯ ಆರಂಭವಾದಾಗಿನಿAದ ೨೦೨೫ರ ಆಗಸ್ಟ್ ಮಾಹೆಯ ಅಂತ್ಯದವರೆಗೆ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು ೮.೭೨ ಕೋಟಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ. ಇದಕ್ಕಾಗಿ ೩೧೬.೯೮ ಕೋಟಿ ರೂ.ಗಳು ವೆಚ್ಚ ಮಾಡಲಾಗಿರುತ್ತದೆ.
ಗೃಹಜ್ಯೋತಿ ಯೋಜನೆ
೨೦೨೫ರ ಆಗಸ್ಟ್ ೩೧ ರವರೆಗೆ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆಯಲ್ಲಿ ಒಟ್ಟು ೨ ಲಕ್ಷ ೯೬ ಸಾವಿರದ ೪೪೮ ಗ್ರಾಹಕರ ಪೈಕಿ ೨ ಲಕ್ಷ ೭೮ ಸಾವಿರದ ೫೪೮ ಫಲಾನುಭವಿಗಳು ನೋಂದಾಯಿಸಿದ್ದು, ಶೇ ೯೩.೯೬ ರಷ್ಟು ಪ್ರಗತಿಯಾಗಿದೆ. ಈ ಯೋಜನೆಯಡಿ ಆಗಸ್ಟ್-೨೦೨೩ ರಿಂದ ಆಗಸ್ಟ್-೨೦೨೫ರ ವರೆಗೆ ಒಟ್ಟು ರೂ. ೩೦೮.೬೫ ಕೋಟಿ ಸಬ್ಸಿಡಿ ನೀಡಲಾಗಿರುತ್ತದೆ.
ಅನ್ನಭಾಗ್ಯ ಯೋಜನೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ೩೭ ಸಾವಿರದ ೧೯೧ ಅಂತ್ಯೋದಯ ಕಾರ್ಡ್ಗಳು, ೨ ಲಕ್ಷ ೯೦ ಸಾವಿರದ ೯೯೯ ಪಿ.ಹೆಚ್.ಹೆಚ್ ಪಡಿತರ ಚೀಟಿಗಳಿದ್ದು, ಅವುಗಳಲ್ಲಿನ ೧೨ ಲಕ್ಷ ೩೩ ಸಾವಿರದ ೯೯೮ ಸದಸ್ಯರಿಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಂತೆ ಪ್ರತಿ ಸದಸ್ಯರಿಗೆ ೫ ಕೆಜಿ ಆಹಾರ ಧಾನ್ಯ ಹಾಗೂ ರಾಜ್ಯ ಸರ್ಕಾರದ ವತಿಯಿಂದ ೫ ಕೆಜಿ ಸೇರಿ ಪ್ರತಿ ಸದಸ್ಯರಿಗೆ ೧೦ ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ.
ಕನಿಷ್ಟ ಬೆಂಬಲ ಬೆಲೆ ಯೋಜನೆಯಂತೆ ಸಂಗ್ರಹಿಸಲಾದ ಬಿಳಿಜೋಳವನ್ನು ಪಡಿತರ ಕಾರ್ಡುದಾರರಿಗೆ ವಿತರಿಸಲಾಗುತ್ತಿದೆ. ರೈತರು ಬೆಳೆದ ಒರಟು ಧಾನ್ಯಗಳನ್ನು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸಲಾಗುತ್ತಿದೆ. ಜಿಲ್ಲೆಯ ರೈತರು ಬೆಳೆಯುವ ಬಿಳಿಜೋಳವನ್ನು ಕನಿಷ್ಠ ಬೆಂಬಲ ಬೆಲೆಯಂತೆ ನಿಗದಿಪಡಿಸಿದ ದರ ರೂ. ೩,೩೭೧ ಇದ್ದು, ಅದರಂತೆ ರೈತರಿಂದ ಖರೀದಿಸುವ ಯೋಜನೆ ಜಾರಿಯಲ್ಲಿರುತ್ತದೆ.
