ಸಿಎಂ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರಬೇಕು: ರೆಡ್ಡಿ ಶ್ರೀನಿವಾಸ್

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಿಎಂ ಕಾರ್ಯಕ್ರಮದ ಪೂರ್ವ ಭಾವಿ ಸಭೆಯಲ್ಲಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿಕೆ
ವಿವಿಧ ಅಭಿವೃದ್ಧಿ ಕೆಲಸ ಮತ್ತು ಕಾಮಗಾರಿಗಳ ಉದ್ಘಾಟನೆಗೆ ಅ.6 ರಂದು ಸನ್ಮಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು, ಅಂದಿನ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಪಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ರವರು ಹೇಳಿದರು.
ತಾಲೂಕಿನ ಸೋಮನಾಳ ಸಮೀಪದ ರೈಸ್ ಟೆಕ್ನಾಲಜಿ ಪಾರ್ಕ್ ಕಛೇರಿಯಲ್ಲಿ ಗುರುವಾರದಂದು ಆಯೋಜಿಸಿದ್ದ ಕನಕಗಿರಿ ಹಾಗೂ ಕಾರಟಗಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆ, ಅನ್ನಬಾಗ್ಯ, ಗೃಹಜ್ಯೊತಿ ಸೇರಿದಂತೆ ವಿವಿಧ ಯೋಜನೆಗಳ ಲಾಭ ಪಡೆಯುತ್ತಿರುವ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕರೆ ತರಲು ನಮ್ಮ ತಾಲೂಕು ಮಟ್ಟದ ಗ್ಯಾರಂಟಿ ಸದಸ್ಯರು ಹೆಚ್ಚು ಕೆಲಸ ಮಾಡಬೇಕಾಗಿದೆ. ಅದಕ್ಕೆ ಬೇಕಾದ ಎಲ್ಲ ಸಹಕಾರ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ನೀಡಬೇಕು ಎಂದರು.
ನಂತರ ಗೃಹ ಲಕ್ಷ್ಮೀ, ಅನ್ನಬಾಗ್ಯ, ಗೃಹಜ್ಯೋತಿ, ಯುವನಿಧಿ, ಸ್ತ್ರೀ ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಇಲಾಖೆ ಅಧಿಕಾರಿಗಳು ವರದಿ ಮಂಡಿಸಿದರು. ಎರಡು ತಾಲೂಕಿನ ಯೋಜನೆಗಳ ಪ್ರಗತಿ ಸಾಧಿಸಲು ಜಿಲ್ಲಾ ಹಾಗೂ ಅಧ್ಯಕ್ಷರು ಸಲಹೆಗಳನ್ನು ನೀಡಿ, ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸದಸ್ಯರಿಂದ ಪ್ರಗತಿಗೆ ಸಂಬಂಧಿಸಿದಂತೆ ಚರ್ಚಿಸಿದರು.
ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸ್ವಾವಲಂಬಿ ಜೀವನ ಸಾಗಿಸುವ ಪಲಾನುಭವಿಗಳ ಸಕ್ಸಸ್ ಸ್ಟೋರಿಗಳನ್ನು ಎಲ್ಲ ಇಲಾಖೆಗಳ ಅಧಿಕಾರಿಗಳು ನಿಗದಿತ ಸಮಯದೊಳಗೆ ಸಲ್ಲಿಸಬೇಕು ಎಂದರು.
ಐಡಿ ಕಾರ್ಡ ವಿತರಣೆ: ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಗುರುತಿನಿ ಚೀಟಿಯನ್ನು ವಿತರಣೆ ಮಾಡಲಾಯಿತು.
ಸಂತಾಪ: ಕನ್ನಡ ನಾಡಿನ ಹಿರಿಯ ಸಾಹಿತಿ ಎಸ್.ಎಲ್ .ಭೈರಪ್ಪ ಅವರ ನಿಧನ ಹಿನ್ನೆಲೆ ಸಭೆಯ ಮುನ್ನ ಒಂದು ನಿಮಿಷಗಳಕಾಲ ಮೌನಚಾರಣೆ ಮಾಡಿ ಸಭೆ ಪ್ರಾರಂಭಿಸಿದರು.
ಜಿಲ್ಲಾ ಉಪಾಧ್ಯಕ್ಷರಾದ ನಾಗರಾಜ್ ಅರಳಿ, ಸದಸ್ಯರಾದ ಸೋಮನಾಥ ದೊಡ್ಡಮನಿ, ಶಕುಂತಲಾ, ಕಾರಟಗಿ ತಾಲೂಕು ಅಧ್ಯಕ್ಷ ದೇವಪ್ಪ ಭಾವಿಕಟ್ಟಿ, ಕನಕಗಿರಿ ತಾಲೂಕು ಅಧ್ಯಕ್ಷ ಹಜರತ್ ಹುಸೇನ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಜಶೇಖರ್, ಲಕ್ಷ್ಮೀದೇವಿ, ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು, ತಾ.ಪಂ ಹಾಗೂ ಗ್ರಾಪಂ ಸಿಬ್ಬಂದಿಗಳಿದ್ದರು.
Guarantee Scheme Progress Review Meeting koppal
Comments are closed.