ಕೊಪ್ಪಳ ಜಿಲ್ಲೆಯ ಕೌಶಲ್ಯಾಭಿವೃದ್ಧಿ ಕೇಂದ್ರದ ಬಲವರ್ಧನೆಗೆ ಒತ್ತು: ಡಾ.ಶರಣಪ್ರಕಾಶ ಪಾಟೀಲ
Get real time updates directly on you device, subscribe now.
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿನ ಶ್ರೀ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲಾಭಿವೃದ್ಧಿ ಕೇಂದ್ರದ ಬಲವರ್ಧನೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಆಗಿರುವ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣಪ್ರಕಾಶ ಆರ್ ಪಾಟೀಲ ಅವರು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆಯಿಂದ ಕುಕನೂರ ತಾಲೂಕಿನ ಎಂಜಿನಿಯರಿAಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 4ರಂದು ನಡೆದ ಸಹ ಸ್ಪಂದನ- ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನದಿಂದ ಆಗಿರುವ 371ಜೆ ಮೀಸಲು ಅನುಕೂಲವನ್ನು ಕಲ್ಯಾಣ ಕರ್ನಾಟಕ ಭಾಗದ ಅಸಂಖ್ಯೆ ವಿದ್ಯಾರ್ಥಿ-ಯುವಜನರು ಪಡೆಯುತ್ತಿದ್ದಾರೆ. ಎಂಜಿನಿಯರಿAಗ್ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಬೇಗನೆ ಉದ್ಯೋಗ ಸಿಗುವ ನಿಟ್ಟಿನಲ್ಲಿ ಉತ್ತಮವಾದ ಕೌಶಲ ತರಬೇತಿ ಕೇಂದ್ರ ಆರಂಭಕ್ಕೆ ಅವಕಾಶ ಮಾಡಿಕೊಡಲಾಗುವುದು. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕೌಶಲಾಭಿವೃದ್ಧಿ ಕೇಂದ್ರವು ರಾಜ್ಯದಲ್ಲಿಯೇ ಬೆಸ್ಟ್ ಸ್ಕಿಲ್ ಸೆಂಟರ್ ಆಗಬೇಕು; ಇನ್ನೀತರರಿಗೆ ಇದು ಮಾದರಿಯಾಗುವ ನಿಟ್ಟಿನಲ್ಲಿ ಈ ಕೇಂದ್ರಕ್ಕೆ ಶಕ್ತಿ ತುಂಬಲು ವೀಕ್ಷಣೆಗೆ ಬಂದಿದ್ದು, ಇದಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಅವರು ಹೇಳಿದರು.
ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ಅವರು ಮಾತನಾಡಿ, ಶಿಕ್ಷಣ ಸಂಸ್ಥೆಗಳು ಮಕ್ಕಳ, ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುತ್ತವೆ ಎನ್ನುವ ಸ್ಪಷ್ಟ ತಿಳಿವಳಿಕೆಯನ್ನು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಹೊಂದಿರುವ ಕಾರಣಕ್ಕೆ ಬಯಲುಸೀಮೆ ಕೊಪ್ಪಳ ಜಿಲ್ಲೆಗೆ ಅವರು ತಂದಿರುವ ಸರ್ಕಾರಿ ಎಂಜಿನಿಯರಿAಗ್ ಕಾಲೇಜ್ ಮೂಲಭೂತ ಸೌಕರ್ಯಗಳನ್ನು ಹೊಂದಿದ ಶ್ರೇಷ್ಟತೆಯಲ್ಲಿ ಬೆಂಗಳೂರು, ಮೈಸೂರು ಭಾಗದ ಯಾವುದೇ ಕಾಲೇಜುಗಳಿಗಿಂತ ಕಡಿಮೆ ಇಲ್ಲ ಎಂದರು. ರಾಜ್ಯದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನದಿಂದಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊರೆತ 371ಜೆ ಸೌಕರ್ಯದಿಂದಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಪಡೆದುಕೊಳ್ಳುತ್ತಿರುವ ವಿದ್ಯಾರ್ಥಿಗಳಲ್ಲಿ ಉನ್ನತ ಮಟ್ಟದ ಕೌಶಲ ವೃದ್ಧಿಗೆ ಮತ್ತಷ್ಟು ಅನುಕೂಲತೆ ಕಲ್ಪಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲಾಭಿವೃದ್ಧಿ ಕೇಂದ್ರದ ಕಾರ್ಯವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸುವುದು ಅಗತ್ಯವಿದೆ ಎಂದರು.