ಯುವನಿಧಿ ಯೋಜನೆ
೨೦೨೩ರ ಡಿಸೆಂಬರ್ ೨೬ ರಂದು ಮಾನ್ಯ ಮುಖ್ಯಮಂತ್ರಿಗಳಿAದ ಯುವನಿಧಿ ಯೋಜನೆ ನೋಂದಣಿಗೆ ಚಾಲನೆ ನೀಡಲಾಗಿತ್ತು. ೨೦೨೪ರ ಜನವರಿ ೧೨ ರಂದು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಿರುದ್ಯೋಗ ಪದವೀಧರರಿಗೆ ಪ್ರತಿ ತಿಂಗಳು ರೂ.೩೦೦೦ ಹಾಗೂ ಡಿಪ್ಲೊಮಾದಾರರಿಗೆ ಪ್ರತಿ ತಿಂಗಳು ರೂ.೧೫೦೦ ಗಳ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ.
ಕೊಪ್ಪಳ ಜಿಲ್ಲೆಯಲ್ಲಿ ೨೦೨೫ರ ಸೆಪ್ಟೆಂಬರ್ ೯ ರವರೆಗೆ ೯,೮೦೯ ಫಲಾನುಭವಿಗಳು ಯುವನಿಧಿ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದು, ಇಲ್ಲಿಯವರೆಗೆ ಒಟ್ಟು ರೂ. ೧೭ ಕೋಟಿ ೨೦ ಲಕ್ಷ ೮ ಸಾವಿರ ನಿರುದ್ಯೋಗ ಭತ್ಯೆಯನ್ನು ನೀಡಲಾಗಿದೆ.
ಗೃಹಲಕ್ಷಿö್ಮ ಯೋಜನೆ
ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್ನಲ್ಲಿ ನಮೂದಿಸಿರುವಂತೆ ಕುಟುಂಬದ ಅರ್ಹ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ೨ ಸಾವಿರ ರೂ. ಆರ್ಥಿಕ ಸೌಲಭ್ಯ ನೀಡುವ ಗೃಹಲಕ್ಷಿö್ಮÃ ಯೋಜನೆಯಿಂದ ಕೊಪ್ಪಳ ಜಿಲ್ಲೆಯ ಲಕ್ಷಾಂತರ ಮಹಿಳೆಯರಿಗೆ ಅನುಕೂಲವಾಗುತ್ತಿದೆ.
ಜಿಲ್ಲೆಯಲ್ಲಿ ಜೂನ್-೨೦೨೫ರ ಅಂತ್ಯಕ್ಕೆ ಒಟ್ಟು ೩,೨೬,೮೨೩ ಫಲಾನುಭವಿಗಳು ಗೃಹಲಕ್ಷಿö್ಮÃ ಯೋಜನೆಯಡಿ ನೊಂದಣಿಯಾಗಿದ್ದು, ಇದುವರೆಗೂ ೨೦ ಕಂತುಗಳಲ್ಲಿ ಒಟ್ಟು ಮೊತ್ತ ರೂ. ೧೨೭೭.೧೪ ಕೋಟಿ ರೂಪಾಯಿ ಸಹಾಯ ಧನ ಫಲಾನುಭವಿಗಳ ಖಾತೆಗೆ ಸಂದಾಯವಾಗಿರುತ್ತದೆ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಯಿಂದ ನಮ್ಮ ಭಾಗದ ಸರ್ವೋತೋಮುಖ ಅಭಿವೃದ್ಧಿಗೆ ತುಂಬಾ ಅನುಕೂಲವಾಗಿದ್ದು, ಈ ಮಂಡಳಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ೫ ಸಾವಿರ ಕೋಟಿ ರೂ. ಅನುದಾನವನ್ನು ನೀಡುವ ಮೂಲಕ ನಮ್ಮ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡುತ್ತಿದೆ.
