ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ರಿಗೆ ಸಚಿವ ಸ್ಥಾನ ನೀಡಬೇಕು- ಗಾಳೆಪ್ಪ ಎಚ್ ಪೂಜಾರ್

Get real time updates directly on you device, subscribe now.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹರಿಕಾರರು, ಬಡವರ ಬಂಧು, ದೀನ ದಲಿತರ ನಾಯಕ, ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಸರ್ವ ಜನಾಂಗದ ನಾಯಕರಾದ, ಸೋಲಿಲ್ಲದ ಸರದಾರ, 3ನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ನಮ್ಮೆಲ್ಲರ ನೆಚ್ಚಿನ ಜನಪ್ರಿಯ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಕಾಂಗ್ರೆಸ್ ನ ಎಸ್ ಸಿ ಘಟಕದ ಜಿಲ್ಲಾಧ್ಯಕ್ಷರಾದ ಗಾಳೆಪ್ಪ ಎಚ್ ಪೂಜಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷದ ಕರ್ನಾಟಕ ರಾಜ್ಯ ಸರ್ಕಾರದಲ್ಲಿ, ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸಂಪುಟ ಪುನರ್ ರಚನೆಯ ಸಂದರ್ಭದಲ್ಲಿ ಮೊದಲನೇ ಆದ್ಯತೆ ನಮ್ಮೆಲ್ಲರ ನೆಚ್ಚಿನ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಎಂದು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಾಹೇಬ್ರು ರವರಿಗೆ ಹಾಗೂ ಕೆಪಿಸಿಸಿ ಅಧ್ಯಕ್ಷರು ಮತ್ತು ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಸಾಹೇಬ್ರ ರವರಿಗೆ ಒತ್ತಾಯ ಮಾಡಲಾಗುವುದು ಎಂದು ಎಸ್ ಸಿ ಘಟಕದ ಜಿಲ್ಲಾಧ್ಯಕ್ಷರಾದ ಗಾಳೆಪ್ಪ ಎಚ್ ಪೂಜಾರ್ ರವರು ಹಾಗೂ ಎಸ್ ಸಿ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಪರಶುರಾಮ್ ಕೆರೆಹಳ್ಳಿ ರವರು ಒತ್ತಾಯಿಸಲಾಗುವುದು ಎಂದು ಪತ್ರಿಕೆಗೆ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!