ಖೇಲೋ ಇಂಡಿಯಾ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆ.30ಕ್ಕೆ
: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಖೇಲೋ ಇಂಡಿಯಾ ಯೋಜನೆ ಅಡಿ ನಿರ್ಮಾಣವಾದ ವಿವಿಧೋದ್ಧೇಶ ಒಳಾಂಗಣ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆಗಸ್ಟ್ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸರ್ಕಾರದ ಮಾಹಿತಿ, ಪ್ರಸಾರ, ಯುವ ವ್ಯವಹಾರಗಳು ಮತ್ತು ಕ್ರೀಡೆಗಳ ಸಚಿವರಾದ ಅನುರಾಗ್ ಸಿಂಗ್ ಠಾಕೂರ್, ಗೃಹ ಸಚಿವಾಲಯ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಕೇಂದ್ರ ರಾಜ್ಯ ಸಚಿವರಾದ ನಿಶಿತ್ ಪ್ರಮಾಣಿಕ್ ಅವರು ಗೌರವಾನ್ವಿತ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಬಿ.ನಾಗೇಂದ್ರ ಅವರು ಘನ ಉಪಸ್ಥಿತರಿರುವರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ವಾಲಿಬಾಲ್ ಹಾಗೂ ಶೆಟಲ್ ಬ್ಯಾಡ್ಮಿಂಟನ್ ಕ್ರೀಡಾ ಅಂಕಣ ಮತ್ತು ಕ್ರೀಡಾಕೂಟಗಳನ್ನು ಸಂಸದರಾದ ಕರಡಿ ಸಂಗಣ್ಣ ಅವರು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್ ಎನ್., ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಶಶಿಕುಮಾರ ಎನ್ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲೀನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ಪಿ.ಹೇಮಂತರಾಜ್ ಅವರು ಉಪಸ್ಥಿತರಿರುವರು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ ಜಾಬಗೌಡರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.