ಎಂಜಿನಿಯರಿAಗ್ ಶಿಕ್ಷಣದಲ್ಲಿ ಇಡೀ ರಾಜ್ಯದಲ್ಲಿಯೇ ಖಾಸಗಿ ಕಾಲೇಜಗಳ ಪ್ರಾಬಲ್ಯವೇ ಹೆಚ್ಚಿದೆ. ಕೇವಲ 16 ಸರ್ಕಾರಿ ಎಂಜಿನಿಯರಿAಗ್ ಕಾಲೇಜುಗಳಿವೆ. ಉದ್ಯೋಗ ಪಡೆಯಲು ಕೌಶಲಕ್ಕೆ ಈಗ ಬಹಳ ಮಹತ್ವವಿದ್ದು, ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲಾಭಿವೃದ್ಧಿ ಕೇಂದ್ರದ ವೃದ್ಧಿಗೆ ತಾವು ಕೈಜೋಡಿಸುವುದಾಗಿ ತಿಳಿಸಿದರು. ಈ ಕೌಶಲ್ಯಾಭಿವೃದ್ಧಿ ಸೆಂಟರ್ ಬೃಹಧಾಕಾರವಾಗಿ ಬೆಳೆದಲ್ಲಿ ಎಂಜಿನಿಯರಿAಗ್ ಪದವೀಧರರು ಒಳಗೊಂಡAತೆ ಡಿಪ್ಲೊಮಾ, ಐಟಿಐ ಇನ್ನೀತರ ಕೋರ್ಸಗಳನ್ನು ಓದುವವರಿಗೆ ಉದ್ಯೋಗ ಪಡೆಯಲು ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಪ್ರಾಸ್ತಾವಿಕ ಮಾತನಾಡಿದರು. ಸಮಾರಂಭದಲ್ಲಿ ಮಾಜಿ ಸಚಿವರಾದ ಬಿ.ಆರ್.ಯಾವಗಲ್, ಉಪ ಕುಲಪತಿಗಳಾದ ಪ್ರೊ.ಬಿ.ಕೆ.ರವಿ, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ ಜಿ, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಎಂಜಿನಿಯರಿAಗ್ ಕಾಲೇಜಿನ ಪ್ರಾಚಾರ್ಯರಾದ ವಿರುಪಾಕ್ಷ ಬಾಗೋಡಿ ಹಾಗೂ ಕಾಲೇಜಿನ ಬೋಧಕ ವೃಂದ, ವಿದ್ಯಾರ್ಥಿಗಳು ಇದ್ದರು. ಅಕ್ಷತಾ ಹಿರೇಮಠ ಪ್ರಾರ್ಥಿಸಿದರು.

ಗ್ಲೋಬಲ್ ಸ್ಡಾö್ಯಂಡರ್ಡ್ ವಿದ್ಯಾರ್ಥಿಗಳನ್ನು
ಸೃಷ್ಟಿಸುವ ದೂರದೃಷ್ಟಿ: ಬಸವರಾಜ ರಾಯರೆಡ್ಡಿ
—
ಕೊಪ್ಪಳ ಸೆಪ್ಟೆಂಬರ್ 05 (ಕ.ವಾ.): ಬಿಸಿಲು ನಾಡಿನಲ್ಲು ಸಹ ಗ್ಲೋಬಲ್ ಸ್ಡಾö್ಯಂಡರ್ಡ್ ವಿದ್ಯಾರ್ಥಿಗಳನ್ನು ಸೃಷ್ಟಿಸುವ ದೂರದೃಷ್ಟಿಯಿಂದಾಗಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಸಾಮರ್ಥ್ಯವನ್ನು ಬಲಪಡಿಸುವ ಕಾರ್ಯವನ್ನು ನಿರಂತರ ಮಾಡಲಾಗುತ್ತಿದೆ ಎಂದು ಯಲಬುರ್ಗಾ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಹೇಳಿದರು.
