ಅಲ್ಪಸಂಖ್ಯಾತ ವಿರೋದಿ, ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು ಮತ್ತು ೪% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಲು ವೆಲ್ಪೆರ್ ಪಾರ್ಟಿ ಮನವಿ

Welfare Party appeals to repeal anti-minority, anti-people laws and restore 4% Muslim reservation

0

Get real time updates directly on you device, subscribe now.

ಕೊಪ್ಪಳ : ಅಲ್ಪಸಂಖ್ಯಾತ ವಿರೋಧಿ ಮತ್ತು ಜನವಿರೋಧಿ ಕಾಯ್ದೆಗಳನ್ನು ರದ್ದುಪಡಿಸಲು   ಮತ್ತು ೪% ಮುಸ್ಲಿಂ ಮೀಸಲಾತಿಯನ್ನು ಮರುಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ವೆಲ್ಪೆರ್ ಪಾರ್ಟಿ ಮನವಿ  ಸಲ್ಲಿಸಿತು.
ಬಿಜೆಪಿ ಸರಕಾರವು ಜಾರಿಗೆ ತಂದ ಕರ್ನಾಟಕ ಜಾನುವಾರು ಸಂರಕ್ಷಣಾ ಕಾಯ್ದೆ, ೨೦೨೧ ಮತ್ತು ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, ೨೦೨೧ ಅತಿ ವಿವಾದಿತ, ಕೋಮು ಪ್ರಚೋದಿತ ಮತ್ತು ಸಂವಿಧಾನ ವಿರೋಧಿ ಕಾನೂನುಗಳಾಗಿವೆ. ಇವುಗಳನ್ನು ರದ್ದುಪಡಿಸಬೇಕು. ಕರ್ನಾಟಕ ಧರ್ಮ ಸ್ವಾತಂತ್ರ ಸಂರಕ್ಷಣಾ ಕಾಯ್ದೆ, ೨೦೨೧ (ಮತಾಂತರ ನಿಷೇಧ ಕಾಯ್ದೆ): ಈ ಕಾಯ್ದೆಯ ನೆಪವನ್ನು ಇಟ್ಟುಕೊಂಡು ಕೋಮುವಾದಿಗಳು ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯ ಎಸಗುತ್ತಿದ್ದಾರೆ. ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಯಾವುದೇ ಒತ್ತಡವಿಲ್ಲದೆ, ತಮಗೆ ಬೇಕಾದ ಧರ್ಮವನ್ನು ಒಪ್ಪಿ, ಆ ಪ್ರಕಾರ ನಡೆದುಕೊಂಡು ಹೋಗಲು ಅವಕಾಶ ಕಲ್ಪಿಸಿದೆ. ಆದರೆ ಈ ಕಾನೂನು ಚಾಲ್ತಿಯಲ್ಲಿರುವುದು ಸಂವಿಧಾನ ವಿರೋಧಿಯಾಗಿದೆ ಮತ್ತು ಇದು ಸಂಘ ಪರಿವಾರದ ಕೋಮು ಅಜೆಂಡಾದ ಭಾಗವಾಗಿದೆ. ೨೦೨೩ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಒಂದು ವರ್ಷದ ಒಳಗೆ ಇಂತಹ ಕರಾಳ ಮತ್ತು ಜನವಿರೋಧಿ ಕಾನೂನುಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಸ್ಪಷ್ಟವಾದ ಆಶ್ವಾಸನೆಯನ್ನು ನೀಡಿತ್ತು. ಆದ್ದರಿಂದ, ಪ್ರಸ್ತುತ ಸರಕಾರವು ತನ್ನ ಭರವಸೆಯನ್ನು ಈಡೇರಿಸುವ ತುರ್ತು ಅವಶ್ಯಕತೆಯಿದೆ.೪% ಮುಸ್ಲಿಂ ಮೀಸಲಾತಿ ಮರುಸ್ಥಾಪನೆ ಮಾಡಬೇಕು
ಕಳೆದ ಸರಕಾರವು ರದ್ದುಪಡಿಸಿದ ೪% ಮುಸ್ಲಿಂ ಮೀಸಲಾತಿಯನ್ನು ತಕ್ಷಣವೇ ಮರುಸ್ಥಾಪಿಸಬೇಕು. ಇದು ಮುಸ್ಲಿಂ ಸಮುದಾಯದ ಸಾಮಾಜಿಕ ನ್ಯಾಯ ಮತ್ತು ಶಿಕ್ಷಣ, ಉದ್ಯೋಗದಲ್ಲಿ ಸಮಾನ ಅವಕಾಶವನ್ನು ಖಾತರಿಪಡಿಸಲು ಅತ್ಯವಶ್ಯಕವಾಗಿದೆ. ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಿರ್ಣಯಗಳನು ಕೈಗೊಳ್ಳಬೇಕೆಂದು ಪಕ್ಷವೂ ಮನವಿ ಪತ್ರದಲ್ಲಿ  ಅಗ್ರಹಿಸಿದೆ.
 ಕೊಪ್ಪಳ ಜಿಲ್ಲಾಧಿಕಾರಿಗಳ ಮುಖಾಂತರ   ಮುಖ್ಯಮಂತ್ರಿಗಳವರಿಗೆ ಈ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಆದಿಲ್ ಪಟೇಲ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮೊಹಮ್ಮದ್ ಅಲೀಮುದ್ದೀನ, ರಾಜ್ಯ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಸಬಿಹಾ ಪಟೇಲ್, ನಾಸಿರ ಮಾಳೆಕೊಪ್ಪ ಹಾಗೂ ಅಹ್ಮದ್ ಖಾನ್ ಹಾಗೂ ಇತರರು ಉಪಸ್ಥಿತರಿದ್ದರು.

ಕೊಪ್ಪಳ ಜಿಲ್ಲಾಧಿಕಾರಿಗಳ ಮುಖಾಂತರ   ಮುಖ್ಯಮಂತ್ರಿಗಳವರಿಗೆ ಈ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಆದಿಲ್ ಪಟೇಲ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಮೊಹಮ್ಮದ್ ಅಲೀಮುದ್ದೀನ, ರಾಜ್ಯ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಸಬಿಹಾ ಪಟೇಲ್, ನಾಸಿರ ಮಾಳೆಕೊಪ್ಪ ಹಾಗೂ ಅಹ್ಮದ್ ಖಾನ್ ಹಾಗೂ ಇತರರು ಉಪಸ್ಥಿತರಿದ್ದರು.

Welfare Party appeals to repeal anti-minority, anti-people laws and restore 4% Muslim reservation

Get real time updates directly on you device, subscribe now.

Leave A Reply

Your email address will not be published.

error: Content is protected !!