ಜ. 16 ರಂದು ಕಾರಟಗಿಯಲ್ಲಿ ಸೌಹಾರ್ದ ಜಾನಪದ ಸಂಭ್ರಮ
ಭಾವೈಕ್ಯತೆಯ ಹಾಡು ಹಾಡೋಣ ಬಾರಾ…
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ ಮತ್ತು ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಅವರು ಘನ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಕಾರಟಗಿ ತಹಶೀಲ್ದಾರ ಎಂ. ಕುಮಾರಸ್ವಾಮಿ, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ, ಕಾರಟಗಿ ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟೆಕಾರ್, ಕಾರಟಗಿ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಸುಧೀರ್ ಎಂ. ಬೆಂಕಿ, ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಾಜ ಅರಳಿ, ಕಾರಟಗಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ದೇವಪ್ಪ ಭಾವಿಕಟ್ಟಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಾರಟಗಿ ಅಧ್ಯಕ್ಷರಾದ ಹನುಮಂತಪ್ಪ ನಾಯಕ್, ಪುರಸಭೆ ಸದಸ್ಯ ಸೋಮಶೇಖರಪ್ಪ ಬೇರಗಿ, ಕಾರಟಗಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಭಾರಿ ಪ್ರಾಚಾರ್ಯರಾದ ನಾಗರಾಜ ಮೈನಳ್ಳಿ ಅವರು ಪಾಲ್ಗೊಳ್ಳುವರು.
ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಡಾ. ಜೀವನಸಾಬ ವಾಲಿಕಾರ ಬಿನ್ನಾಳ ಅವರು “ಜಾನಪದ ಸಾಹಿತ್ಯದಲ್ಲಿ ಸೌಹಾರ್ದತೆ” ವಿಷಯದ ಕುರಿತು ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರು, ಕಲಾವಿದರು ಉಪಸ್ಥಿತರಿರುವರು. ವಿವಿಧ ಕಲಾತಂಡಗಳು ಸಹ ಭಾಗವಿಸಲಿವೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರಾದ ಮಹೆಬೂಬ್ ಕಿಲ್ಲೇದಾರ್ ಹಾಗೂ ರಿಜಿಸ್ಟ್ರಾರ್ ಎನ್.ನಮ್ರತ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Friendly folk festival in Karatagi on Jan. 16
Comments are closed.