ಕೊಪ್ಪಳ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Get real time updates directly on you device, subscribe now.

ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಇಂದು ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ಕೊಪ್ಪಳ   ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ. ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ. ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ. ಜಿಲ್ಲಾ ಪಂಚಾಯತ ಮುಖ್ಯ ‌ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಮಕ್ಕಳಿಗೆ ಪಲ್ಸ್ ಪೊಲೀಯೊ  ಹಾಕುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.

ಡಿಸೆಂಬರ್. 21 ರಿಂದ‌ 24 ರವರೆಗೆ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದ್ದು. ಸಾರ್ವಜನಿಕರು ತಮ್ಮ ಹತ್ತಿರದ ಲಸಿಕಾ ಕೇಂದ್ರಕ್ಕೆ ತೆರಳಿ 5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೊ ಹಾಕಿಸುವ ಮೂಲಕ ಮಗುವಿಗೆ ಶಾಶ್ವತ ಅಂಗವಿಕಲತೆ ತರಬಲ್ಲ ಪೋಲಿಯೊವನ್ನು ಲಸಿಕೆಯ ಮೂಲಕ ಪ್ರತಿರೋಧಿಸೋಣ.

Koppal Pulse Polio Vaccination Campaign

ಈ ಸಂದರ್ಭದಲ್ಲಿ ಜಿಲ್ಲಾ ‌ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಟಿ. ಲಿಂಗರಾಜು. ಆರ್.ಸಿ.ಎಚ್ ಅಧಿಕಾರಿ. ರೋಟರಿ ಕ್ಲಬ್ ಸದಸ್ಯರು ಸೇರಿದಂತೆ ಆರೋಗ್ಯ ಇಲಾಖೆಯ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!