ಕನ್ನಡ ಭಾಷೆ, ಸಂಸ್ಕೃತಿ ಉಳಿಸಿ ಬೆಳೆಸಿ : ಕೆ ರಾಜಶೇಖರ್ ಹಿಟ್ನಾಳ್

Get real time updates directly on you device, subscribe now.

ಕೊಪ್ಪಳ : ನಾಡಿನಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಇಂಥ ಕಾರ್ಯಕ್ರಮವನ್ನು ಹೆಚ್ಚು ಹೆಚ್ಚು ಹಮ್ಮಿಕೊಳ್ಳಬೇಕು ಎಂದು ಸಂಸದ ಕೆ.ರಾಜಶೇಖರ್ ಹಿಟ್ನಾಳ್ ಹೇಳಿದರು.

ಅವರು ಶನಿವಾರದಂದು ನಗರದ ಸಾಹಿತ್ಯ ಭವನದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಜನ ರಕ್ಷಣ ಸಂಘ ಕೊಪ್ಪಳ ವತಿಯಿಂದ ‘ಕೊಪ್ಪಳ ಜಿಲ್ಲೆಯ ಕನ್ನಡ ಶಿಕ್ಷಕರಿಗೆ ಹಾಗೂ ನಿವೃತ್ತ ಹೊಂದಿದ ಶಿಕ್ಷಕರಿಗೆ, ನಿವೃತ್ತ ಹೊಂದಿದ ಪೋಲೀಸ್ ಅಧಿಕಾರಿಗಳಿಗೆ ಸನ್ಮಾನ ಸಮಾರಂಭದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಂದು ಬಹಳಷ್ಟು ಜನ ವಿದೇಶಿ ಸಂಸ್ಕೃತಿಗೆ ಮಾರುಹೋಗುತ್ತಿದ್ದಾರೆ ಹೀಗಾಗಿ ಕನ್ನಡ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪ್ರತಿಯೊಬ್ಬರೂ ಉಳಿಸಲು ಇಂತಹ ಕಾರ್ಯಕ್ರಮಗಳು ಅವಶ್ಯವಾಗಿದೆ ಕಾರ್ಯಕ್ರಮವನ್ನು ಅಚ್ಚು ಕಟ್ಟಾಗಿ ಮಾಡಿದ್ದೀರಿ ನನಗೆ ಸಂತಸ ತಂದಿದೆ ಎಂದರು.

 ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕರ್ನಾಟಕ ಜನ ರಕ್ಷಣಾ ಸಂಘದ  ರಾಜ್ಯಾಧ್ಯಕ್ಷ ಎಂ.ಪಿ.ಗವಿ ಹೂಗಾರ ವಹಿಸಿದ್ದರು.

 ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಸಂಘಟನೆಯ ಗೌರವಾಧ್ಯಕ್ಷ ಕರ್ನಲ್ ವೆಂಕಟೇಶ್ ಎಂ. ನಾಯಕ್, ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣವರ್, ಕ್ಷೇತ್ರಾ ಶಿಕ್ಷಣಾಧಿಕಾರಿ ಹನುಮಂತಪ್ಪ ನಾಯಕ್, ಕಂದಾಯ ಅಧಿಕಾರಿ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶರಣ ಬಸನಗೌಡ ಪಾಟೀಲ್ ಹಲಿಗೇರಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಹಿರೇಗೌಡ್ರು, ಪ್ರಶಾಂತ್ ನಾಯಕ್, ಮುಖಂಡರಾದ ಯಲ್ಲಪ್ಪ ಹಳೆಮನೆ ಮುದ್ಲಾಪುರ್, ವೀರಣ್ಣ.ಟಿ ಕಟ್ಟಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಗೀತಾ ಗವಿಸಿದ್ದಪ್ಪ ಮುತ್ತಾಳ, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಎಂ.ಮಹಾಲಕ್ಷ್ಮಿ

 ಸಂಘಟನೆಯ ಕಾನೂನು

ಸಲಹೆಗಾರರಾದ ವಕೀಲರಾದ ವೀರಭದ್ರಪ್ಪ ನಾಯಕ್, ಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಕೆಎಸ್ ಮೈಲಾರಪ್ಪ, ಯಂಕಪ್ಪ ಹೊಸಳ್ಳಿ, ಬಾಳಪ್ಪ, ಪಿಎಸ್ಐ ಈರಪ್ಪ, ಸತೀಶ್ ಹೂಗಾರ್, ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಡಾ.ಗವಿಸಿದ್ದಪ್ಪ ಮುತ್ತಾಳ ಪ್ರಾಧ್ಯಾಪಕರು, ಲೇಖಕರು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರು ಕರ್ನಾಟಕದಲ್ಲಿ ಕನ್ನಡ ಭಾಷೆ ಉಳಿವಿಗಾಗಿ ಕುರಿತು ಉಪನ್ಯಾಸ ನೀಡಿದರು.

ನಂತರ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಮತ್ತು ಪೊಲೀಸ್ ಅಧಿಕಾರಿಗಳಿಗೆ  ಸನ್ಮಾನಿಸಿ ಗೌರವಿಸಲಾಯಿತು, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರು ಪೊಲೀಸ್ ಅಧಿಕಾರಿಗಳು ಪಾಲ್ಗೊಂಡು ಯಶಸ್ವಿಗೊಳಿಸಿದರು .

Get real time updates directly on you device, subscribe now.

Comments are closed.

error: Content is protected !!