೨೦೨೫-೨೬ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಗೆ ಮೈಕ್ರೋ ವಲಯದಲ್ಲಿ ರೂ. ೨೩೬.೩೯ ಕೋಟಿ ಹಾಗೂ ಮ್ಯಾಕ್ರೋ ವಲಯದಲ್ಲಿ ರೂ. ೯೯.೬೮ ಕೋಟಿ ಹೀಗೆ ಒಟ್ಟು ರೂ. ೩೩೬.೦೮ ಕೋಟಿ ಅನುದಾನವನ್ನು ನಿಗದಿಪಡಿಸಲಾಗಿದೆ. ಜಿಲ್ಲೆಗೆ ನಿಗದಿಪಡಿಸಿದ ಅನುದಾನಕ್ಕೆ ಕ್ರಿಯಾ ಯೋಜನೆಯನ್ನು ರೂಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.
೨೦೨೫-೨೬ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ ಬಜೆಟ್ ಪ್ಯಾರಗಳು, ರಾಜ್ಯ ವಲಯ ಮತ್ತು ಇತರೆ ವಲಯದ ಅನುದಾನದಲ್ಲಿ ಪೊಲೀಸ್ ಇಲಾಖೆಯ ಕಾಮಗಾರಿಗಳಿಗೆ ರೂ.೭.೦೦ಕೋಟಿ, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ ರೂ.೧೦೦.೦೦ ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸೆಷಾಲಿಟಿ ಆಸ್ಪತ್ರೆ ಆರಂಭಿಸಲು ರೂ.೩೪.೦೦ಕೋಟಿ, ಯಲಬುರ್ಗಾ ತಾಲ್ಲೂಕಿನಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜು ಪ್ರಾರಂಭಿಸಲು ರೂ.೩.೦೦ ಕೋಟಿ, ಕೊಪ್ಪಳದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ರೂ.೫೦.೦೦ ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಕುಕನೂರು ಮತ್ತು ಕಾರಟಗಿ ತಾಲೂಕಿನಲ್ಲಿ ಜೆ.ಎಂ.ಎಪ್.ಸಿ. ನ್ಯಾಯಾಲಯವನ್ನು ಸ್ಥಾಪಿಸಲು ತಲಾ ರೂ.೯.೦೦ ಕೋಟಿಗಳನ್ನು, ಕನಕಗಿರಿ ತಾಲ್ಲೂಕಿನ ಸಿರವಾರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯ ಉನ್ನತ ಮಟ್ಟದ ತೋಟಗಾರಿಕೆ ತಂತ್ರಜ್ಞಾನ ಪಾರ್ಕನ ಅಭಿವೃದ್ಧಿ ಕಾಮಗಾರಿಗೆ ರೂ.೧೦.೦೦ ಕೋಟಿ, ಹಾಗೂ ಕೊಪ್ಪಳ ತಾಲೂಕಿನಲ್ಲಿ “ಪ್ರಜಾ ಸೌಧ ಕಟ್ಟಡ ನಿರ್ಮಾಣ ಮಾಡಲು ರೂ.೧೦.೦೦ಕೋಟಿಗಳನ್ನು ನಿಗದಿಪಡಿಸಲಾಗಿರುತ್ತದೆ. ಜಿಲ್ಲಾ ಪಂಚಾಯತಿ

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ೨೦೨೫-೨೬ನೇ ಸಾಲಿಗೆ ೮೩ ಲಕ್ಷ ಮಾನವ ದಿನಗಳ ಸೃಜನೆಯ ಗುರಿಯಿದ್ದು ೨೦೨೫ರ ಸೆಪ್ಟಂಬರ್ ೧೦ ಕ್ಕೆ ೪೮.೫೮ ಲಕ್ಷ ಮಾನವ ದಿನಗಳು ಸೃಜಿಸಿ ಶೇ. ೫೮ ರಷ್ಟು ಪ್ರಗತಿ ಸಾಧಿಸಲಾಗಿದೆ.