ಕಾಲೇಜು ಶಿಕ್ಷಣ ಇಲಾಖೆಯಿಂದ ಕುಕನೂರ ತಾಲೂಕಿನ ಎಂಜಿನಿಯರಿAಗ್ ಕಾಲೇಜಿನಲ್ಲಿ ಸೆಪ್ಟೆಂಬರ್ 04 ರಂದು ನಡೆದ ಸಹ ಸ್ಪಂದನ- ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಡೀ ರಾಜ್ಯದಲ್ಲಿಯೇ ಬೆಸ್ಟ್ ಕಾಲೇಜು ಆಗಬೇಕು ಎನ್ನುವ ಯೋಜನೆಯೊಂದಿಗೆ ಕೊಪ್ಪಳ ಜಿಲ್ಲೆಯಲ್ಲಿ ಎಂಜಿನಿಯರಿAಗ್ ಕಾಲೇಜನ್ನು ಆರಂಭಿಸಲಾಗಿದೆ. ಅಂದಾಜು 180 ಕೋಟಿ ರೂ.ವೆಚ್ಚದಲ್ಲಿ ಈ ಕಾಲೇಜು ಸುಸಜ್ಜಿತವಾಗಿ ನಿರ್ಮಾಣವಾಗಿದೆ. ಇಲ್ಲಿ ಇನ್ನು ಅಗತ್ಯವಿರುವ ಮಾನವ ಸಂಪನ್ಮೂಲ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸುವ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದ ಅವರು, ಉತ್ತಮ ದರ್ಜೆಯ ಕಟ್ಟಡ ಹೊಂದುವ ಮೂಲಕ ಮೂಲಭೂತ ಸೌಕರ್ಯ ಹೊಂದಿದ ಶ್ರೇಯಸ್ಸಿಗೆ ಹೆಸರಾದ ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿರುವ ಈ ಸರ್ಕಾರಿ ಎಂಜಿನಿಯರಿAಗ್ ಕಾಲೇಜಿನಲ್ಲಿ ಹೊಸದಾಗಿ, ಪ್ರತ್ಯೇಕವಾಗಿ ಎಂಟೆಕ್ ಕೋರ್ಸ್ ಆರಂಭಿಸಲಾಗುವುದು ಎಂದರು. ಎಂಜಿನಿಯರಿAಗ್ ಓದುವವರಿಗೆ ಮುಂದೇನು ಎನ್ನುವ ಪ್ರಶ್ನೆ ಕಾಡಬಾರದು ಎನ್ನುವ ನಿಟ್ಟಿನಲ್ಲಿ ಯೋಚಿಸಿ ಹೊಸದಾಗಿ ಎಂಟೆಕ್ ಸಹ ಪ್ರಾರಂಭಿಸಲು ಯೋಜಿಸಲಾಗಿದೆ ಎಂದರು.
ಈ ಕಾಲೇಜಿನಲ್ಲಿ ಓದುವವರಿಗೆ ಎಂಜಿನಿಯರಿAಗ್ ಶಿಕ್ಷಣ ಸಿಗುತ್ತದೆ. ಎಂಜಿನಿಯರಿAಗ್, ಐಟಿಐ, ಡಿಪ್ಲೋಮಾ ಸೇರಿದಂತೆ ಇನ್ನೀತರ ಕೋರ್ಸ ಮಾಡುವ ವಿದ್ಯಾರ್ಥಿಗಳಿಗೆ ಬೇಗನೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲಾಭಿವೃದ್ಧಿ ಕೇಂದ್ರಕ್ಕೆ ಇನ್ನು ಹೆಚ್ಚಿನ ಕಸುವು ನೀಡುವ ನಿಟ್ಟಿನಲ್ಲಿ ಚರ್ಚಿಸಿ ಕಾರ್ಯಪ್ರವೃತ್ತರಾಗಲು ಕೊಪ್ಪಳ ಜಿಲ್ಲೆಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಆಹ್ವಾನಿಸಲಾಗಿದೆ ಎಂದರು.
