ಕವಲೂರು : ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
: ಕೊಪ್ಪಳ ತಾಲ್ಲೂಕು ಕವಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಗಣಿತ ವಿಷಯ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳನ್ನು ಮೆರಿಟ್ ಮತ್ತು ಪಾಠ ಪರಿವೀಕ್ಷಣೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಅಭ್ಯರ್ಥಿಗಳು ಎಂ.ಎಸ್‌ಸಿ ಅಥವಾ ಬಿಎಸ್‌ಸಿ, ಬಿಇಡಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ನವೆಂಬರ್ 4 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಕವಲೂರು ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.8904756089 ಗೆ ಸಂಪರ್ಕಿಸಬಹುದು ಎಂದು ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.