ಕೃಷಿ ಇಲಾಖೆ
ಈ ವರ್ಷ ೨೦೨೫ರ ಸೆಪ್ಟೆಂಬರ್ ೮ ರವರೆಗೆ ಜಿಲ್ಲೆಯ ಸರಾಸರಿ ವಾಡಿಕೆ ಮಳೆ ೩೪೯ ಮಿ.ಮಿ. ಆಗಿದ್ದು, ವಾಸ್ತವಿಕವಾಗಿ ೪೬೫ ಮಿ.ಮಿ. ಮಳೆಯಾಗಿದೆ. ಇದು ಶೇ. ೩೩ ರಷ್ಟು ಅಧಿಕವಾಗಿದೆ. ಈ ವರ್ಷ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿರುವುದರಿಂದ ಮುಂಗಾರು ಹಂಗಾಮು ಆಶಾದಾಯಕವಾಗಿದೆ. ಜಿಲ್ಲೆಯ ಬಿತ್ತನೆ ಗುರಿ ೩.೧೭ ಲಕ್ಷ ಹೆಕ್ಟರ್ ಆಗಿದ್ದು, ೩.೭೬ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಶೇ. ೧೧೯ರಷ್ಟು ಬಿತ್ತನೆಯಾಗಿದೆ. ರೈತರು ಮುಖ್ಯವಾಗಿ ಮೆಕ್ಕೆಜೋಳ ಬೆಳೆಯನ್ನು ಹೆಚ್ಚಾಗಿ ಬಿತ್ತನೆ ಮಾಡಿರುತ್ತಾರೆ.

ತೋಟಗಾರಿಕೆ ಇಲಾಖೆ
ಕರ್ನಾಟಕ ಸರ್ಕಾರದಿಂದ ೨೦೨೫-೨೬ನೇ ಸಾಲಿನ ಬಜೆಟ್ ನಲ್ಲಿ ಅನುಮೋದನೆಗೊಂಡಿರುವ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ೨೦೦ ಎಕರೆ ಪ್ರದೇಶದಲ್ಲಿ ಹೊಸದಾಗಿ ಅನುಷ್ಟಾನಗೊಳಿಸಲಾಗುತ್ತಿರುವ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ನ ಪ್ರಸ್ತುತ ವಿಸ್ತೃತ ಯೋಜನಾ ವರದಿಯನ್ನು ಸಲ್ಲಿಸಲಾಗಿದ್ದು ಆರ್ಥಿಕ ಬಿಡ್ಡ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಕೊಪ್ಪಳ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಈ ತೋಟಗಾರಿಕೆ ತಂತ್ರಜ್ಞಾನ ಪಾರ್ಕ ಒಂದು ವರದಾನವಾಗಲಿದೆ.
೨೦೨೫-೨೬ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಬೆಳೆಗಾರರಿಗೆ ಹಣ್ಣು ಮತ್ತು ಜೇನು ಮೇಳ-೨೦೨೬ ಅನ್ನು ಆಯೋಜಿಸಲಾಗುವುದು.
ಸಮಾಜ ಕಲ್ಯಾಣ ಇಲಾಖೆ
ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪಿ.ಯು.ಸಿ ಗೆ ರೂ. ೨೦ ಸಾವಿರ, ಪದವಿಯಲ್ಲಿ ರೂ. ೨೫ ಸಾವಿರ ಹಾಗೂ ಸ್ನಾತಕೋತ್ತರ ಪದವಿಗೆ ರೂ. ೩೦ ಸಾವಿರ, ವೃತ್ತಿಪರ ಕೋರ್ಸ್ಗಳಾದ ಮೆಡಿಕಲ್/ಇಂಜಿನಿಯರಿAಗ್‌ನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ. ೩೫ ಸಾವಿರಗಳವರೆಗೆ ಪ್ರೋತ್ಸಾಹಧನ ನೀಡಲಾಗುತ್ತದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಒಟ್ಟು ೫೬ ಸ್ವಂತ ಕಟ್ಟಡಗಳಿದ್ದು, ೧ ವಸತಿ ನಿಲಯದ ಸ್ವಂತ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು, ೪ ವಸತಿ ನಿಲಯಗಳಿಗೆ ಕೆ.ಕೆ.ಆರ್.ಡಿ.ಬಿ. ಅನುದಾನದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರಕಿದೆ.
