ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ-    ಶಾಸಕ ಕೆ. ರಾಘವೇಂದ್ರ ಹಿಟ್ನಾಳ

Get real time updates directly on you device, subscribe now.

9.50 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅಡಿಗಲ್ಲು.

ಕೊಪ್ಪಳ : ಇಂದು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಕೊಪ್ಪಳ, ನರೇಗಲ್, ಯತ್ನಟ್ಟಿ, ಚಿಲವಾಡಗಿ ಹಾಗೂ ಕಲಿಕೇರಿ ಗ್ರಾಮಗಳಲ್ಲಿ 9. 50 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ನೆರವೇರಿಸಿದರು.

ನಂತರ ನರೇಗಲ್ ಗ್ರಾಮದಲ್ಲಿ 2 ಕೋಟಿ ವೆಚ್ಚದಲ್ಲಿ ನರೇಗಲ್ -ಮಾದಿನೂರು ಕ್ರಾಸ್ ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಕ್ಷೇತ್ರದಲ್ಲಿ ಹದಗೆಟ್ಟಿರುವ ಎಲ್ಲಾ ರಸ್ತೆಗಳಿಗೂ ಕೂಡ ಅನುದಾನ ತರುವ ಕೆಲಸ ಮಾಡುತ್ತಿದ್ದೇವೆ. ಹಂತ ಹಂತವಾಗಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸುತ್ತೇವೆ.ಅಲ್ಲದೆ ದದೇಗಲ್ ನಿಂದ ನರೇಗಲ್ ವರೆಗೂ ಕೂಡ ಉತ್ತಮ ಸುಸಜ್ಜಿತ ರಸ್ತೆ ನಿರ್ಮಾಣ ಮಾಡುತ್ತೇವೆ.

ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಿದ್ದೇವೆ. ಕೆಕೆಆರ್ ಡಿಬಿ, ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಡಿಯಲ್ಲಿ ಹದಗೆಟ್ಟಿರುವ ರಸ್ತೆಗಳಿಗೆ ಅನುದಾನ ನೀಡಿದ್ದೇವೆ.

5 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು : ಕೊಪ್ಪಳ ನಗರದಲ್ಲಿ ಶಿವಪ್ರಿಯ ಲೇಔಟ್ ನಲ್ಲಿ 5 ಕೋಟಿ ವೆಚ್ಚದಲ್ಲಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಸತಿ ನಿಲಯದ ಕಟ್ಟಡ ನಿರ್ಮಾಣಕ್ಕೆ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಆಡುಗಲ್ಲು ನೆರವೇರಿಸಿದರು.

ಈ ಸಂಧರ್ಭದಲ್ಲಿ ಜಿ. ಪಂ ಮಾಜಿ ಸದಸ್ಯರಾದ ಪ್ರಸನ್ನ ಗಡಾದ್,ಓಜನಹಳ್ಳಿ ಗ್ರಾ. ಪಂ ಅಧ್ಯಕ್ಷರಾದ ಉಡಚಪ್ಪ ಭೋವಿ,ಯಮನೂರಪ್ಪ ನಾಯಕ್, ಮುಕ್ಕಣ್ಣ ಚಿಲವಾಡಗಿ,ಯಲ್ಲಪ್ಪ ಹಳೆಮನಿ,ರಮೇಶ್ ಓಜನಹಳ್ಳಿ,ಅನಿಲ್ ಬರೋಟಿ, ಧರ್ಮ ರಾವ್ ಕಂಪಸಾಗರ,ತಹಸೀಲ್ದಾರ್ ವಿಠ್ಠಲ್ ಚೌಗಲೇ,ಚಂದಪ್ಪ ನರೇಗಲ್,ವೀರನಗೌಡ ನರೇಗಲ್, ಬಸವರಾಜ್ ಮೇಟಿ,ಹನಮಂತ ಮೇಟಿ, ಮಾರುತಿ ಕಲಿಕೇರಿ,ಮಂಜುನಾಥ್ ಓಜನಹಳ್ಳಿ,ಉಮೇಶ ಮೇಟಿ,ಪ್ರಭು ಕಲಾಲ್, ಅಕ್ಬರ್ ಪಲ್ಟಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಫೋಟೋ ಕ್ಯಾಪ್ಶನ್ : ಇಂದು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ ಅವರು 2 ಕೋಟಿ ವೆಚ್ಚದಲ್ಲಿ ನರೇಗಲ್ -ಮಾದಿನೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದರು.

Get real time updates directly on you device, subscribe now.

Comments are closed.

error: Content is protected !!