ಇಡೀ ರಾಜ್ಯದಲ್ಲಿಯೇ ದೊಡ್ಡಮಟ್ಟದ ಕೇಂದ್ರವಾಗಬೇಕು ಎನ್ನುವ ಗುರಿಯೊಂದಿಗೆ ಕೊಪ್ಪಳ ಜಿಲ್ಲೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲಾಭಿವೃದ್ಧಿ ಕೇಂದ್ರದ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಇದು ಕಾರ್ಯರೂಪಕ್ಕೆ ಬಂದಲ್ಲಿ ಇಲ್ಲಿ ಪ್ರತಿ ವರ್ಷ 5000 ಜನರು ತರಬೇತಿ ಪಡೆದು ಕೆಲಸ ಪಡೆಯಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಯಲಬುರ್ಗಾ ತಾಲೂಕು ಸಹ ಒಂದಾಗಿದೆ. ನೀರಾವರಿ ಪ್ರದೇಶ ಬಹಳಷ್ಟು ಕಡಿಮೆ ಇದೆ. ಈ ತಾಲೂಕು ವ್ಯಾಪ್ತಿಯಲ್ಲಿ ರೈಲು, ಎನ್‌ಎಚ್ 67 ಸೌಕರ್ಯವಿರುವುದು ಅಭಿವೃದ್ಧಿಗೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಓಡಿಸ್ಸಾ ರಾಜ್ಯದ ಮಾದರಿಯಲ್ಲಿ ಸ್ಕಿಲ್ ಡೆವಲಪಮೆಂಟ್ ಯುನಿವರ್ಸಿಟಿ ಸ್ಥಾಪಿಸುವ ದೂರಗಾಮಿ ಯೋಚನೆ-ಯೋಜನೆಯನ್ನು ತಾವು ಹೊಂದಿರುವುದಾಗಿ ಅವರು ತಿಳಿಸಿದರು.
ಸಮಾರಂಭದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ, ಕೊಪ್ಪಳ ವಿವಿಯ ಉಪ ಕುಲಪತಿ ಡಾ.ಬಿ.ಕೆ.ರವಿ, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ ಜಿ, ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಎಂಜಿನಿಯರಿAಗ್ ಕಾಲೇಜಿನ ಪ್ರಾಚಾರ್ಯರಾದ ವಿರುಪಾಕ್ಷ ಬಾಗೋಡಿ ಹಾಗೂ ಕಾಲೇಜಿನ ಬೋಧಕ ವೃಂದ, ವಿದ್ಯಾರ್ಥಿಗಳು ಇದ್ದರು.

ವಿಟಿಯು ಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಮಹತ್ವದ ಸಭೆ
—
—
ಕೊಪ್ಪಳ ಸೆಪ್ಟೆಂಬರ್ 05 (ಕ.ವಾ.): ಕೊಪ್ಪಳ ಜಿಲ್ಲೆಯಲ್ಲಿನ ಶ್ರೀ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲಾಭಿವೃದ್ಧಿ ಕೇಂದ್ರದಲ್ಲಿ ಸೆಪ್ಟೆಂಬರ್ 4ರಂದು ಮಹತ್ವದ ಸಭೆ ನಡೆಯಿತು.
ವೈದ್ಯಕೀಯ ಶಿಕ್ಷಣ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಆರ್ ಪಾಟೀಲ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ಘನ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಆಯುಕ್ತರು, ಇನ್ನೀತರ ಅಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳ ಭಾಗಿಯಾಗಿ, ಕೊಪ್ಪಳ ಜಿಲ್ಲೆಯಲ್ಲಿನ ಕೌಶಲಾಭಿವೃದ್ಧಿ ಕೇಂದ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಯೋಜನೆಗಳ ನೀಲಿನಕ್ಷೆಯ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.
