ನಮ್ಮ ಸರ್ಕಾರ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ‌ ಖರ್ಚು ಮಾಡುತ್ತಿದೆ: ಸಿ.ಎಂ 

Get real time updates directly on you device, subscribe now.

ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ

 

ಬೆಂಗಳೂರು ಅ 9:

ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿ.ಎಂ.ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು.

 

ಸಣ್ಣ ನೀರಾವರಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ “ನೀರಿದ್ದರೆ ನಾಳೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

 

ನಾಗರಿಕತೆ ಬೆಳೆದದ್ದು-ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖಾ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ. ಜನರಿಗೆ ನೀರಿನ ಅಗತ್ಯ ಮತ್ತು ನೀರಿನ ಸ್ಥಿತಿ ಗತಿ ಬಗ್ಗೆ ಸಾರ್ವಜನಿಕರಿಗೆ ಮನವರಿಕೆ ಮಾಡಿಸಬೇಕು ಎಂದು ಕರೆ ನೀಡಿದರು.

 

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ ಎಂದು ವಿವರಿಸಿದರು.

 

144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ , ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯ್ತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ವಿವರಿಸಿದರು.

 

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಸಣ್ಣ ನೀರಾವರಿ ಸಚಿವರಾದ ಎನ್.ಎಸ್.ಬೋಸರಾಜು, ಅರಣ್ಯ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್ ಖಂಡ್ರೆ, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಮ್ಯಾಗ್ಸೆಸ್ಸೇ ಪ್ರಶಸ್ತಿ ಪುರಸ್ಕೃತ ಪರಿಸರವಾದಿ ರಾಜೇದ್ರ ಸಿಂಗ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 

Our state is doing the best job in Asia in filling lakes with water: CM Siddaramaiah

Get real time updates directly on you device, subscribe now.

Comments are closed.

error: Content is protected !!