ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ – ಯು.ಟಿ. ಖಾದರ್

ಗದಗ: ಜನಪ್ರತಿನಿಧಿಗಳಿಂದ ಸಮಾಜದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಮಕ್ಕಳಿಗೆ ಮೌಲ್ಯಾದಾರಿತ ಶಿಕ್ಷಣ ನೀಡುವುದರಿಂದ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದರು. ಬರಹಗಾರರು ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕೇ ವಿನಹಃ ಒಡೆಯುವ ಕೆಲಸ ಮಾಡಬಾರದು ಎಂದು ಯು.ಟಿ. ಖಾದರ್ ಹೇಳಿದರು.
ಅವರು ಮುಸ್ಲಿಮ್ ಲೇಖಕರ ಸಂಘವು ದಿವಂಗತ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಹಾಗೂ ಕನ್ನಡ ಮತ್ತು ಉರ್ದು ಕವಿಗೋಷ್ಠಿಯಲ್ಲಿ ಭಾಗವಹಿಸಿ, ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದರು.
ಗಜೇಂದ್ರಗಡದ ಶ್ರೀ ಜಗದ್ಗುರು ತೋಂಟದಾರ್ಯ ಸಿಬಿಎಸ್‌ಇ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾl ಐ.ಜೆ. ಮ್ಯಾಗೇರಿ (ಕೃತಿ: ʼಜೈಲ್ ಡೈರಿʼ) ಪ್ರಶಸ್ತಿ ಸ್ವೀಕರಿಸಿದರು. ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ
Comments are closed.