ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನ ಗಳಿಸಲು ಗುರಿ ನಿಗದಿ: ಸಿವಿಸಿ
ಕೊಪ್ಪಳ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಕೊಪ್ಪಳ ಜಿಲ್ಲೆಯಲ್ಲಿ ಗಳಿಸುವ ಗುರಿ ನಿಗದಿಪಡಿಸಲಾಗಿದೆ ಎಂದು ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಹೇಳಿದರು.
ಹಿನ್ನೆಲೆಯಲ್ಲಿ ಪಕ್ಷದ ಮುಖಂಡರಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
“ಎರಡೂ ಪಕ್ಷಗಳ ಮೈತ್ರಿ ಮುಂದಿನ ವಿಧಾನಸಭಾ ಚುನಾವಣೆ ತನಕವೂ ಇರಲಿದೆ ಎಂದು ಎರಡು ಪಕ್ಷಗಳ ಹೈಕಮಾಂಡ್ ಸ್ಪಷ್ಟಪಡಿಸಿದೆ. ಕೊಪ್ಪಳದಲ್ಲಿ ಮೈತ್ರಿ ಪಕ್ಷಗಳ ಬಾಂಧವ್ಯ ಕುರಿತು ಉಭಯ ಪಕ್ಷಗಳ ರಾಜ್ಯ ನಾಯಕರು ಸಂತೃಪ್ತಿ ವ್ಯಕ್ತಪಡಿಸಿದ್ದಾರೆ. ಮೈತ್ರಿ ಪಕ್ಷಗಳ ಗೆಲುವಿಗೆ ಜಿಲ್ಲೆಯಲ್ಲಿ ಪೂರಕ ವಾತಾವರಣ ಇದೆ. ಹೀಗಾಗಿ ಕೊಪ್ಪಳದಿಂದ ಅತಿ ಹೆಚ್ಚು ಸ್ಥಳೀಯ ಸಂಸ್ಥೆಗಳಲ್ಲಿ ಗೆಲುವು ಸಾಧಿಸುವ ಗುರಿ ಹೊಂದಲಾಗಿದೆ,” ಎಂದರು.


ಶಾಸಕರ ನಿಷ್ಕ್ರಿಯತೆ, ಸಂಸದರ ಸ್ವಜನ ಪಕ್ಷಪಾತ ಹಾಗೂ ದುರಾಡಳಿತದ ವಿರುದ್ಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ರೋಸಿ ಹೋಗಿದ್ದಾರೆ. ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಹಿಟ್ನಾಳ್ ಕುಟುಂಬದ ವಿರುದ್ಧ ಸಮರ ಸಾರಿದ್ದಾರೆ. ಆಡಳಿತ ವಿರೋಧ ಅಲೆ ಸ್ಪಷ್ಟವಾಗಿ ಕಾಣುತ್ತಿದೆ. ಇದನ್ನು ಉಪಯೋಗಿಸಿಕೊಂಡು ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಯೊಂದು ಮನೆಗೆ ತೆರಳಿ ಪಕ್ಷಕ್ಕೆ ಬೆಂಬಲ ಗಿಟ್ಟಿಸಿಕೊಳ್ಳಬೇಕು ಎಂದರು.
Comments are closed.