ಇದೇ ದಿ.12 ರಂದು ಕೊಪ್ಪಳ ತಾಲೂಕು ಬಣಜಿಗ ಸಮಾಜದ ದಿಂದ ಪ್ರತಿಭಾ ಪುರಸ್ಕಾರ

ಕೊಪ್ಪಳ,ಅ 10 : ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ(ರಿ) ತಾಲೂಕು ಘಟಕದಿಂದ ಮಧುಶ್ರೀ ಗಾರ್ಡನ್ ನಲ್ಲಿ ಅ.12 ರಂದು ಬೆಳಗ್ಗೆ 10.30ಗಂಟೆಗೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘ(ರೀ) ತಾಲೂಕ ಪ್ರಧಾನ ಕಾರ್ಯದರ್ಶಿ ಬಸವರಾಜ ವಿ ಕಮಲಾಪುರ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೊಪ್ಪಳ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದರು. ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ಯಶಸ್ವಿಯಾಗಿ ನೆರವೇರಿಸಲಾಗುವುದು, ಇದಕ್ಕೆ ಸಮಾಜದ ಎಲ್ಲಾ ಬಾಂಧವರು ಸಹಕರಿಸಲಿದ್ದಾರೆ ಎಂದು ತಾಲೂಕು ಅಧ್ಯಕ್ಷ ವೀರಣ್ಣ ಬುಳ್ಳಾ ತಿಳಿಸಿದರು
ವೀರಣ್ಣ ಮತ್ತಿಕಟ್ಟಿ ವಿಶ್ರಾಂತ ಸಭಾಪತಿ ಕರ್ನಾಟಕ ಸರಕಾರ, ಶಾಸಕ ರಾಘವೇಂದ್ರ ಹಿಟ್ನಾಳ್, ಹುಬ್ಬಳ್ಳಿ ಕೇಂದ್ರ ಶಾಸಕರಾದ ಮಹೇಶ ತೆಂಗಿನಕಾಯಿ, ತಾಲೂಕು ಅಧ್ಯಕ್ಷ ವೀರಣ್ಣ ಬುಳ್ಳಾ ಭಾಗವಹಿಸಲಿದ್ದಾರೆ ಎಂದರು. ಈ ಸಂದರ್ಭದಲ್ಲಿ, ಯುವ ಘಟಕದ ಅಧ್ಯಕ್ಷ ಅರವಿಂದ ಅಗಡಿ, ಕಾರ್ಯದರ್ಶಿ ಮಂಜುನಾಥ ವಿ. ಅಂಗಡಿ, ಮಹಿಳಾ ಘಟಕ ಅಧ್ಯಕ್ಷೆ ಶ್ರೀಮತಿ ಅಪರ್ಣಾ ಬಳೋಳ್ಳಿ, ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಶೆಟ್ಟರ್, ಇನ್ನಿತರರು ಉಪಸ್ಥಿತರಿದ್ದರು.
Karnataka State Banajiga Samaj Welfare Development Association (R) Taluk Unit
Comments are closed.