ಒಟ್ಟು ೭ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು ೪ ವಸತಿ ಶಾಲೆಗಳು ಸ್ವಂತ ಕಟ್ಟಡದಲ್ಲಿ ನಿರ್ವಹಣೆಯಾಗುತ್ತಲಿವೆ. ೩ ವಸತಿ ಶಾಲೆಗಳಿಗೆ ನಿವೇಶನಗಳು ಲಭ್ಯವಿದ್ದು, ಕನಕಗಿರಿ ಹಾಗೂ ಹನುಮನಾಳ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಮಂಜೂರಾತಿ ನೀಡಲಾಗಿದೆ.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ
ಶಿಕ್ಷಣದಿಂದ ವಂಚಿತರಾಗಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ದೂರ ಶಿಕ್ಷಣ ಮಾದರಿಯಲ್ಲಿ ಉಚಿತ ಶಿಕ್ಷಣವನ್ನು ನೀಡಲಾಗುತ್ತಿದೆ.

ಶಿಕ್ಷಣ ಇಲಾಖೆ
ಕೊಪ್ಪಳ ಜಿಲ್ಲೆಯ ಇಟಗಿ, ಟಣಕನಕಲ್, ತಳುವಗೇರಾ ಹಾಗೂ ಕನಕಗಿರಿ ಸೇರಿ ಜಿಲ್ಲೆಯಲ್ಲಿ ಒಟ್ಟು ೪ ಸರಕಾರಿ ಆದರ್ಶ ಪದವಿ ಪೂರ್ವ ಕಾಲೇಜುಗಳನ್ನು ೨೦೨೫-೨೬ನೇ ಸಾಲಿನಿಂದ ಪ್ರಾರಂಭ ಮಾಡಲಾಗಿದೆ. ೨೦೨೪-೨೫ನೇ ಸಾಲಿಗೆ ಕೆ.ಕೆ.ಆರ್.ಡಿ.ಬಿ ಅನುದಾನದಿಂದ ಕುಕನೂರು ತಾಲೂಕಿನ ರಾಜೂರು-ಆಡೂರು ಹಾಗೂ ಯಲಬುರ್ಗಾ ತಾಲೂಕಿನ ಮುಧೋಳ-ಕರಮುಡಿ ಸೇರಿ ಜಿಲ್ಲೆಯಲ್ಲಿ ೨ ಹೊಸ ಪದವಿ ಪೂರ್ವ ಕಾಲೇಜುಗಳು ಮಂಜೂರಾಗಿರುತ್ತವೆ.