ಈ ವೇಳೆ ಮಾತನಾಡಿದ ಸಚಿವರು, ಕೊಪ್ಪಳ, ಹೊಸಪೇಟೆ ಹಾಗೂ ಬಳ್ಳಾರಿ ಜಿಲ್ಲೆಗಳ ಸುತ್ತಲಿನ ಪ್ರದೇಶಗಳಲ್ಲಿ ಸಾಕಷ್ಟು ಕೈಗಾರಿಕೆಗಳಿವೆ. ಈ ಎಲ್ಲ ಕೈಗಾರಿಕಾ ಘಟಕಗಳ ಮುಖ್ಯಸ್ಥರೊಂದಿಗೆ ಪತ್ರ ವ್ಯವಹಾರ ನಡೆಸಿ ಅವರೊಂದಿಗೆ ಸಭೆಗೆ ವ್ಯವಸ್ಥೆ ಮಾಡಬೇಕು. ಆಯಾ ಕೈಗಾರಿಕಾ ಘಟಕಗಳಿಗೆ ಯಾವ ಯಾವ ಬಗೆಯ ಮಾನವ ಸಂಪನ್ಮೂಲದ ಅಗತ್ಯವಿದೆ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಿ ಆಯಾ ಘಟಕಗಳ ಮುಖ್ಯಸ್ಥರಿಂದ ಮಾಹಿತಿ ಪಡೆಯಬೇಕು. ಆಯಾ ಕೈಗಾರಿಕಾ ಘಟಕಗಳು ಬಯಸುವಂತೆ ಅಭ್ಯರ್ಥಿಗಳಿಗೆ ಕೌಶಲ ತರಬೇತಿ ನೀಡುವ ವ್ಯವಸ್ಥೆ ಇಲ್ಲಿ ಆಗಬೇಕು. ಇಲ್ಲಿ ಕೌಶಲ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆಯಾ ಕೈಗಾರಿಕಾ ಪ್ರದೇಶಗಳಲ್ಲಿ ನೌಕರಿ ಸಿಗುವ ವ್ಯವಸ್ಥೆ ಕೂಡ ಆಗಬೇಕು. ಇದಕ್ಕೆ ಸಂಬAಧಿಸಿದAತೆ ಕೈಗಾರಿಕಾ ಘಟಕಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮುಂದಿನ ಅಗತ್ಯ ಕ್ರಮ ವಹಿಸಬೇಕು ಎಂದು ಸಚಿವರು ಇದೆ ವೇಳೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಕೊಪ್ಪಳ ಜಿಲ್ಲೆಯಲ್ಲಿನ ಈ ಶ್ರೀ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೌಶಲಾಭಿವೃದ್ಧಿ ಕೇಂದ್ರದ ಬಲವರ್ಧನೆಗೆ ತಾವು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಸಚಿವರು ಹೇಳಿದರು.
ಸಭೆಯಲ್ಲಿ ವಿಟಿಯು ಉಪ ಕುಲಪತಿ ಡಾ.ವಿದ್ಯಾಶಂಕರ ಎಸ್., ಉನ್ನತ ಶಿಕ್ಷಣ ಸಚಿವಾಲಯದ ಆಯುಕ್ತರಾದ ಜಗದೀಶ ಜಿ., ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್, ಕೆಎಸ್‌ಎಸ್‌ಡಿಸಿ ಎಂ.ಡಿ ಅಶ್ವಿನಗೌಡ, ತಳಕಲ್ ಕೌಶಲ್ಯಾಭಿವೃದ್ಧಿ ಕೇಂದ್ರದ ವಿಶೇಷ ಅಧಿಕಾರಿ ಬಸವರಾಜಪ್ಪ ವೈ.ಎಸ್., ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ
ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಾಣೇಶ ಹಾಗೂ ವಿವಿಧ ಕೈಗಾರಿಕಾ ಘಟಕಗಳ ಪ್ರತಿನಿಧಿಗಳು ಮತ್ತು ಇನ್ನೀತರರು ಸಭೆಯಲ್ಲಿ ಭಾಗಿಯಾಗಿದ್ದರು.

Comments are closed.