ಪೋಷಣ್ ಮಾಸಾಚರಣೆ: ಹುಲಿಗಿಯಲ್ಲಿ ಕಾರ್ಯಕ್ರಮ
ಕೀಲರ ಸಂಘ, ಮಹಿಳಾ ವiತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರ ಸಂಯುಕ್ತಾಶ್ರದಲ್ಲಿ ಗುರುವಾರದಂದು ಕೊಪ್ಪಳ ಯೋಜನೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹುಲಗಿಯಲ್ಲಿ 8 ನೇ ರಾಷ್ಟಿçÃಯ ಪೋಷಣ್ ಮಾಸಾಚರಣೆಯ ಅಂಗವಾಗಿ ಸ್ಥಳೀಯವಾಗಿ ಲಭ್ಯವಿರುವ ಪದಾರ್ಥಗಳನ್ನು ಬಳಸಿಕೊಂಡು ಪೂರಕ ಆಹಾರ ಪ್ರದರ್ಶನಗಳನ್ನು ಉತ್ತೇಜಿಸಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೋಹಿಣಿ ಕೋಟಗಾರ ಅವರು ಮಾತನಾಡಿ, ಪೌಷ್ಟಿಕ ಆಹಾರ ಹಾಗೂ ಉತ್ತಮ ಜೀವನ ಶೈಲಿಯನ್ನು ಅಳವಡಿಸಿಕೊಂಡು ಎಲ್ಲಾ ಗರ್ಭಿಣಿ, ಬಾಣಂತಿಯರು ಆರೋಗ್ಯಕರ ಮಗುವಿಗೆ ಜನ್ಮ ನೀಡುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳನ್ನು ತಿಳಿಸಿದರು. ಅಂಗನವಾಡಿ ಕೇಂದ್ರದಲ್ಲಿ ಪಡೆಯುವ ಎಲ್ಲಾ ಪೌಷ್ಟಿಕ ಆಹಾರಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರೂಪಾ ಗಂಧದ್, ಶಿವಶರಣಪ್ಪ ಗದ್ದಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೀಲಮ್ಮ ಗುಂಗಾಡಿ, ಗ್ರಾಮ ಪಂಚಾಯತಿ ಸದಸ್ಯರು, ಗರ್ಭಿಣಿ, ಬಾಣಂತಿಯರು, ವಲಯದ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ¸ಪ; Àಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಅನ್ನಪ್ರಾಶಣ, ಸೀಮಂತ ಕಾರ್ಯಕ್ರಮವನ್ನು ಮಾಡಲಾಯಿತು.
Comments are closed.