ಜಿಲ್ಲಾ ನಗರಾಭಿವೃದ್ಧಿ ಕೋಶ
ಕೊಪ್ಪಳ ಜಿಲ್ಲೆಯ ೭ ನಗರ ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಲು ಅಮೃತ ೨.೦ ಯೋಜನೆಯಡಿಯಲ್ಲಿ ಕೊಪ್ಪಳ-ಭಾಗ್ಯನಗರ ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿ ಮೊತ್ತ ರೂ.೧೩೯.೯೪ ಕೋಟಿ, ಯಲಬುರ್ಗಾ-ಕುಕನೂರು ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿ ಮೊತ್ತ ರೂ.೨೪೨.೨೩ ಕೋಟಿ. ಕನಕಗಿರಿ-ಕಾರಟಗಿ ಸಂಯುಕ್ತ ಕುಡಿಯವ ನೀರಿನ ಯೋಜನೆಯ ಕಾಮಗಾರಿ ಮೊತ್ತ ೧೯೫.೭೯ ಕೋಟಿ ರೂಪಾಯಿ ಮೊತ್ತಕ್ಕೆ ಗುತ್ತಿಗೆದಾರರಿಗೆ ಕಾಮಗಾರಿ ಆದೇಶ ನೀಡಲಾಗಿದೆ. ಕುಷ್ಟಗಿ ಕುಡಿಯವ ನೀರಿನ ಯೋಜನೆಯ ೨೮ ಕೋಟಿ ರೂ. ಮೊತ್ತದ ಕಾಮಗಾರಿ ಪ್ರಗತಿಯಲ್ಲಿರುತ್ತದೆ.
ಸ್ವಚ್ಛತೆಯೇ ಸೇವೆ-ಸ್ವಚ್ಛೋತ್ಸವ ೨೦೨೫ ರ ಅಂಗವಾಗಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮನೆ-ಮನೆಯಿಂದ ಹಸಿ ಕಸ, ಒಣ ಕಸ ಬೇರ್ಪಡಿಸಿ ಸಂಗ್ರಹಣೆ ಮಾಡಲು ಸ್ವಸಹಾಯ ಗುಂಪಿನ ಸದಸ್ಯರನ್ನು ಕಮ್ಯುನಿಟಿ ಮೊಬೈಲೈಸರ್‌ಗಳಾಗಿ ನೇಮಕ ಮಾಡಿಕೊಳ್ಳಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಸಾರ್ವಜನಿಕರು ತ್ಯಾಜ್ಯ ಹಾಕುತ್ತಿರುವ ಸ್ಥಳಗಳನ್ನು ಗುರ್ತಿಸಿ, ಸದರಿ ತ್ಯಾಜ್ಯವನ್ನು ವಿಲೇವಾರಿ ಮಾಡಿ ಶುಚಿಗೊಳಿಸಿ, ಸ್ಥಳಗಳಲ್ಲಿ ರಂಗೋಲಿ ಬಿಡಿಸಿ, ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಹಾಗೂ ಸದರಿ ಸ್ಥಳಗಳಲ್ಲಿ ಕಸ ವಿಲೇವಾರಿ ಮಾಡದಂತೆ ಗೋಡೆಬರಹ ಮೂಲಕ ತ್ಯಾಜ್ಯ ವಿಲೇವಾರಿ ವಾಹನಗಳಲ್ಲಿ ಹಸಿ ಕಸ ಒಣ ಕಸವನ್ನು ಮೂಲದಲ್ಲಿಯೇ ಬೇರ್ಪಡಿಸಿ ನೀಡುವಂತೆ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಸ್ವಚ್ಛ ಸುಂದರ ಹಾಗೂ ಹಸಿರು ನಗರಗಳನ್ನಾಗಿ ಮಾಡುವುದು ಪ್ರತಿಯೊಂದು ಸ್ಥಳೀಯ ಸಂಸ್ಥೆಗಳ ದ್ಯೇಯೋದ್ದೇಶವಾಗಿದೆ. ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

