ಮೀಡಿಯಾ ಕ್ಲಬ್ ಅಧ್ಯಕ್ಷರಾಗಿ ದೇವು ನಾಗನೂರ ಆಯ್ಕೆ
ಕೊಪ್ಪಳ: ಮೀಡಿಯಾ ಕ್ಲಬ್ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ದೇವು ನಾಗನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರದ ಮೀಡಿಯಾ ಕ್ಲಬ್‌ನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.
ಕೊಪ್ಪಳ ಮೀಡಿಯಾ ಕ್ಲಬ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರವೀಂದ್ರ ವಿ.ಕೆ. ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆ ಸಂಬAಧ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಹಿರಿಯ ಪತ್ರಕರ್ತ ದೊಡ್ಡೇಶ ಯಲಿಗಾರ್ ಅವರು ದೇವು ನಾಗನೂರ ಹೆಸರನ್ನು ಸೂಚಿಸಿದರು. ಸಭೆ ಸರ್ವಾನುಮತದ ಒಪ್ಪಿಗೆ ನೀಡಿತು. ನೂತನ ಅಧ್ಯಕ್ಷರನ್ನು ನಿರ್ದೇಶಕರ ತಂಡ ಅಭಿನಂದಿಸಿತು.

Comments are closed.