ಬಾಲಕಾರ್ಮಿಕ ಯೋಜನಾ ಸೊಸೈಟಿಗೆ ದೇಣಿಗೆ ನೀಡಲು ಮನವಿ
: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವುದು ಜರೂರಾದ ಅವಶ್ಯಕತೆಯಾಗಿರುತ್ತದೆ. ಈ ಪದ್ಧತಿಯು ದೇಶದ ಮುಂದಿರುವ ಕಠಿಣ ಸವಾಲಾಗಿದ್ದು, ಈ ಸಮಸ್ಯೆಯು ಒಂದು ಸಾಮಾಜಿಕ ಮತ್ತು ಆರ್ಥಿಕ ಸಮಸ್ಯೆಯಾಗಿದ್ದು, ಅನಕ್ಷರತೆ ಹಾಗೂ ಬಡತನಕ್ಕೆ ಹೊಂದಿಕೊAಡಿರುತ್ತದೆ. ಆದುದರಿಂದ ಸಮಾಜದ ಸಂಘಟಿತ ಪ್ರಯತ್ನ ಹಾಗೂ ಹೋರಾಟದಿಂದ ಮಾತ್ರ ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕರ್ನಾಟಕವನ್ನು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ಮುಕ್ತ ರಾಜ್ಯವನ್ನಾಗಿಸುವ ಉದ್ದೇಶವನ್ನು ಹೊಂದಲಾಗಿದೆ.ಮೇಲ್ಕಂಡ ಅಂಶಗಳ ಅನುಷ್ಠಾನಕ್ಕಾಗಿ ದೇಣಿಗೆ ನೀಡಲು ಬಯಸುವ ಉದ್ಯೋಗದಾತರು, ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಸಾರ್ವಜನಿಕರು ದೇಣಿಗೆಯನ್ನು ನೇರವಾಗಿ ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ Canara Bank Account Number: 110058103941, IFSC Code: CNRB0007295, Bangalore Workers Welfare Board Branch, Bangalore ಖಾತೆಗೆ ಜಮೆ ಮಾಡಲು ಈ ಮೂಲಕ ವಿನಂತಿಸಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ(ಕಾರ್ಮಿಕ ಇಲಾಖೆ)ಕಛೇರಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರಾದ ಡಾ.ಸುರೇಶ ಬಿ.ಇಟ್ನಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.