೨೦೨೫-೨೬ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ ಬಜೆಟ್ ಪ್ಯಾರಗಳು, ರಾಜ್ಯ ವಲಯ ಮತ್ತು ಇತರೆ ವಲಯದ ಅನುದಾನದಲ್ಲಿ ಜಿ.ಟಿ.ಟಿ.ಸಿ. ಬಹುಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊಪ್ಪಳದ ತಳಕಲ್‌ನಲ್ಲಿ ಸ್ಥಾಪಿಸಲು ರೂ.೨೫.೦೦ ಕೋಟಿ ನಿಗದಿಪಡಿಸಲಾಗಿರುತ್ತದೆ ಹಾಗೂ ಗರಿಷ್ಠ ೨೫ ಎಕರೆ ಜಮೀನು ಒದಗಿಸಲು ನಿರ್ಣಯಿಸಲಾಗಿರುತ್ತದೆ. ಇದರಿಂದ ಜಿಲ್ಲೆಯ ವೃತ್ತಿಪರ ಕೋರ್ಸಗಳಾದ ಐ.ಟಿ.ಐ, ಸರ್ಕಾರಿ ಪಾಲಿಟೆಕ್ನಿಕ್, ಇಂಜಿನೀಯರ್ ಹಾಗೂ ಇನ್ನಿತರೆ ಪದವಿಧರ ವಿದ್ಯಾರ್ಥಿಗಳಿಗೆ ಭವಿಷ್ಯದ ಕೌಶಲ್ಯ ತರಬೇತಿಯನ್ನು ಪಡೆಯಲು ಹಾಗೂ ಹೆಚ್ಚಿನ ಉದ್ಯೋಗವಕಾಶಗಳನ್ನು ಕಲ್ಪಿಸಿಕೊಳ್ಳಲು ಸಹಾಯಕವಾಗುತ್ತದೆ.
ಪ್ರವಾಸೋದ್ಯಮ ಇಲಾಖೆ
ಮಾನ್ಯ ಮುಖ್ಯಮಂತ್ರಿಗಳು, ೨೦೨೪-೨೫ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ (೩೭೨) ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು ಮೊದಲನೇ ಹಂತದಲ್ಲಿ ರೂ. ೧೦೦.೦೦ ಕೋಟಿಗಳನ್ನು ಒದಗಿಸಲಾಗುವುದು ಎಂದು ಘೋಷಿಸಿರುತ್ತಾರೆ.
೨೦೨೪-೨೫ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ೩೭೨ರಲ್ಲಿ ಘೋಷಿಸಿರುವಂತೆ ಶ್ರೀ ಆಂಜನೇಯಸ್ವಾಮಿಯ ಜನ್ಮಸ್ಥಳವೆಂದು ಪ್ರಸಿದ್ಧವಾದ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಎರಡನೇ ಹಂತದಲ್ಲಿ ಪ್ರವಾಸಿಗರಿಗೆ ಈ ಕೆಳಕಂಡAತೆ ಮೂಲಭೂತ ಸೌಕರ್ಯ ಕಾಮಗಾರಿಗಳನ್ನು ರೂ. ೧೦೦.೦೦ ಕೋಟಿಗಳ ಅಂದಾಜು ಮೊತ್ತದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಪ್ರವಾಸೋದ್ಯಮ ಮೂಲಸೌಲಭ್ಯ ನಿಗಮ(ಕೆ.ಟಿ.ಐ.ಎಲ್) ಬೆಂಗಳೂರುರವರ ಮೂಲಕ ಅನುಷ್ಠಾನಗೊಳಿಸಲು ಹಾಗೂ ಈ ಉದ್ದೇಶಕ್ಕೆ ಅಗತ್ಯವಿರುವ ರೂ.೧೦೦.೦೦ ಕೋಟಿಗಳ ಪೈಕಿ. ರೂ.೪೦.೦೦ ಕೋಟಿಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿAದ ಅನುಷ್ಠಾನಗೊಳಿಸಲಾಗುತ್ತಿದೆ.ನಮ್ಮ ಭಾಗದ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಪಣತೊಡುತ್ತಾ ಮತ್ತೊಮ್ಮೆ ತಮ್ಮೆಲ್ಲರಿಗೂ “ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ” ಶುಭಾಶಯಗಳನ್ನು ತಿಳಿಸಿ, ನನ್ನ ಮಾತಿಗೆ ವಿರಾಮ ಹೇಳುತ್ತೇನೆ.

Get real time updates directly on you device, subscribe now.

Comments are closed.

error: Content is protected !!