*ಬಿ.ಎಡ್., ಡಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2022-23 ನೇ ಸಾಲಿಗೆ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನ್ಯಾಷನಲ್ ಕೌನ್ಸೀಲ್ ಫಾರ್ ಟೀಚರ್ ಏಜ್ಯುಕೇಷನ್ ನಿಂದ ಮಾನ್ಯತೆ ಪಡೆದಿರುವ ಬಿ.ಎಡ್ ಹಾಗೂ ಡಿಪಾರ್ಟಮೆಂಟ್ ಆಫ್ ಸ್ಟೇಟ್ ಏಜ್ಯುಕೇಷನ್ ರೀಸರ್ಚ & ಟ್ರೈ ನಿಂಗ್ ನಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಕೋರ್ಸ್ಗಳ ಸರ್ಕಾರಿ, ಅರೆಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ ಹಾಗೂ ಡಿ.ಎಡ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ರೂ. 25,000 ಗಳ ವಿಶೇಷ ಪ್ರೋತ್ಸಾಹಧನ ಪ್ರತಿ ವರ್ಷ (ಗರಿಷ್ಠ 2 ವರ್ಷ ಮಾತ್ರ) ನೀಡಲಾಗುತ್ತಿದೆ.
*ಅರ್ಜಿ ಸಲ್ಲಿಸುವ ವಿಧಾನ:* ಬಿ.ಎಡ್ ಹಾಗೂ ಡಿ.ಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ವಿಶೇಷ ಪ್ರೋತ್ಸಾಹಧನಕ್ಕೆ ವೆಬ್‌ಸೈಟ್ https://sevasindhu.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಸ್ವೀಕೃತವಾದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್21 ಕೊನೆಯದಿನವಾಗಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು ಹಾಗೂ ಷರತ್ತುಗಳಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಥವಾ ತಾಲೂಕು ಕಚೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ದೂ.ಸಂ: 08539-225070, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಗಂಗಾವತಿ ದೂ.ಸಂ; 08533-230027, ಕುಷ್ಟಗಿ ಮೊ.ಸಂ: 8880482486, ಯಲಬುರ್ಗಾ ಮೊ.ಸಂ: 9620522537 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಸುರೇಶ ಕೋಕರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.